ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣಗೆ ಜಾಮೀನು ಮಂಜೂರು

ಬೆAಗಳೂರು, ಮೇ ೧೩: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೆöÊವ್ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಪ್ರಕರಣದ ಕುರಿತು ವಾದ ವಿವಾದವನ್ನು ನ್ಯಾಯಾಧೀಶರು ಆಲಿಸಿದರು. ಆರೋಪಿ ರೇವಣ್ಣ ರೂ. ೫ ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು. ತಮ್ಮ ಪಾಸ್‌ಪೋರ್ಟ್ ಅನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸಬೇಕು. ನ್ಯಾಯಾಲಯದ ಲಿಖಿತ ಅನುಮತಿ ಪಡೆಯದೇ ರಾಜ್ಯದ ಗಡಿ ದಾಟುವಂತಿಲ್ಲ. ಪ್ರಾಸಿಕ್ಯೂಷನ್ ಸಾಕ್ಷಿ, ದೂರುದಾರರು ಅಥವಾ ಸಂತ್ರಸ್ತರಿಗೆ ಬೆದರಿಕೆ ಹಾಕಬಾರದು. ತನಿಖಾಧಿಕಾರಿ ಸೂಚಿಸಿದಾಗ ತನಿಖೆಗೆ ಹಾಜರಾಗಬೇಕು. ಮುಂದಿನ ಆದೇಶದವರೆಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಕೆ.ಆರ್. ನಗರ ತಾಲೂಕು ಅಥವಾ ಸಂತ್ರಸ್ತೆಯ ಖಾಯಂ ನಿವಾಸದತ್ತ ಸುಳಿಯುವಂತಿಲ್ಲ ಎಂದು ನ್ಯಾಯಾಧೀಶರು ಷರತ್ತು ವಿಧಿಸಿದ್ದಾರೆ.

ಪೊಲೀಸ್ ಎನ್‌ಕೌಂಟರ್‌ಗೆ ಮೂವರು ನಕ್ಸಲರು ಬಲಿ

ಗಡ್ಚಿರೋಲಿ, ಮೇ ೧೩: ಮಹಾರಾಷ್ಟçದ ಗಡ್ಚಿರೋಲಿ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಧ್ವಂಸಕ ಚಟುವಟಿಕೆಗಳನ್ನು ನಡೆಸುವ ಉದ್ದೇಶದಿಂದ ನಕ್ಸಲೀಯರ ಪೆರಿಮಿಲಿ ದಳದ ಕೆಲವು ಸದಸ್ಯರು ಭಮ್ರಗಡ ತಾಲೂಕಿನ ಕಾಟ್ರಘಟ್ಟ ಗ್ರಾಮದ ಬಳಿ ಅರಣ್ಯದಲ್ಲಿ ಬೀಡುಬಿಟ್ಟ ಬಗ್ಗೆ ಗುಪ್ತಚರ ಮಾಹಿತಿ ಬಂದಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ನೀಲೋತ್ಪಾಲ್ ಹೇಳಿದ್ದಾರೆ. ಗಡ್ಚಿರೋಲಿ ಪೊಲೀಸರ ವಿಶೇಷ ಕೊಂಬ್ಯಾಟ್ ವಿಭಾಗವಾದ ಸಿ-೬೦ ಕಮಾಂಡೋಗಳ ಎರಡು ತುಕಡಿಗಳನ್ನು ತಕ್ಷಣವೇ ಈ ಪ್ರದೇಶದಲ್ಲಿ ಶೋಧಕ್ಕಾಗಿ ಕಳುಹಿಸಲಾಗಿತ್ತು. ತಂಡಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ನಕ್ಸಲಿಯರು ಮನಬಂದAತೆ ಗುಂಡು ಹಾರಿಸಿದರು, ಅದಕ್ಕೆ ಸಿ-೬೦ ಸಿಬ್ಬಂದಿ ಪ್ರತಿದಾಳಿ ನಡೆಸಿದರು. ಗುಂಡಿನ ದಾಳಿ ನಿಲ್ಲಿಸಿದ ನಂತರ, ಸ್ಥಳದಲ್ಲಿ ಪುರುಷ ಮತ್ತು ಇಬ್ಬರು ಮಹಿಳಾ ನಕ್ಸಲಿಯರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರಲ್ಲಿ ಒಬ್ಬರು ಪೆರಿಮಿಲಿ ದಳದ ಉಸ್ತುವಾರಿ ಮತ್ತು ಕಮಾಂಡರ್ ವಾಸು ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸ್ಥಳದಲ್ಲಿ ಎಕೆ-೪೭ ರೈಫಲ್, ಕಾರ್ಬೈನ್, ಐಎಸ್‌ಎಸ್ ರೈಫಲ್, ನಕ್ಸಲ್ ಸಾಹಿತ್ಯ ಮತ್ತು ವಸ್ತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿರುಗಾಳಿ, ಮಳೆಗೆ ಕಬ್ಬಿಣದ ಹೋರ್ಡಿಂಗ್ ಕುಸಿತ:೫೪ ಮಂದಿಗೆ ಗಾಯ

ಮುಂಬೈ, ಮೇ ೧೩: ಬಿರುಗಾಳಿ, ಮಳೆಗೆ ಕಬ್ಬಿಣದ ಹೋರ್ಡಿಂಗ್‌ವೊAದು ಪೆಟ್ರೋಲ್ ಪಂಪ್ ಮೇಲೆ ಕುಸಿದು ಬಿದ್ದ ಪರಿಣಾಮ ೫೪ ಜನರು ಗಾಯಗೊಂಡಿರುವ ಘಟನೆ ವಾಣಿಜ್ಯ ನಗರಿಯ ಘಾಟ್ಕೋಪರ್ ಪ್ರದೇಶದಲ್ಲಿ ಸೋಮವಾರ ನಡೆದಿದೆ. ಪಾಂತ್ನಾಗರ್‌ನ ಈಸ್ಟರ್ನ್ ಎಕ್ಸ್ಪ್ರೆಸ್ ಹೆದ್ದಾರಿಯ ಪೊಲೀಸ್ ಗ್ರೌಂಡ್ ಪೆಟ್ರೋಲ್ ಪಂಪ್‌ನಲ್ಲಿ ಈ ಘಟನೆ ನಡೆದಿದೆ. ಕೂಡಲೇ ಮುಂಬೈ ಅಗ್ನಿಶಾಮಕ ದಳ ಮತ್ತು ಇತರ ಏಜೆನ್ಸಿಗಳು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಏಳು ಜನರನ್ನು ರಾಜವಾಡಿ ಆಸ್ಪತ್ರೆಗೆ ರವಾನಿಸಲಾಗಿದೆ.

ಒಂಟೆ ಸವಾರಿ ಬಳಿಕ ಕಾಣೆಯಾಗಿದ್ದ ಮಕ್ಕಳು ಶವವಾಗಿ ಪತ್ತೆ!

ವಿಜಯಪುರ, ಮೇ ೧೩: ವಿಜಯಪುರದ ಚಾಬಕಸಾಬ್ ದರ್ಗಾದ ಬಳಿ ನಿನ್ನೆ ಒಂಟೆ ಸವಾರಿ ಮಾಡಿದ್ದ ಮೂವರು ಮಕ್ಕಳು ನಂತರ ಕಾಣೆಯಾಗಿದ್ದರು. ಆದರೆ ಇಂದು ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ವಿಜಯನಗರದ ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಶವಗಳು ಪತ್ತೆಯಾಗಿದ್ದು ಮೃತರನ್ನು ಗದಗ ಮೂಲದ ೯ ವರ್ಷದ ಅನುಷ್ಕಾ ಅನಿಲ ದಹಿಂಡೆ ೭ ವರ್ಷದ ವಿಜಯ ಅನಿಳ ದಹಿಂಡೆ ಮತ್ತು ವಿಜಯಪುರ ಮೂಲದ ೭ ವರ್ಷದ ಮಿಹಿರ್ ಶ್ರೀಕಾಂತ ಜಾನಗೌಳಿ ಎಂದು ಗುರುತಿಸಲಾಗಿದೆ. ಬೇಸಿಗೆ ರಜೆಗಾಗಿ ಗದಗ ಮೂಲದ ಅನುಷ್ಕಾ ಮತ್ತು ವಿಜಯ ವಿಜಯಪುರದಲ್ಲಿರುವ ಮಾವನ ಮನೆಗೆ ಬಂದಿದ್ದರು. ನಿನ್ನೆ ಬೆಳಿಗ್ಗೆ ೧೦ ಗಂಟೆ ಸುಮಾರಿಗೆ ವಿಜಯಪುರದ ಚಾಬಕಸಾಬ್ ದರ್ಗಾದ ಬಳಿಯ ಮನೆಯ ಮುಂದೆ ಒಂಟೆ ಸವಾರಿ ಮಾಡಿದ್ದಾರೆ. ನಂತರ ಮಕ್ಕಳು ಕಾಣೆಯಾಗಿದ್ದರು. ಇಂದು ಮಕ್ಕಳ ಶವಗಳು ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಪತ್ತೆಯಾಗಿದ್ದು, ಯುಜಿಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಎದುರು ಮೃತ ಮಕ್ಕಳ ಪೋಷಕರಿಂದ ಪ್ರತಿಭಟನೆ ಮಾಡಿದರು. ಸಂಸ್ಕರಣಾ ಘಟಕದಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿಲ್ಲ. ತ್ಯಾಜ್ಯ ಘಟಕಕ್ಕೆ ತಡೆಗೋಡೆ ಅಥವಾ ಬೇಲಿ ಹಾಕಿಲ್ಲ. ಹೀಗಾಗಿ ಮೂವರು ಮಕ್ಕಳು ನೀರಲ್ಲಿ ಮುಳುಗಿ ಮೃತಪಟ್ಟಿವೆ. ಮಹಾನಗರ ಪಾಲಿಕೆಯ ಅಧಿಕಾರಿಗಳು, ಸಿಬ್ಬಂದಿಗಳು ಇದಕ್ಕೆ ಕಾರಣವೆಂದು ಮಕ್ಕಳ ಕುಟುಂಬಸ್ಥರು ಆರೋಪಿಸಿದ್ದಾರೆ.