ಮಡಿಕೇರಿ, ಮೇ ೧೮: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್ ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಇಂದಿರಾಗಾAಧಿ, ಏಕಲವ್ಯ ಮಾದರಿ ವಸತಿ ಶಾಲೆ, ಕಾಲೇಜುಗಳ ಪೈಕಿ ೮೦೭ ವಸತಿ ಶಾಲೆಗಳಿಗೆ ೬ ನೇ ತರಗತಿಗೆ ಪ್ರವೇಶ ಪಡೆಯಲು ಇಚ್ಚಿಸುವ ಶೇ.೨೫ ಕ್ಕಿಂತ ಹೆಚ್ಚಿನ ವಿಕಲತೆ ಇರುವ ವಿಶೇಷಚೇತನ ವಿದ್ಯಾರ್ಥಿಗಳಿಗೆ ಶೇ.೧೦ರ ಮೀಸಲಾತಿ ನಿಗದಿಪಡಿಸಿ ಆದೇಶ ಹೊರಡಿಸಿದೆ.

ಈ ಶಾಲೆಗಳಲ್ಲಿ ಶಿಕ್ಷಣ ಪಡೆಯಲು ಇಚ್ಚಿಸುವ ಜಿಲ್ಲೆಯ ವಿಶೇಷಚೇತನ ಮಕ್ಕಳು ನಿಗದಿಪಡಿಸಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. ೦೮೨೭೨-೨೯೫೮೨೯ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.