ಮಡಿಕೇರಿ ಮೇ ೨೦: ವೀರಾಜಪೇಟೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ೨೦೨೪-೨೫ನೇ ಸಾಲಿಗೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ನಿಲಯಗಳಿಗೆ ದಾಖಲಾಗಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪೊನ್ನಂಪೇಟೆ, ವೀರಾಜಪೇಟೆ, ಕಾಕೋಟುಪರಂಬು ಮತ್ತು ಬಾಳೆಲೆ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳು, ಪೊನ್ನಂಪೇಟೆ, ವೀರಾಜಪೇಟೆ ಮತ್ತು ಪಾಲಿಬೆಟ್ಟ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳು. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ೫ನೇ ತರಗತಿಯಿಂದ ೧೦ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಥಿ ನಿಲಯಗಳಲ್ಲಿ ವಸತಿ, ಊಟ-ತಿಂಡಿ, ಪುಸ್ತಕ, ಸಮವಸ್ತç ಹಾಗೂ ಇತರೆ ನಿಲಯಗಳಲ್ಲಿ ಲಭ್ಯವಾಗುವ ಮೂಲಭೂತ ಸೌಲಭ್ಯಗಳು ಸಂಪೂರ್ಣ ಉಚಿತವಾಗಿರುತ್ತದೆ.

ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಸಹ ನಿಲಯಗಳಿಗೆ ಪ್ರವೇಶ ಪಡೆಯಲು ಕೂಡ ನಿಯಮಾನುಸಾರ ಅರ್ಹರಾಗಿರುತ್ತಾರೆ. ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಪೋರ್ಟಲ್ ಮೂಲಕ ಸಲ್ಲಿಸಿ ನಂತರ ಆನ್‌ಲೈನ್ ಪ್ರತಿಯೊಂದಿಗೆ ಆಧಾರ್ ಕಾರ್ಡ್, ಜಾತಿ, ಆದಾಯ ಪ್ರಮಾಣ ಪತ್ರ ಹಾಗೂ ಮಾರ್ಕ್ಸ್ ಕಾರ್ಡ್ನ ಪ್ರತಿಗಳನ್ನು ಸಂಬAಧಿಸಿದ ನಿಲಯಗಳ ಮೇಲ್ವಿಚಾರಕರಿಗೆ ಸಲ್ಲಿಸುವಂತೆ ಪೊನ್ನಂಪೇಟೆ, ವೀರಾಜಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.