ಸುಂಟಿಕೊಪ್ಪ, ಮೇ ೨೦: ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಕೂರು ಶಿರಂಗಾಲ ಭಾಗ-೨ರಲ್ಲಿ ಕುಡಿಯುವ ನೀರಿಗಾಗಿ ೨೦೨೧ ರಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಓವರ್ ಹೆಡ್ ಟ್ಯಾಂಕ್ ಕಾಮಗಾರಿಯನ್ನು ಆರಂಭಿಸಲಾಯಿತು.
ಆದರೆ ಇದೀಗ ಗುತ್ತಿಗೆದಾರರ ನಿರ್ಲಕ್ಷö್ಯದಿಂದ ಈ ಕಾಮಗಾರಿ ಪೂರ್ಣಗೊಳ್ಳದೆ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿ ನಿವಾಸಿ ದಿವಂಗತ ಜಯಂತ್ ಬಂಗೇರ ಅವರು ಗ್ರಾಮಸ್ಥರಿಗಾಗಿ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ತಮ್ಮ ಜಾಗವನ್ನು ದಾನನೀಡಿ ಟ್ಯಾಂಕ್ ನಿರ್ಮಿಸಲು ಅವಕಾಶವನ್ನು ಕಲ್ಪಿಸಿ ಕೊಟ್ಟಿದ್ದರು. ಅದರಂತೆ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಸುಮಾರು ರೂ. ೫೫ ಲಕ್ಷ ವೆಚ್ಚದಲ್ಲಿ ಕಾಮಗಾರಿಯನ್ನು ಗುತ್ತಿಗೆದಾರ ವಹಿಸಿಕೊಂಡಿದ್ದರು. ೨೦೨೧ ರಿಂದ ಪ್ರಾರಂಭವಾದ ಈ ಓವರ್ ಹೆಡ್ ಟ್ಯಾಂಕ್ ೨೦೨೪ರಲ್ಲೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಈ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಈ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿರುವ ಗುತ್ತಿಗೆದಾರರು ಉಪಗುತ್ತಿಗೆದಾರರಿಗೆ ವಹಿಸಿಕೊಟ್ಟಿದ್ದರು. ಆದರೆ ಅವರು ಕಳೆದ ಹಲವು ತಿಂಗಳುಗಳಿAದ ನಿರಂತರವಾಗಿ ಆರೋಗ್ಯದ ಸಮಸ್ಯೆ ಉಂಟಾಗಿ ಐದು ತಿಂಗಳ ಹಿಂದೆ ಮೃತಪಟ್ಟಿದ್ದರಿಂದ ಈ ಕಾಮಗಾರಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಆದರೆ ನಂತರದ ದಿನಗಳಲ್ಲಿ ಮುಖ್ಯ ಗುತ್ತಿಗೆದಾರ ಈ ಬಗ್ಗೆ ಯಾವುದೇ ಪರಿಹಾರವನ್ನು ಕಂಡುಕೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿ ತಕ್ಷಣದಲ್ಲಿಯೇ ಈ ಕಾಮಗಾರಿಯನ್ನು ಮುಗಿಸಿಕೊಡುವುದರ ಮೂಲಕ ಕುಡಿಯುವ ನೀರಿಗೆ ಶಾಶ್ವತ ಪರಿಹಾರ ನೀಡುವಂತೆ ಇಂಜಿನಿಯರ್, ಗುತ್ತಿಗೆದಾರ, ಎಡಬ್ಲೂö್ಯ ಗ್ರಾಮ ಪಂಚಾಯಿತಿ ಪಿಡಿಓ ಅವರಲ್ಲಿ ಒತ್ತಡ ಹಾಕಿದ್ದಾರೆ.
ಈಗಾಗಲೇ ಈ ಗ್ರಾಮದಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ಈ ಓವರ್ ಹೆಡ್ಟ್ಯಾಂಕ್ ಕಾರ್ಯನಿರ್ವಹಿಸುತ್ತಿದ್ದರೆ ನೀರಿನ ಸಮಸ್ಯೆ ಅಲ್ಪ ಪ್ರಮಾಣದಲ್ಲಾದರೂ ನೀಗುತ್ತಿತ್ತು. ಕಳೆದ ನಾಲ್ಕು ವರ್ಷಗಳ ಹಿಂದೆ ಕಾಮಗಾರಿ ಪ್ರಾರಂಭಗೊAಡು ಪೂರ್ಣಗೊಳ್ಳದೆ ಅತಂತ್ರಗೊAಡಿದೆ. ಈ ಭಾಗದ ಗ್ರಾಮ ಪಂಚಾಯಿತಿ ಸದಸ್ಯರ ನಿರ್ಲಕ್ಷö್ಯಕ್ಕೆ ಈ ಟ್ಯಾಂಕ್ ಬಲಿಯಾಗಿದೆ. ಈ ಬಗ್ಗೆ ಕೂಡಲೇ ಜಿಲ್ಲಾ ಪಂಚಾಯಿತಿ ಇಂಜಿನಿಯರ್, ಎಡಬ್ಲೂö್ಯ ಎಚ್ಚೆತ್ತುಕೊಂಡು ಕಾಮಗಾರಿಯನ್ನು ತಕ್ಷಣದಲ್ಲಿ ಪೂರ್ಣಗೊಳಿಸಬೇಕು ಎಂದು ಸ್ಥಳೀಯರಾದ ಅನಿಲ್ಕುಮಾರ್ ಒತ್ತಾಯಿಸಿದ್ದಾರೆ.
ಗ್ರಾಮ ಪಂಚಾಯಿತಿ ಪಿಡಿಓ ಗೂಳಪ್ಪ ಕೂತಿನಾರ್ ಮಾಹಿತಿ ನೀಡಿ, ಈ ಕಾಮಗಾರಿಯ ಬಗ್ಗೆ ಗುತ್ತಿಗೆದಾರರಿಗೆ ಮನವಿ ಮಾಡಲಾಗಿದೆ. ಶೀಘ್ರದಲ್ಲಿ ಮುಗಿಸಿಕೊಡುವುದಾಗಿ ತಿಳಿಸಿದ್ದಾರೆ ಎಂದರು.