ಮುಳ್ಳೂರು, ಮೇ ೧೭: ಸಮಿಪದ ಗೋಪಾಲಪುರದ ಶ್ರೀ ಬನಶಂಕರಿ ಅಮ್ಮನವರ ದೇವಸ್ಥಾನದ ೨೬ನೇ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನಗೊAಡಿತು. ಎರಡು ದಿನದ ನಡೆದ ವಾರ್ಷಿಕ ಮಹೋತ್ವದ ಪ್ರಯುಕ್ತ ಮಂಗಳವಾರ ರಾತ್ರಿ ದೇವಸ್ಥಾನದಲ್ಲಿ ಶ್ರೀ ಅಮ್ಮನವರಿಗೆ ಲಲಿತಾ ಸಹಸ್ರನಾಮ, ಕುಂಕುಮಾರ್ಚನೆ ಮುಂತಾದ ಪೂಜೆಗಳು ನಡೆದವು ತದನಂತರ ಸುಗ್ಗಿ ಕುಣಿತ ಮತ್ತು ಸಿಡಿಮದ್ದು ಪ್ರದರ್ಶನ ನಡೆಯಿತು.
ಬುಧವಾರ ಮುಂಜಾನೆ ೫ ಗಂಟೆಗೆ ಶ್ರೀ ಬನಶಂಕರಿ ಅಮ್ಮನವರ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿ ಪ್ರತಿಷ್ಟಾಪಿಸಿ ವಾದ್ಯಗೋಷ್ಠಿ, ವೀರಗಾಸೆ ಕುಣಿತದೊಂದಿಗೆ ದೇವರನ್ನು ಗಂಗಾಸ್ನಾನಕ್ಕೆ ಕೊಂಡೊಯ್ಯಲಾಯಿತು. ನಂತರ ಪಂಚಕಲಶದೊAದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಬೆಳಿಗ್ಗೆ ೯ ಗಂಟೆಗೆ ಕೆಂಡೋತ್ಸವ ನಡೆಸಲಾಯಿತು ಬೆಳಿಗ್ಗೆ ೧೦ ಗಂಟೆಗೆ ಮೂಲ ದೇವಾಲಯವನ್ನು ಪ್ರವೇಶಿಸಿದ ಬಳಿಕ ಶ್ರೀ ಅಮ್ಮನವರಿಗೆ ಕುಂಕುಮಾರ್ಚನೆ, ಮಹಾ ಮಂಗಳಾರತಿ, ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿನಿಯೋಗದೊಂದಿಗೆ ಶ್ರೀ ಬನಶಂಕರಿ ಅಮ್ಮನವರ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನಗೊAಡಿತು. ಪ್ರಧಾನ ಅರ್ಚಕ ಪ್ರಸನ್ನ ಭಟ್ ಅವರ ನೇತೃತ್ವದಲ್ಲಿ ಅರ್ಚಕರು ಪೂಜಾ ವಿಧಿ ವಿಧಾನ ನೆರವೇರಿಸಿದರು.