ಮಡಿಕೇರಿ, ಮೇ ೧೮: ಆಟೋರಿಕ್ಷಾದಲ್ಲಿ ಕಳೆದು ಹೋಗಿದ್ದ ಮೊಬೈಲ್ ಫೋನ್ ಅನ್ನು ಕೊಡಗು ಸೈಬರ್ ಅಪರಾಧ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಎರಡು ತಿಂಗಳ ಹಿಂದೆ ಮಡಿಕೇರಿ ಮಾರುಕಟ್ಟೆಯ ವ್ಯಾಪಾರಿ ಎಂ.ಎ. ರಜಾ಼ಕ್ ಅವರು ಶ್ರೀ ರಾಜರಾಜೇಶ್ವರಿ ನಗರದ ರಸ್ತೆಯಲ್ಲಿ ಆಟೋ ರಿಕ್ಷಾವೊಂದರಲ್ಲಿ ತೆರಳುವಾಗ ಮೊಬೈಲ್ ಫೋನ್ ಕಳೆದುಕೊಂಡಿದ್ದರು. ಕಳೆದುಕೊಂಡ ನಂತರ ಮೊಬೈಲ್ ಸ್ವಿಚ್ ಆಫ್ ಆದ ಹಿನ್ನೆಲೆ ಸೈಬರ್ ಅಪರಾಧ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎರಡು ತಿಂಗಳ ತನಿಖೆಯ ನಂತರ ಮೊಬೈಲ್ ಫೋನ್ ಪತ್ತೆಯಾಗಿದ್ದು, ಠಾಣಾಧಿಕಾರಿ ಶ್ರೀಕಾಂತ್ ಅವರು ಇಂದು ಎಂ.ಎ. ರಜಾ಼ಕ್ ಅವರಿಗೆ ಹಸ್ತಾಂತರಿಸಿದರು.