ಮಡಿಕೇರಿ, ಮೇ ೨೦: ಕೊಡವ ಮಕ್ಕಡ ಕೂಟದಿಂದ ಪ್ರಕಟಗೊಳ್ಳಲಿರುವ ೧೦೦ನೇ ಪುಸ್ತಕಕ್ಕೆ ಬರಹಗಾರರಿಂದ ಲೇಖನಗಳನ್ನು ಆಹ್ವಾನಿಸಲಾಗಿದೆ. ೧೦೦ ಬರಹಗಾರರ ಲೇಖನಗಳನ್ನು ಒಂದೇ ಪುಸ್ತಕದಲ್ಲಿ ಪ್ರಕಟಿಸಿ ೧೦೦ ನೇ ಪುಸ್ತಕವಾಗಿ ಬಿಡುಗಡೆಗೊಳಿಸಲಾಗುವುದು ಎಂದು ಕೂಟದ ಸ್ಥಾಪಕಾಧ್ಯಕ್ಷ ಬೊಳ್ಳಜ್ಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ.
ಕೊಡಗಿನ ಆಚಾರ, ವಿಚಾರ, ಸಂಸ್ಕೃತಿ, ಪದ್ಧತಿ, ಪರಂಪರೆ, ಇತಿಹಾಸ, ಸೇರಿದಂತೆ ಸಮಾಜಮುಖಿ ಬರಹಗಳನ್ನು ಸಂಗ್ರಹಿಸಿ ಪುಸ್ತಕ ರೂಪದಲ್ಲಿ ಹೊರ ತರಲು ನಿರ್ಧರಿಸಲಾಗಿದೆ. ಬರಹ ಯಾವ ಭಾಷೆಯಲ್ಲಿ ಬೇಕಾದರು ಇರಬಹುದು.
ಆಸಕ್ತ ಬರಹಗಾರರು ಯಾವುದೇ ಜಾತಿ, ಮತ, ಬೇಧವಿಲ್ಲದೆ ತಮ್ಮ ಬರಹಗಳನ್ನು ಟೈಪ್ ಮಾಡಿ ಅಥವಾ ಬರೆದು ಕೊಡವ ಮಕ್ಕಡ ಕೂಟ, ಕೆ.ಬಾಡಗ, ಎಫ್.ಎಂ.ಕೆ.ಎA.ಸಿ ಕಾಲೇಜು ಪೋಸ್ಟ್, ಮಡಿಕೇರಿ, ಕೊಡಗು ಈ ವಿಳಾಸಕ್ಕೆ ಕಳುಹಿಸಬಹುದು ಅಥವಾ ಬೊಳ್ಳಜ್ಜಿರ ಬಿ.ಅಯ್ಯಪ್ಪ ೯೮೮೦೭೭೮೦೪೭ ಮೊ.ಸಂಖ್ಯೆಗೆ ವಾಟ್ಸಾö್ಯಪ್ ಮಾಡಬಹುದು. ಲೇಖನಗಳನ್ನು ಜೂನ್ ೩೦ ರೊಳಗೆ ಕಳುಹಿಸಬೇಕು ಎಂದು ಬೊಳ್ಳಜ್ಜಿರ ಅಯ್ಯಪ್ಪ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.