ಮಡಿಕೇರಿ, ಮೇ ೧೮ : ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಪದವೀಧರರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-೨೦೨೪ ಕ್ಕೆ ಸಂಬAಧಿಸಿದAತೆ ಸ್ವೀಕೃತವಾದ ನಾಮಪತ್ರಗಳ ಪರಿಶೀಲನಾ ಕಾರ್ಯವು ಶುಕ್ರವಾರ ನಡೆಯಿತು.

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ೧೩ ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ೧೩ ನಾಮಪತ್ರಗಳು ಅಂಗೀಕೃತವಾಗಿವೆ.

ನೈಋತ್ಯ ಪದವೀಧರರ ಕ್ಷೇತ್ರಕ್ಕೆ ೧೧ ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ೧೧ ನಾಮಪತ್ರಗಳು ಅಂಗೀಕೃತವಾಗಿವೆ. ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ೧೦ ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ೯ ನಾಮಪತ್ರಗಳು ಅಂಗೀಕೃತವಾಗಿವೆ. ೧ ನಾಮಪತ್ರ ತಿರಸ್ಕೃತಗೊಂಡಿದೆ. ಎಂ. ಸತೀಶ್ ಕಾರಂತ್, ಪಕ್ಷೇತರ ಅಭ್ಯರ್ಥಿ ಅವರು ನಮೂನೆ-೨೬ ನೋಟರಿ ಅಫಿಡವಿಟ್ ಹಾಗೂ ವಿಧಾನಸಭಾ ಮತದಾರರ ಪಟ್ಟಿಯ ದೃಢೀಕೃತ ಪ್ರತಿಯನ್ನು ಸಲ್ಲಿಸದಿರುವುದರಿಂದ ತಿರಸ್ಕೃತಗೊಂಡಿರುತ್ತದೆ.

ತಾ. ೨೦ ರಂದು ಮಧ್ಯಾಹ್ನ ೩ ಗಂಟೆಯವರೆಗೆ ನಾಮಪತ್ರಗಳನ್ನು ಹಿಂಪಡೆಯಲು ಅವಕಾಶವಿರುತ್ತದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಪದವೀಧರರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ಜಿ.ಸಿ.ಪ್ರಕಾಶ್ ಅವರು ತಿಳಿಸಿದ್ದಾರೆ.