ಸುಂಟಿಕೊಪ್ಪ, ಮೇ ೧೪: ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನ ೨೦೨೪-೨೫ನೇ ಸಾಲಿನ ಶೈಕ್ಷಣಿಕ ಅವಧಿಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜು ದಾಖಲಾತಿಗಾಗಿ ಅರ್ಜಿಗಳನ್ನು ವಿತರಿಸಲಾಗುತ್ತಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಎ.ಎಸ್. ಶ್ರೀಲತಾ ತಿಳಿಸಿದ್ದಾರೆ. ಕಾಲೇಜಿನಲ್ಲಿ ಕಲಾ (ಎಚ್‌ಇಪಿಎಸ್) ವಾಣಿಜ್ಯ (ಹೆಚ್‌ಇಬಿಎ) ಮತ್ತು ವಿಜ್ಞಾನ (ಪಿಸಿಎಂಬಿ) ವಿಭಾಗಗಳಿದ್ದು, ೨೦೨೩-೨೪ನೇ ಸಾಲಿನಲ್ಲಿ ಕಲಾ ವಿಭಾಗದಲ್ಲಿ ಶೇ. ೯೪, ವಾಣಿಜ್ಯ ವಿಭಾಗದಲ್ಲಿ ಶೇ. ೯೪ ಮತ್ತು ವಿಜ್ಞಾನ ವಿಭಾಗದಲ್ಲಿ ಶೇ. ೧೦೦ ಫಲಿತಾಂಶ ಬಂದಿದೆ. ಪ್ರಸ್ತುತ ನುರಿತ ಮತ್ತು ಅನುಭವಿ ಉಪನ್ಯಾಸಕರುಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಕಾಲೇಜಿನಲ್ಲಿ ಸುಸಜ್ಜಿತ ವಿಜ್ಞಾನ ಪ್ರಯೋಗಾಲಯಗಳು ಇವೆ. ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ದೊರಕಲಿದೆ. ಆಸಕ್ತ ವಿದ್ಯಾರ್ಥಿಗಳು ಈ ಸದುಪಯೋಗವನ್ನು ಪಡೆದುಕೊಳ್ಳಲು, ಹೆಚ್ಚಿನ ಮಾಹಿತಿಗಾಗಿ ೮೦೭೩೮೮೮೫೨೧, ೮೨೯೬೭೯೬೯೭೧ ಸಂಪರ್ಕಿಸುವAತೆ ಪ್ರಾಂಶುಪಾಲೆ ತಿಳಿಸಿದ್ದಾರೆ.