ಕೂಡಿಗೆ, ಮೇ ೨೦: ರೂ. ೬೫ ಲಕ್ಷ ವೆಚ್ಚದಲ್ಲಿ ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿರುವ ಕೂಡಿಗೆ ಸರಕಾರಿ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ೫ ತರಗತಿ ಕೊಠಡಿಗಳ ಕಾಮಗಾರಿ ಭರದಿಂದ ಸಾಗುತ್ತಿದೆ.
ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಹೆಚ್ಚುವರಿ ಕಟ್ಟಡಗಳ ನಿರ್ಮಾಣಕ್ಕೆ ಮಂಜೂರಾತಿ ದೊರೆತ ಹಿನ್ನೆಲೆಯಲ್ಲಿ ಇಲಾಖೆಯ ನಿಯಮಾನುಸಾರ ಟೆಂಡರ್ ಪ್ರಕ್ರಿಯೆ ನಡೆದಿದೆ. ಜಿಲ್ಲಾ ಪಂಚಾಯಿತಿ ಇಂಜಿನಿಯರಿAಗ್ ವಿಭಾಗದ ಇಂಜಿನಿಯರ್ ಮುಂದಾಳತ್ವದಲ್ಲಿ ಕಾಮಗಾರಿ ನಡೆಯುತ್ತಿದ್ದು, ಗ್ರಾಮೀಣ ಪ್ರದೇಶ ಭಾಗದಲ್ಲಿರುವ ಈ ಪದವಿ ಪೂರ್ವ ಕಾಲೇಜಿಗೆ ಹೆಚ್ಚು ವಿದ್ಯಾರ್ಥಿಗಳು ಸೇರ್ಪಡೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಕೊಠಡಿಗಳ ಅವಶ್ಯಕತೆ ಇರುವ ಕಾರಣ ಕೊಠಡಿ ನಿರ್ಮಾಣ ಮಾಡಲಾಗುತ್ತಿದೆ.