ಮಡಿಕೇರಿ, ಮೇ ೧೮ : ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈಋತ್ಯ ಪದವೀಧರರ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆ ಸಂಬAಧ ಭಾರತ ಚುನಾವಣಾ ಆಯೋಗವು ಹಿರಿಯ ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿ ಆದೇಶಿಸಿದೆ.
ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರಕ್ಕೆ (ಕೊಡಗು ಜಿಲ್ಲೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ) ಚುನಾವಣಾ ವೀಕ್ಷಕರಾಗಿ ಅನಿಲ್ ಕುಮಾರ್ ಟಿ.ಕೆ, ಸಹಾಯಕ ಅಧಿಕಾರಿಯಾಗಿ ಮೈಸೂರು ಜಿಲ್ಲೆ ತೋಟಗಾರಿಕೆ ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕರ ಕಚೇರಿಯ ಉಪ ನಿರ್ದೇಶಕ ರುದ್ರೇಶ್ ಕೆ. ದೂ. ಸಂ. ೯೯೬೪೧೭೪೧೦೭, ೭೨೦೪೦೬೪೫೬೫.
ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ (ಕೊಡಗು ಜಿಲ್ಲೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ) ಹರ್ಷ ಗುಪ್ತ ಅವರನ್ನು ಚುನಾವಣಾ ವೀಕ್ಷಕರಾಗಿ ಹಾಗೂ ಸಹಾಯಕ ಅಧಿಕಾರಿಯಾಗಿ ಮೈಸೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಎಂ.ಡಿ. ಸುದರ್ಶನ್ ಅವರನ್ನು ನೇಮಕ ಮಾಡಿದೆ. ದೂ.ಸಂ.೯೪೪೮೨೪೪೩೪೦, ೭೨೦೪೨೯೪೫೬೫.
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ (ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆ)ಕ್ಕೆ ಡಾ. ರವಿಶಂಕರ್ ಅವರನ್ನು ಚುನಾವಣಾ ವೀಕ್ಷಕರಾಗಿ ಹಾಗೂ ಸಹಾಯಕ ಅಧಿಕಾರಿಯಾಗಿ ಮೈಸೂರು ನಗರದ ಅಬಕಾರಿ ಉಪ ಆಯುಕ್ತ ಎಸ್.ನಾಗರಾಜಪ್ಪ ಅವರನ್ನು ನೇಮಕ ಮಾಡಿದೆ. ದೂ. ೯೪೪೯೫೯೭೧೭೮, ೭೨೦೪೨೧೪೫೬೫ ನ್ನು ಸಂಪರ್ಕಿಸಬಹುದು.
ಮೂರು ಕ್ಷೇತ್ರಗಳ ಚುನಾವಣಾ ವೀಕ್ಷಕರು ಈಗಾಗಲೇ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ ಸಂಬAಧಪಟ್ಟ ಕ್ಷೇತ್ರಗಳ ಚುನಾವಣಾ ಕೆಲಸ ಕಾರ್ಯಗಳ ವೀಕ್ಷಣೆ ನಡೆಸುತ್ತಿದ್ದಾರೆ. ಈ ಚುನಾವಣಾ ವೀಕ್ಷಕರನ್ನು ಭೇಟಿ ಮಾಡಲು, ಸಂಪರ್ಕಿಸಲು ದೂರವಾಣಿ ಸಂಖ್ಯೆ ೭೨೦೪೦೬೪೫೬೫, ೭೨೦೪೨೯೪೫೬೫ ಮತ್ತು ೭೨೦೪೨೧೪೫೬೫ ಗೆ ಕರೆ ಮಾಡಬಹುದು ಎಂದು ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಪದವೀಧರರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ಜಿ.ಸಿ.ಪ್ರಕಾಶ್ ಅವರು ತಿಳಿಸಿದ್ದಾರೆ.