ಮಡಿಕೇರಿ, ಮೇ ೧೪: ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜು ವತಿಯಿಂದ ಪ್ರಥಮ ಪಿಯುಸಿಗೆ ಅರ್ಜಿ ಆಹ್ವಾನಿಸಲಾಗಿದೆ.

ಉಚಿತ ಊಟ, ವಸತಿ, ಸಿಇಟಿ, ನೀಟ್ ಕೋಚಿಂಗ್ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಹತ್ತಿರದ ಕೊಡಗು ಜಿಲ್ಲೆಯ ಯಾವುದೇ ಮೊರಾರ್ಜಿ ವಸತಿ ಕಾಲೇಜುಗಳಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ತಾ. ೨೨ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಅಟಲ್ ಬಿಹಾರಿ ವಾಜಪೇಯಿ ಕಾಲೇಜು, ಭಾಗಮಂಡಲ ಲೋಕೇಶ್ ದೂ. ೯೬೧೧೩೦೭೬೪೬ನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.