ಮಡಿಕೇರಿ, ಮೇ ೧೬: ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡೆಂಗ್ಯೂ ಹಾಗೂ ಇತರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಜಿಲ್ಲಾ ಸರ್ವೇಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪೂರ್ವ ಮುಂಗಾರು ಸಂದರ್ಭದಲ್ಲಿ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

‘ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ. ಸತೀಶ್ ಕುಮಾರ್ ಅವರು ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ ೪೨ ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ ನಾಯಿ ಕಡಿತಕ್ಕೆ ೩,೧೪೪, ಹಾವು ಕಡಿತಕ್ಕೆ ೮೯ ಮಂದಿ, ಬೇಧಿ(ಡಯೇರಿಯಾ) ಪ್ರಕರಣಗಳು ೧,೪೮೬, ಕಾಲರಾ ೨ ಪ್ರಕರಣ, ಮಲೇರಿಯಾ ೨ ಪ್ರಕರಣಗಳು ವರದಿಯಾಗಿದ್ದು, ಎಲ್ಲರೂ ಸಕಾಲದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದರು.’

ಡೆಂಗ್ಯೂ ಜ್ವರವು ವೈರಸ್‌ನಿಂದ ಉಂಟಾಗುವ ಖಾಯಿಲೆಯಾಗಿದ್ದು, ಈಡೀಸ್ ಈಜಿಪ್ಟೆöÊ ಸೊಳ್ಳೆ ಕಚ್ಚುವಿಕೆಯಿಂದ ಹರಡುತ್ತದೆ. ಈಡಿಸ್ ಸೊಳ್ಳೆಯು ಸ್ವಚ್ಛ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತವೆ. ಅವು ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ತೀವ್ರ ಜ್ವರ ಮತ್ತು ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸ ಖಂಡ-ಕೀಲುಗಳಲ್ಲಿ ವಿಪರೀತ ನೋವು ಡೆಂಗ್ಯೂ ಜ್ವರದ ಲಕ್ಷಣವಾಗಿದೆ.

ತೀವ್ರ ಸ್ಥಿತಿಯ ಹಂತದಲ್ಲಿ ಬಾಯಿ, ಮೂಗು, ವಸಡುಗಳಲ್ಲಿ ರಕ್ತಸ್ರಾವ, ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತು ಕಂಡು ಬರುತ್ತದೆ. ಆಶಾ ಕಾರ್ಯಕರ್ತರು ಪ್ರತಿ ೧೫ ದಿನಗಳಿಗೊಮ್ಮೆ ತಮ್ಮ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ ಈಡಿಸ್ ಸೊಳ್ಳೆ ಲಾರ್ವಾ ಸೋರ್ಸ್ ರಿಡಕ್ಷನ್ ಕೈಗೊಳ್ಳುತ್ತಿದ್ದಾರೆ.

ನಗರ ಪಟ್ಟಣ ವ್ಯಾಪ್ತಿಯಲ್ಲಿ ಪ್ರತೀ ಮಾಹೆಯ ಮೊದಲ ಮತ್ತು ಮೂರನೇ ವಾರ ಆಯಾಯ ತಾಲೂಕಿನ ಎಲ್ಲಾ ಆರೋಗ್ಯ ಸಹಾಯಕರನ್ನು ನಿಯೋಜಿಸಿಕೊಂಡು ಮನೆಗಳಲ್ಲಿ ಈಡಿಸ್ ಸೊಳ್ಳೆ ಲಾರ್ವಾ ಸೋರ್ಸ್ ರಿಡಕ್ಷನ್ ಕೈಗೊಳ್ಳುತ್ತಿದ್ದಾರೆ ಎಂದು ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿದರು.

ವರದಿಯಾದ ಡೆಂಗ್ಯೂ ಪ್ರಕರಣಗಳ ಸಂಬAಧಿತ ಗ್ರಾಮಗಳಲ್ಲಿ ಮನೆಗಳ ಸರ್ವೆ ಮಾಡಿ ಲಾರ್ವೆ ಪತ್ತೆ ಮಾಡಿ ನಾಶಪಡಿಸಲಾಗಿದೆ. ಖಾಸಗಿ ಆಸ್ಪತ್ರೆ, ಲ್ಯಾಬ್‌ಗಳಿಂದಲೂ ವರದಿ ಸಂಗ್ರಹಿಸಿ ಜ್ವರ ಪ್ರಕರಣ ಪತ್ತೆ ಮಾಡಲಾಗುತ್ತಿದೆ. ಸೆಂಟಿನೆಲ್ ಪ್ರಯೋಗಾಲಯದಲ್ಲಿ ಎಲೈಜಾ ವಿಧಾನದಲ್ಲಿ ಖಚಿತಪಡಿಸಲಾಗುತ್ತಿದೆ.ರ‍್ಯಾಪಿಡ್ ವಿಧಾನದಲ್ಲಿ ಪಾಸಿಟಿವ್ ಬಂದರೆ ಅದು ಶಂಕಿತ ಡೆಂಗ್ಯೂ ಮಾತ್ರವಾಗಿದ್ದು, ಆ ಗ್ರಾಮದಲ್ಲಿ ಪುನಃ ಸರ್ವೆ ಮಾಡಿ ಸೆಂಟಿನೆಲ್ ಲ್ಯಾಬ್‌ನಲ್ಲಿ ಖಚಿತಪಡಿಸಿಕೊಳ್ಳಲಾಗುತ್ತಿದೆ. ಶಂಕಿತ-ಖಚಿತ ಪ್ರಕರಣಗಳು ವರದಿಯಾದ ಎಲ್ಲಾ ಗ್ರಾಮಗಳಲ್ಲಿ ಲಾರ್ವಲ್ ಸರ್ವೆ ಮತ್ತು ಜ್ವರ ಸಮೀಕ್ಷೆ ನಡೆಸಲಾಗಿದೆ ಎಂದು ವಿವರಿಸಿದರು.

ಡೆಂಗ್ಯೂ ಜ್ವರ ಎಲೈಜಾ ವಿಧಾನದಲ್ಲಿ ಪಾಸಿಟಿವ್ ಎಂದು ವರದಿಯಾದಾಗ ಮಾತ್ರ ಅದು ಖಚಿತ ಡೆಂಗ್ಯೂ ರ‍್ಯಾಪಿಡ್ ಕಿಟ್ ವಿಧಾನದಲ್ಲಿ ಪಾಸಿಟಿವ್ ಎಂದು ಕಂಡುಬAದರೆ ಅದು ಶಂಕಿತ ಮಾತ್ರ) ಎಲೈಜಾ ವಿಧಾನದ ಪರೀಕ್ಷೆ ಡಿಹೆಚ್‌ಓ ಕಚೇರಿಯ ಸೆಂಟಿನೆಲ್ ಲ್ಯಾಬ್‌ನಲ್ಲಿ ಮಾತ್ರ ಇದೆ. ಖಚಿತಪಡಿಸಿಕೊಳ್ಳಲು ಸ್ಯಾಂಪಲ್‌ಗಳನ್ನು ಅಲ್ಲಿಗೆ ಕಳಿಸಬೇಕು. ಪ್ಲೇಟ್‌ಲೆಟ್ ಕಡಿಮೆ ಇದ್ದು ರ‍್ಯಾಪಿಡ್ ಕಾರ್ಡ್ ವಿಧಾನದಲ್ಲಿ ಪಾಸಿಟಿವ್ ಎಂದು ವರದಿಯಾಗಿದ್ದರೂ ಎಲೈಜಾ ವಿಧಾನದಲ್ಲಿ ಪರೀಕ್ಷೆಯಾಗಿ ಪಾಸಿಟಿವ್ ಎಂದು ವರದಿಯಾಗಿಲ್ಲದಿದ್ದರೆ ಅದನ್ನು ಶಂಕಿತ ಡೆಂಗ್ಯೂ ಎಂದಷ್ಟೇ ನಮೂದಿಸಲಾಗುವುದು ಎಂದರು.

ಜಿ.ಪA.ಸಿಇಒ ವರ್ಣಿತ್ ನೇಗಿ ಅವರು ಜಿಲ್ಲೆಯ ಎಲ್ಲೆಡೆ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸುವಂತೆ ನಿರ್ದೇಶನ ನೀಡಿದರು.

ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಸಮಗ್ರ ರೋಗಗಳ ಕಣ್ಗಾವಲು ಘಟಕದ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಬಿ.ಎಲ್. ಶ್ರೀನಿವಾಸ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ರೇಣುಕಾ ದೇವಿ, ವಿವಿಧ ಇಲಾಖೆ ಅಧಿಕಾರಿಗಳು ಹಲವು ಮಾಹಿತಿ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.