ರಾಜ್ಯಸಭಾ ಸದಸ್ಯೆ ಮೇಲೆ ಹಲ್ಲೆ ಪ್ರಕರಣ - ಕೇಜ್ರಿವಾಲ್ ಪಿ.ಎ. ವಿಚಾರಣೆಗೆ ಗೈರು
ನವದೆಹಲಿ, ಮೇ ೧೭: ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬAಧಿಸಿದAತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಶುಕ್ರವಾರ ರಾಷ್ಟಿçÃಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯೂ) ಮುಂದೆ ವಿಚಾರಣೆಗೆ ಗೈರಾಗಿದ್ದಾರೆ. ಎನ್‌ಸಿಡಬ್ಲ್ಯು ಶುಕ್ರವಾರ ಬೆಳಿಗ್ಗೆ ೧೧ ಗಂಟೆಗೆ ತಮ್ಮ ಮುಂದೆ ಹಾಜರಾಗುವಂತೆ ಬಿಭವ್ ಕುಮಾರ್‌ಗೆ ಸಮನ್ಸ್ ನೀಡಿತ್ತು. ಆಯೋಗದ ತಂಡ, ಗುರುವಾರ ಬಿಭವ್ ಕುಮಾರ್ ಅವರ ನಿವಾಸಕ್ಕೆ ನೋಟೀಸ್ ನೀಡಲು ಹೋಗಿದ್ದರು. ಆದರೆ ಅವರು ಮನೆಯಲ್ಲಿ ಇರಲಿಲ್ಲ ಎಂದು ಎನ್‌ಸಿಡಬ್ಲ್ಯೂ ಮುಖ್ಯಸ್ಥೆ ರೇಖಾಶರ್ಮಾ ಹೇಳಿದ್ದಾರೆ. ಬಿಭವ್ ಕುಮಾರ್ ಅವರ ಪತ್ನಿ ನೋಟೀಸ್ ಸ್ವೀಕರಿಸಲು ನಿರಾಕರಿಸಿದರು.
ಪೆನ್‌ಡ್ರೆöÊವ್ ಪ್ರಕರಣ - ೪ ಸಚಿವರ ಹೆಸರು ಬಹಿರಂಗಗೊಳಿಸಿದ ಜೆಡಿಎಸ್
ಬೆಂಗಳೂರು, ಮೇ ೧೭: ರಾಜ್ಯದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ ಪೆನ್‌ಡ್ರೆöÊವ್ ಪ್ರಕರಣಕ್ಕೆ ಸಂಬAಧಿಸಿದAತೆ ಬಿಜೆಪಿ ನಾಯಕ ದೇವರಾಜೇಗೌಡ ಆರೋಪದ ಬೆನ್ನಲ್ಲೇ ‘ಪೆನ್‌ಡ್ರೆöÊವ್ ಗ್ಯಾಂಗ್' ಎಂದು ೪ ಸಚಿವರ ಹೆಸರುಗಳನ್ನು ಜೆಡಿಎಸ್ ಬಹಿರಂಗಗೊಳಿಸಿದೆ. ಬಿಜೆಪಿ ನಾಯಕ ದೇವರಾಜೇಗೌಡ ಆರೋಪದ ಬೆನ್ನಲ್ಲೇ ಜೆಡಿಎಸ್ ಟ್ವೀಟ್ ಮಾಡಿದ್ದು, ಶಿವಕುಮಾರ್ ಪೆನ್‌ಡ್ರೆöÊವ್ ಗ್ಯಾಂಗ್ ಎಂದು ನಾಲ್ವರು ಸಚಿವರುಗಳ ಹೆಸರುಗಳನ್ನು ಬಹಿರಂಗಪಡಿಸಿದೆ. ಟ್ವೀಟ್‌ನಲ್ಲಿ, ‘೧. ಡಿಸಿಎಂ ಡಿ.ಕೆ. ಶಿವಕುಮಾರ್, ೨. ಕೃಷಿ ಸಚಿವ ಚೆಲುವರಾಯಸ್ವಾಮಿ, ೩. ಕಂದಾಯ ಸಚಿವ ಕೃಷ್ಣಭೈರೇಗೌಡ, ೪. ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ಲಸ್ ಇನ್ನೂ ಒಬ್ಬ ಸಚಿವ ಹಾಗೇ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ. ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ? ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದು. ಈ ಸಂಚು ಸಾಕಾರಗೊಳಿಸಲು ಸಿಡಿ ಶಿವಕುಮಾರ್ ಸಾಹೇಬರು ವಕೀಲರಾದ ದೇವರಾಜೇಗೌಡರಿಗೆ ಆಫರ್ ಮಾಡಿದ ಮೊತ್ತ ಬರೋಬ್ಬರಿ ೧೦೦ ಕೋಟಿ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದೆ. ಪೆನ್‌ಡ್ರೆöÊವ್ ಪ್ರಕರಣದ ಬಗ್ಗೆ ವಕೀಲ ದೇವರಾಜೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. ಪೆನ್‌ಡ್ರೆöÊವ್ ರೆಡಿ ಮಾಡಿದ್ದೇ ಡಿ.ಕೆ. ಶಿವಕುಮಾರ್. ಹ್ಯಾಂಡಲ್ ಮಾಡಲು ನಾಲ್ವರು ಸಚಿವರ ಸಮಿತಿ ರಚಿಸಿದ್ದರು. ಅಲ್ಲದೇ ಪೆನ್‌ಡ್ರೆöÊವ್ ಹಂಚಿಕೆ ಮಾಡಿದ್ದು ಕುಮಾರಸ್ವಾಮಿ ಎಂದು ಹೇಳಲು ನನಗೆ ೧೦೦ ಕೋಟಿ ಆಫರ್ ನೀಡಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.
ಪ್ರಚಾರಕ್ಕೆ ಮಧ್ಯಂತರ ಜಾಮೀನು ಕೋರಿ ಸೋರೆನ್ ಅರ್ಜಿ
ನವದೆಹಲಿ, ಮೇ ೧೭: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡುವುದಕ್ಕಾಗಿ ಮಧ್ಯಂತರ ಜಾಮೀನು ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಸೋರೆನ್ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಕುರಿತು ತಾ. ೨೦ ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಜಾರಿ ನಿರ್ದೇಶನಾಲಯದ(ಇಡಿ)ಕ್ಕೆ ಶುಕ್ರವಾರ ಸೂಚಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಸೋರೆನ್ ಅವರ ಬಂಧನದ ವಿರುದ್ಧ ಸಲ್ಲಿಸಿದ ಮನವಿಗೆ ಸಂಕ್ಷಿಪ್ತ ಉತ್ತರವನ್ನು ಸಲ್ಲಿಸುವಂತೆ ಫೆಡರಲ್ ಏಜೆನ್ಸಿಯನ್ನು ಕೇಳಿದೆ ಮತ್ತು ಮೇ ೨೧ ರಂದು ರಜಾ ಕಾಲದ ಪೀಠದ ಮುಂದೆ ವಿಷಯವನ್ನು ಪಟ್ಟಿ ಮಾಡಿದೆ.
ಹೆಚ್.ಡಿ. ರೇವಣ್ಣಗೆ ಷರತ್ತುಬದ್ಧ ಜಾಮೀನು
ಬೆಂಗಳೂರು, ಮೇ ೧೭: ಮನೆ ಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬAಧಿಸಿದ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಶಾಸಕ ಹೆಚ್.ಡಿ. ರೇವಣ್ಣ ಅವರಿಗೆ ಜನಪ್ರತಿನಿಧಿಗಳ ೪೨ನೇ ಎಸಿಎಂಎA ವಿಶೇಷ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ. ಮನೆಗೆಲಸದ ಸಂತ್ರಸ್ತೆ ದಾಖಲಿಸಿರುವ ಈ ಪ್ರಕರಣ ನ್ಯಾಯಾಧೀಶೆ ಜೆ.ಪ್ರೀತ್ ಅವರ ಮುಂದೆ ವಿಚಾರಣೆ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ರೇವಣ್ಣ ಮುಂಚಿತವಾಗಿಯೇ ಗುರುವಾರ ಬೆಳಗ್ಗೆ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಕೋರಿದ್ದರು. ಏತನ್ಮಧ್ಯೆ, ಪ್ರಾಸಿಕ್ಯೂಷನ್ ಪರ ವಕೀಲರು ಹಾಜರಾಗಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕೋರಿದರು. ಜಾಮೀನು ನೀಡದಂತೆ ನ್ಯಾಯಾಧೀಶರಿಗೆ ಮನವಿ ಮಾಡಿದರು. ಕೆಲಕಾಲ ವಾದ ಆಲಿಸಿದ ನ್ಯಾಯಾಧೀಶರು, ರೂ. ೫ ಲಕ್ಷ ಮೊತ್ತದ ಬಾಂಡ್ ನೀಡಬೇಕು ಮತ್ತು ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ಒದಗಿಸಬೇಕು ಎಂಬ ಷರತ್ತಿನೊಂದಿಗೆ ಮಧ್ಯಂತರ ಜಾಮೀನು ನೀಡಿ ಅರ್ಜಿ ವಿಚಾರಣೆಯನ್ನು ಮುಂದೂಡಿದರು. ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬAಧಿಸಿದ ಈ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಮೊದಲನೇ ಆರೋಪಿಯಾಗಿದ್ದು, ಸಂಸದರೂ ಆದ ಪುತ್ರ ಪ್ರಜ್ವಲ್ ರೇವಣ್ಣ ಎರಡನೇ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ವಿರುದ್ಧ ಐಪಿಸಿ ಕಲಂ ೩೭೬ ಸೇರ್ಪಡೆ ಮಾಡಬೇಕೆಂಬ ಎಸ್‌ಐಟಿ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.