ಮಡಿಕೇರಿ, ಮೇ ೨೧: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿದ್ದು, ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಪದವಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವು ಅಕಾಡೆಮಿ ಕಚೇರಿಯಲ್ಲಿ “ಭೂಮಿ ಮತ್ತು ಮಣ್ಣಿನ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು” ಎಂಬ ವಿಷಯದ ಮೇಲೆ ಏರ್ಪಡಿಸಲಾಗಿದೆ.
ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು (ಇಬ್ಬರು ವಿದ್ಯಾರ್ಥಿಗಳ ತಂಡ) ಅಕಾಡೆಮಿಯ ಇ-ಮೇಲ್: ಞsಣಚಿ.goಞ@gmಚಿiಟ.ಛಿom ಗೆ ತಾ. ೨೭ ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ರಸಪ್ರಶ್ನೆ ಸ್ಪರ್ಧೆಯು ಜೂನ್ ೬ ರಂದು ಅಕಾಡೆಮಿಯ ಸಭಾಂಗಣದಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ತಿತಿತಿ.ಞsಣಚಿಛಿಚಿಜemಥಿ.iಟಿ ನಲ್ಲಿ ಹಾಗೂ ಮೊ. ೯೦೦೮೬೭೫೧೨೩ ಪಡೆಯಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎ.ಎಂ. ರಮೇಶ್ ತಿಳಿಸಿದ್ದಾರೆ.