ಕುಶಾಲನಗರ, ಮೇ ೧೮: ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತ ಸಂಘದ ಬೆಳ್ಳಿ ಹಬ್ಬ ಮಹೋತ್ಸವ ಅಂಗವಾಗಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಸದಸ್ಯರ ಜಿಲ್ಲಾಮಟ್ಟದ ಕ್ರಿಕೆಟ್ ಟೂರ್ನಮೆಂಟ್ ತಾ.೧೯ ರಂದು (ಇಂದು) ಕುಶಾಲನಗರದಲ್ಲಿ ನಡೆಯಲಿದೆ.

ಕುಶಾಲನಗರ ತಾಲೂಕು ಸಂಘದ ಕ್ರೀಡಾ ಸಮಿತಿ ಆಶ್ರಯದಲ್ಲಿ ನಡೆಯಲಿರುವ ಪಂದ್ಯಾಟದಲ್ಲಿ ಜಿಲ್ಲೆಯ ಆರು ತಂಡಗಳು ಪಾಲ್ಗೊಳ್ಳಲಿವೆ. ಕೊಡಗು ಜಿಲ್ಲೆಯ ೮೦ಕ್ಕೂ ಅಧಿಕ ಪತ್ರಕರ್ತರು ಈ ಪಂದ್ಯಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಕುಶಾಲನಗರದ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ಪಂದ್ಯಾಟ ನಡೆಯಲಿದೆ.