ಸಿದ್ದಾಪುರ, ಮೇ ೧೯: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗಡಿಗಳಲ್ಲಿ ಕನ್ನಡ ಭಾಷೆಯ ನಾಮಫಲಕವನ್ನು ಅಳವಡಿಸಬೇಕೆಂದು ಗ್ರಾಮ ಪಂಚಾಯಿತಿಯ ವತಿಯಿಂದ ಪಟ್ಟಣದಲ್ಲಿ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿ ಸುಬ್ರಮಣಿ, ಬಿಲ್ ಕಲೆಕ್ಟರ್ ಈಶ್ವರ ಹಾಗೂ ಸಿಬ್ಬಂದಿ ಹಾಜರಿದ್ದರು.