ಮಡಿಕೇರಿ, ಮೇ ೧೪: ವೀರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಅರ್ಥಶಾಸ್ತç ವಿಭಾಗ ಮತ್ತು ಅಂತರಿಕ ಗುಣಮಟ್ಟ ಭರವಸಾ ಕೋಶದ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ “ಜೀವನದ ಯಶಸ್ವಿನ ಗುಟ್ಟು” ಎಂಬ ವಿಚಾರದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಮುಂಬೈ ಐ.ಐ.ಟಿ.ಯ ನಿವೃತ್ತ ಪ್ರಾಧ್ಯಾಪಕ ಡಾ. ಕುಮಾರ್ ಭಾಗವಹಿಸಿದ್ದರು. ಪ್ರತಿಯೊಬ್ಬರಿಗೂ ಜೀವನದಲ್ಲಿ ಯಶಸ್ಸು ಪಡೆಯಬೇಕು ಎಂಬ ಆಸೆ ಇರುತ್ತದೆ. ಜೀವನದಲ್ಲಿ ಯಶಸ್ಸು ಪಡೆಯಬೇಕಾದರೆ ಪ್ರತಿಯೊಬ್ಬರು ಆತ್ಮವಿಶ್ವಾಸ, ಶಿಸ್ತು, ಉತ್ತಮ ಅಭ್ಯಾಸ, ಒಳ್ಳೆಯ ಪುಸ್ತಕಗಳ ಓದುವಿಕೆ, ಒಳ್ಳೆಯವರ ಒಡನಾಟ ಇಟುಕೊಳ್ಳಬೇಕು. ಆಗ ಜೀವನದಲ್ಲಿ ಯಶಸ್ಸುಗಳಿಸಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಯಾನಂದ ಕೆ.ಸಿ. ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಬಸವರಾಜು ಕೆ., ಅರ್ಥಶಾಸ್ತç ವಿಭಾಗದ ಉಪನ್ಯಾಸಕಿ ಯರಾದ ವೀಣಾ ಮತ್ತು ಗೀತಾ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರರು ಉಪಸ್ಥಿತರಿದ್ದರು.