ಮಡಿಕೇರಿ, ಮೇ ೧೫: ರಕ್ತದಾನಕ್ಕಿಂತ ಮಿಗಿಲಾದ ಮತ್ತೊಂದು ದಾನವಿಲ್ಲ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಹೇಳಿದರು.

ಮಡಿಕೇರಿ ನಗರದ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಕೊಡಗು ಜಿಲ್ಲಾ ಓSUI ಘಟಕದ ಅಧ್ಯಕ್ಷ ರಾಶೀದ್ ಅಯ್ಯಂಗೇರಿ ಮತ್ತು ಪದಾಧಿಕಾರಿಗಳು ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಸತ್ತ ವ್ಯಕ್ತಿಯನ್ನು ಬದುಕಿಸಲು ಯಾರಿಂದಲೂ ಸಾಧ್ಯವಿಲ್ಲ.ಆದರೆ ಸಾಯುವ ವ್ಯಕ್ತಿಯನ್ನು ರಕ್ತದಾನದ ಮೂಲಕ ಬದುಕಿಸುವ ಪುಣ್ಯ ಕೆಲಸವನ್ನು ನಾವು ಮಾಡಬಹುದು ಎಂದರು.

ಕೊಡಗು ವೈದ್ಯಕೀಯ ಕಾಲೇಜಿನ ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಡಾ.ಕರುಂಬಯ್ಯ ಮಾತನಾಡಿ, ದೇಶದಲ್ಲಿ ಚಿಕಿತ್ಸೆಗೆ ರಕ್ತದ ಕೊರತೆ ಇದ್ದು ಸಂಘ ಸಂಸ್ಥೆಗಳು ರಕ್ತದಾನ ಶಿಬಿರದ ಮೂಲಕ ರಕ್ತ ಸಂಗ್ರಹಣೆಗೆ ಸಹಕರಿಸಲು ಕೋರಿದರು. ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಯುವ ಸಮೂಹ ಮುಂದೆ ಬರಬೇಕು ಎಂದು ವಿನಂತಿಸಿದರು.