ಪೊನ್ನಂಪೇಟೆ, ಮೇ ೨೦: ಪೊನ್ನಂಪೇಟೆ ಸಮೀಪದ ಹುದೂರು ಶ್ರೀ ಭಗವತಿ ಹಾಗೂ ಭದ್ರಕಾಳಿ ದೇವರ ವಾರ್ಷಿಕ ಬೇಡು ಹಬ್ಬ ತಾ. ೨೨ ಮತ್ತು ತಾ. ೨೩ರಂದು ನಡೆಯಲಿದೆ ಎಂದು ತಕ್ಕಮುಖ್ಯಸ್ಥರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಈ ವರ್ಷ ಹಬ್ಬವನ್ನು ವಿಜೃಂಭಣೆಯಿAದ ಆಚರಿಸಲು ತೀರ್ಮಾನಿಸಲಾಗಿದ್ದು, ತಾ. ೨೨ ರಂದು ಮಧ್ಯಾಹ್ನ ೩ ಗಂಟೆಗೆ ಶ್ರೀ ಭದ್ರಕಾಳಿ ದೇವರ ಕುದುರೆ, ಅಡ್ಡಂಡ ಬಲ್ಯಮನೆ ಸಮೀಪದ ಅಂಬಲದಿAದ ಹೊರಟು ಹತ್ತಿರದ ಶ್ರೀ ಭದ್ರಕಾಳಿ ದೇವಸ್ಥಾನದಲ್ಲಿ ದೇವರಿಗೆ ಹರಕೆ, ಕಾಣಿಕೆ ಸಲ್ಲಿಸುವ ಮೂಲಕ ಮೊದಲ ದಿನದ ಹಬ್ಬ ನಡೆಯಲಿದ್ದು, ತಾ. ೨೩ ರಂದು ಮಧ್ಯಾಹ್ನ ೩ ಗಂಟೆಗೆ ಶ್ರೀ ಭಗವತಿ ದೇವರ ಕುದುರೆ ಅಂಬಲದಿAದ ಹೊರಟು ಶ್ರೀ ಭಗವತಿ ದೇವಸ್ಥಾನದಲ್ಲಿ ಹರಕೆ ಕಾಣಿಕೆ ಸಲ್ಲಿಸುವ ಮೂಲಕ ಎರಡು ದಿನಗಳ ಹಬ್ಬಕ್ಕೆ ತೆರೆ ಎಳೆಯಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.