ವರದಿ: ಚಂದ್ರಮೋಹನ್

ಕುಶಾಲನಗರ, ಮೇ ೧೯: ಕಳೆದ ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕುಶಾಲನಗರ ಒಳಚರಂಡಿ ಯೋಜನೆ ಕಾಮಗಾರಿಯ ಪ್ರಥಮ ಹಂತದ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದೆ.

ಶುಕ್ರವಾರ ಕುಶಾಲನಗರ ಸಮೀಪದ ಹಾರಂಗಿ ರಸ್ತೆಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಅಧಿಕಾರಿಗಳು ನಡೆಸಿದ ಪ್ರಾಯೋಗಿಕ ಚಾಲನೆ ಕಾರ್ಯದಲ್ಲಿ ಯಾವುದೇ ಲೋಪಗಳು ಉಂಟಾಗಿಲ್ಲ ಎಂದು ಕರ್ನಾಟಕ ರಾಜ್ಯ ಒಳಚರಂಡಿ ಮಂಡಳಿ ಮತ್ತು ಕುಡಿಯುವ ನೀರು ಸರಬರಾಜು ಕೇಂದ್ರದ ಕಾರ್ಯ ಪಾಲಕ ಅಭಿಯಂತರ ಉಮೇಶ್ ಚಂದ್ರ ತಿಳಿಸಿದ್ದಾರೆ.

ಕುಶಾಲನಗರ ಹಳೆಯ ಮಾರುಕಟ್ಟೆ ಆವರಣದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಅಲ್ಪ ನ್ಯೂನತೆಗಳು ಕಂಡುಬAದಿದ್ದ ಹಿನ್ನೆಲೆಯಲ್ಲಿ ಎರಡನೇ ಹಂತದ ಪ್ರಾಯೋಗಿಕ ಪರೀಕ್ಷೆ ಸದ್ಯದಲ್ಲೇ ನಡೆಸಲಾಗುವುದು ಎಂದು ಹೇಳಿದ್ದಾರೆ.

ಸ್ವಚ್ಛ ಕುಶಾಲನಗರ ಹಾಗೂ ಸ್ವಚ್ಛ ಕಾವೇರಿ ಗುರಿ ಹೊಂದಿದ ಈ ಯೋಜನೆ ಕಾರಣಾಂತರಗಳಿAದ ನಿಧಾನಗತಿಯಲ್ಲಿ ಸಾಗಿತ್ತಾದರೂ ಕ್ಷೇತ್ರದ ಶಾಸಕ ಡಿ.ಮಂತರ್ ಗೌಡ ಅವರ ಸೂಚನೆಯಂತೆ ಪ್ರಸಕ್ತ ಕುಶಾಲನಗರ ಪುರಸಭೆಯ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳ ಆಸಕ್ತಿ ಹಿನ್ನೆಲೆಯಲ್ಲಿ ಕಾಮಗಾರಿ ತನ್ನ ವೇಗವನ್ನು ಹೆಚ್ಚಿಸಿಕೊಂಡಿದೆ.

ಕುಶಾಲನಗರ ಪಟ್ಟಣ ಸುತ್ತಮುತ್ತ ಗ್ರಾಮಗಳ ತ್ಯಾಜ್ಯಗಳು ನೇರವಾಗಿ ಕಾವೇರಿ ನದಿ ಒಡಲು ಸೇರುತ್ತಿರುವ ಬಗ್ಗೆ ಹೆಚ್ಚಿನ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಯೋಜನೆಯನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಲು ನಿರಂತರವಾಗಿ ಪ್ರಯತ್ನ ಪಡುತ್ತಿದ್ದಾರೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಿಂದ ಕೂಡ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಿ ಯೋಜನೆಯನ್ನು ಅನುಷ್ಟಾನಗೊಳಿಸುವಂತೆ ಸಂಬAಧಿ ಸಿದ ಅಧಿಕಾರಿಗಳಿಗೆ ನೋಟೀಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.

‘ಶಕ್ತಿ’ ಹಲವು ಬಾರಿ ಯೋಜನೆಯ ಕಾಮಗಾರಿ ನಿಧಾನಗತಿಯ ಬಗ್ಗೆ ಸಮಗ್ರ ವರದಿಗಳನ್ನು ಪ್ರಕಟಗೊಳಿಸುವ ಮೂಲಕ ಜಿಲ್ಲಾಡಳಿತದ ಗಮನಕ್ಕೆ ತಂದಿರುವುದನ್ನು ಇಲ್ಲಿ ಸ್ಮರಿಸಬಹುದು.

ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಭೂಗತ ಪೈಪುಗಳನ್ನು ಈಗಾಗಲೇ ಅಳವಡಿಸಲಾಗಿದ್ದು, ಅಗತ್ಯವಿರುವ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಮಂಡಳಿ ಕಾರ್ಯಪಾಲಕ ಅಭಿಯಂತರ ಉಮೇಶ್ ಚಂದ್ರ ತಿಳಿಸಿದ್ದಾರೆ.

ಯೋಜನೆ ಲೋಕಾರ್ಪಣೆ ನಂತರ ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ನದಿಗೆ ಹರಿಯುತ್ತಿರುವ ಕಲುಷಿತ ನೀರಿನ ಸಮಸ್ಯೆ ಶಾಶ್ವತವಾಗಿ ಪರಿಹಾರ ಆಗಲಿದೆ ಎಂದು ಪುರಸಭೆ ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್ ತಿಳಿಸಿದ್ದಾರೆ. ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಮಂಡಳಿ ಕಾರ್ಯಪಾಲಕ ಅಭಿಯಂತರ ಉಮೇಶ್ ಚಂದ್ರ ತಿಳಿಸಿದ್ದಾರೆ.

ಯೋಜನೆ ಲೋಕಾರ್ಪಣೆ ನಂತರ ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ನದಿಗೆ ಹರಿಯುತ್ತಿರುವ ಕಲುಷಿತ ನೀರಿನ ಸಮಸ್ಯೆ ಶಾಶ್ವತವಾಗಿ ಪರಿಹಾರ ಆಗಲಿದೆ ಎಂದು ಪುರಸಭೆ ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್ ತಿಳಿಸಿದ್ದಾರೆ. ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಮಂಡಳಿ ಕಾರ್ಯಪಾಲಕ ಅಭಿಯಂತರ ಉಮೇಶ್ ಚಂದ್ರ ತಿಳಿಸಿದ್ದಾರೆ.

ಯೋಜನೆ ಲೋಕಾರ್ಪಣೆ ನಂತರ ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ನದಿಗೆ ಹರಿಯುತ್ತಿರುವ ಕಲುಷಿತ ನೀರಿನ ಸಮಸ್ಯೆ ಶಾಶ್ವತವಾಗಿ ಪರಿಹಾರ ಆಗಲಿದೆ ಎಂದು ಪುರಸಭೆ ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್ ತಿಳಿಸಿದ್ದಾರೆ.