ಮಡಿಕೇರಿ, ಮೇ ೨೦: ಬೌದ್ಧಿಕ ಸಾಮರ್ಥ್ಯವನ್ನು ಅನಾವರಣಗೊಳಿಸಲು ಸ್ಪರ್ಧಾ ಕಾರ್ಯಕ್ರಮಗಳು ತುಂಬಾ ಅಗತ್ಯವಾಗಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಪ್ರೊ. ಮೇಜರ್ ಬಿ. ರಾಘವ ಹೇಳಿದರು. ಸ್ನಾತಕ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ವತಿಯಿಂದ ಕಾಲೇಜು ಸಭಾಂಗಣದಲ್ಲಿ ನಡೆದ ಬ್ರೆöÊನ್ ಹ್ಯಾಕ್ ೦.೨ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವೈಯಕ್ತಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಸ್ಪರ್ಧೆಗಳು ತುಂಬಾ ಅಗತ್ಯ. ಇದು ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಹೆಚ್ಚಿಸುತ್ತದೆ ಮತ್ತು ಸ್ಪರ್ಧಾಯುಗಕ್ಕೆ ಹೊಂದಿಕೊಳ್ಳುವ ಅವಕಾಶವನ್ನು ಕಲ್ಪಿಸಿಕೊಡುತ್ತವೆ ಎಂದರು. ಸ್ನಾತಕ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗವು ಉತ್ತಮವಾದ ಸ್ಪರ್ಧಾ ಕಾರ್ಯಕ್ರಮವನ್ನು ರೂಪಿಸಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಈ ರೀತಿಯ ಸ್ಪರ್ಧೆಗಳಲ್ಲಿ ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ಸಂಯೋಜಕಿ ಡಾ. ಪವಿತ್ರ ಹಾಗೂ ಐಕ್ಯೂಎಸಿ ಸಂಯೋಜಕ ಡಾ. ರಾಜೇಂದ್ರ ಆರ್. ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವಿದ್ಯಾರ್ಥಿ ಕೌಶಲ್ ಸೋಮಯ್ಯ ಸ್ವಾಗತಿಸಿ, ಅಲೆನ್ ಜೀಸ್ಮಾ ಕಾರ್ಯಕ್ರಮ ನಿರೂಪಿಸಿದರು. ವಿಭಾಗದ ಅಧ್ಯಾಪಕರಾದ ಅಮೃತ ಹಾಗೂ ಗುಣಶ್ರೀ ಕಾರ್ಯಕ್ರಮ ನಡೆಸಿಕೊಟ್ಟರು. ೧೮ ತಂಡಗಳು ರಸಪ್ರಶ್ನೆ, ಬರವಣಿಗೆ, ಹೆಚ್ಆರ್, ಪಸಲ್ ಜೋಡಿಸುವುದು ಸೇರಿದಂತೆ ವಿಭಿನ್ನ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು.