ಸೋಮವಾರಪೇಟೆ, ಮೇ ೧೯: ಪಟ್ಟಣ ಸಮೀಪದ ಚೌಡ್ಲು ಗಾಂಧಿನಗರ ಶ್ರೀ ದೊಡ್ಡ ಮಾರಿಯಮ್ಮ ದೇವಾಲಯದ ವಾರ್ಷಿ ಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.

ವಾರ್ಷಿಕೋತ್ಸವ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆಗಳು ನಡೆದವು. ಉತ್ಸವ ಮೂರ್ತಿಯನ್ನು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವಾದ್ಯಗೋಷ್ಟಿಯೊಂದಿಗೆ ಮೆರವಣಿಗೆ ನಡೆಸಿ, ನಂತರ ದೇವಾಲಯಕ್ಕೆ ತಂದು ಪ್ರತಿಷ್ಠಾಪಿಸಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.

ದೇವರ ಮೆರವಣಿಗೆ ಸಂದರ್ಭ ಭಕ್ತಾದಿಗಳು ತಮ್ಮ ಮನೆ ಎದುರು ರಸ್ತೆಯನ್ನು ಶುಚಿಗೊಳಿಸಿ, ರಂಗೋಲಿ ಹಾಕಿ ಈಡುಗಾಯಿ ಒಡೆದರು. ವಾರ್ಷಿಕೋತ್ಸವ ಪೂಜೆಯಲ್ಲಿ ಭಾಗಿಯಾಗಿದ್ದ ಸಾವಿರಾರು ಮಂದಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ದೇವಾಲಯ ಸಮಿತಿ ಅಧ್ಯಕ್ಷ ಗಂಗಾಧರ್ ಸೇರಿದಂತೆ ಪದಾಧಿಕಾರಿಗಳು ವಾರ್ಷಿಕೋತ್ಸವದ ಉಸ್ತುವಾರಿ ವಹಿಸಿದ್ದರು.