ಮಡಿಕೇರಿ, ಮೇ ೧೮: ಪ್ರಸಕ್ತ ಸಾಲಿಗೆ ಸೋಮವಾರಪೇಟೆ ತಾಲೂಕು ಕೊಡ್ಲಿಪೇಟೆ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಕಾಲೇಜಿಗೆ ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯ ಹಾಗೂ ಪ.ಜಾತಿ, ಪ.ಪಂಗಡ, ಇತರೆ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿಜ್ಞಾನ ವಿಭಾಗದಲ್ಲಿ ಪಿಸಿಎಂಬಿ, ಪಿಸಿಎಂಸಿ ಹಾಗೂ ವಾಣಿಜ್ಯ ವಿಭಾಗದಲ್ಲಿ ಎಚ್ಇಬಿಎ ಸಂಯೋಜನೆಗಳ ತರಗತಿಗಳನ್ನು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುವುದು. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್ ಸಮುದಾಯದವರಿಗೆ ಶೇ. ೭೫ ಹಾಗೂ ಹಿಂದುಳಿದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಶೇ. ೨೫ ಸೀಟು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಕಾಲೇಜು ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಸಲ್ಲಿಸಬಹುದು. ಅರ್ಹ ವಿದಾರ್ಥಿಗಳು ಕೂಡಲೇ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಅರ್ಜಿ ಸಲ್ಲಿಸಲು ತಾ. ೨೭ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲೂಕು ದೂ. ೭೬೭೬೪೭೩೭೬೭ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ಎಂಸಿ ಕಾಲೇಜು ಹತ್ತಿರ, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಸಂಪರ್ಕಿಸಬಹುದೆAದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ. ದಿವಾಕರ ತಿಳಿಸಿದ್ದಾರೆ.