ಮಡಿಕೇರಿ, ಮೇ ೧೬: ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಧನಂಜಯ್ ಸರ್ಜಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚುನಾವಣೆಯಲ್ಲಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಎರಡು ಅಭ್ಯರ್ಥಿಗಳನ್ನು ಗೆಲ್ಲಿಸಲು ಪಕ್ಷದಿಂದ ಜಿಲ್ಲಾ ಸಂಚಾಲಕರು ಮತ್ತು ತಾಲೂಕು ಸಂಚಾಲಕರುಗಳನ್ನು ನೇಮಿಸಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಿಗೆ ಪ್ರಮುಖರನ್ನು ನೇಮಿಸುವಂತೆ ತೀರ್ಮಾನಿಸಲಾಯಿತು

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಶಿವಮೊಗ್ಗ ವಿಧಾನ ಪರಿಷತ್ತು ಸದಸ್ಯ ಡಿ.ಎಸ್. ಅರುಣ್, ರಾಜ್ಯ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಡಾ. ಬಿ.ಸಿ. ನವೀನ್ ಕುಮಾರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ. ಲೋಕೇಶ್, ಜಿಲ್ಲಾ ಉಪಾಧ್ಯಕ್ಷರುಗಳಾದ ಕಾಂಗೀರ ಸತೀಶ್, ಮಾದಪ್ಪ ವಕ್ತರಾರಾದ ಬಿ.ಕೆ. ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಕನ್ನಿಕೆ, ಮಡಿಕೇರಿ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಗ್ರಾಮಾಂತರ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಮಹಿಳಾ ಮೋರ್ಚಾದ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಎಸ್.ಸಿ. ಮೋರ್ಚಾದ ಅಧ್ಯಕ್ಷ ಮೊಗೇರ ರವಿ, ಮಂಡಲ ಪ್ರಧಾನ ಕಾರ್ಯದರ್ಶಿ ಜಗದೀಶ್, ಕವನ್, ಅಜಿತ್ ಕರುಂಬಯ್ಯ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು