ಗೋಣಿಕೊಪ್ಪಲು, ಮೇ ೨೧: ಇದೊಂದು ವಿಚಿತ್ರವಾದರೂ ವಿಶಿಷ್ಟ ಹಬ್ಬ. ಬಹುಶಃ ಇಂತಹವೊAದು ಹಬ್ಬವನ್ನು ಕೊಡಗು ಹೊರತುಪಡಿಸಿದರೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ.

ಬುಡಕಟ್ಟು ಜನಾಂಗದವರು ಆಚರಿಸುವ ಈ ಹಬ್ಬದ ಸಂಭ್ರಮವನ್ನು ನೋಡಬೇಕಾದರೆ ಕೊಡಗಿನ ಗೋಣಿಕೊಪ್ಪದಿಂದ ತಿತಿಮತಿಗೆ ತೆರಳುವ ರಸ್ತೆಯಲ್ಲಿ ಸಿಗುವ ದೇವರಪುರಕ್ಕೆ ಬರಬೇಕು. ಪ್ರತಿ ವರ್ಷವೂ ಮೇ ತಿಂಗಳ ಮೂರನೇ ವಾರದಲ್ಲಿ ಹಬ್ಬ ನಡೆಯುತ್ತದೆ. ಈ ಬಾರಿಯೂ ತಾ.೨೨ ಹಾಗೂ ೨೩ ರಂದು ಕುಂಡೆ ಹಬ್ಬವೆಂದೇ ಖ್ಯಾತಿಯಾಗಿರುವ ಬೇಡುಹಬ್ಬ ನಡೆಯುತ್ತಿದೆ. ಈ ಹಬ್ಬದ ದಿನದಂದು ದಾರಿಯಲ್ಲಿ ಸಿಕ್ಕವರಿಗೆಲ್ಲಾ ಅಶ್ಲೀಲ ಪದಗಳಿಂದ ಬೈಯ್ಯುತ್ತಾ ಹಣ ವಸೂಲಿ ಮಾಡುವುದರಿಂದ "ಬೈಗುಳದ ಹಬ್ಬ" ಎಂದು ಕರೆಯಲ್ಪಡುತ್ತಾರೆ.

ದೇವರಪುರದ ಅಯ್ಯಪ್ಪ ದೇವಾಲಯದ ಮೈದಾನದಲ್ಲಿ ನಡೆಯುವ ಈ ಹಬ್ಬಕ್ಕೆ ಹುಣಸೂರು, ಕುಟ್ಟ, ಗೋಣಿಕೊಪ್ಪ, ತಿತಿಮತಿ, ಪಾಲಿಬೆಟ್ಟ, ಕುಟ್ಟ, ಶ್ರೀಮಂಗಲ, ಪೊನ್ನಂಪೇಟೆ ಮೊದಲಾದ ಕಡೆಗಳಿಂದ ಸಾವಿರಾರು ಬುಡಕಟ್ಟು ಮಂದಿ ಅಗಮಿಸುತ್ತಾರೆ. ಪುರುಷರು ತರಾವರಿ ವೇಷಧರಿಸಿ ಅಶ್ಲೀಲ ಪದಗಳನ್ನು ನುಡಿಯುತ್ತಾ... ‘ಕುಂಡೇ...ಕುAಡೇ’ ಎನ್ನುತ್ತಾ ಕೈಯಲ್ಲಿ ಸೋರೆಕಾಯಿ ಬುರುಡೆ, ದೊಣ್ಣೆಗಳನ್ನು ಹಿಡಿದು ಮನೆಮನೆಗೆ ತೆರಳಿ ಹಣ ಬೇಡಿ, ದಾರಿಯಲ್ಲಿ ಸಿಕ್ಕವರನ್ನು ಅಡ್ಡ ಹಾಕಿ ಬೈದು ಹಣ ವಸೂಲಿ ಮಾಡಿ, ನಂತರ ತಾವು ಮಾಡಿದ್ದಕ್ಕೆ ದೇವರಲ್ಲಿ ಕ್ಷಮೆ ಕೇಳುವುದು ಈ ಹಬ್ಬದ ವಿಶೇಷವಾಗಿದೆ.

ಹಬ್ಬದ ದಿನದಂದು ಮೈಗೆಲ್ಲ ಮಸಿ ಬಳಿದುಕೊಂಡು ವಿಚಿತ್ರ ವೇಷಭೂಷಣ ತೊಟ್ಟು ಮನೆಯಿಂದ ಹೊರಡುವ ವೇಷಧಾರಿಗಳು ದಾರಿಯುದ್ದಕ್ಕೂ ಎದುರಿಗೆ ಸಿಕ್ಕ ಜನರನ್ನು ಬೈಯ್ಯುತ್ತಲೇ ಸಾಗುತ್ತಾರೆ. ಅಷ್ಟೇ ಅಲ್ಲ ರಸ್ತೆಗಳಲ್ಲಿ ಸಾಗುವ ವಾಹನಗಳನ್ನು ಕೂಡ ತಡೆದು ಅವರಿಂದ ಹಣ ವಸೂಲಿ ಮಾಡುತ್ತಾರೆ. ಹೀಗೆ ಎಲ್ಲೆಡೆಯಿಂದ ಆಗಮಿಸುವ ವೇಷಧಾರಿಗಳು ಸಂಜೆ ವೇಳೆಗೆ ದೇವರಪುರದ ಅಯ್ಯಪ್ಪ ದೇವಾಲಯದಲ್ಲಿ ನೆರೆದು ಸಾಂಪ್ರದಾಯಿಕ ನೃತ್ಯದಲ್ಲಿ ಪಾಲ್ಗೊಂಡು ದೇವತಾ ಕಾರ್ಯದಲ್ಲಿ ಭಾಗವಹಿಸುತ್ತಾರೆ.

ಇದೇ ಸಂದರ್ಭದಲ್ಲಿ ದೇವರಪುರ ಹೆಬ್ಬಾಲೆಯ ಸಣ್ಣುವಂಡ ಕುಟುಂಬದ ಮುಖ್ಯಸ್ಥರ ಮುಂದಾಳತ್ವದಲ್ಲಿ ದೇವಾಲಯ ಸಮೀಪದ ಅಂಬಲದಿAದ ಭದ್ರಕಾಳಿ ಉತ್ಸವ ಮೂರ್ತಿಯನ್ನು ಮರದ ಕುದುರೆಯ ಮೂಲಕ ಅಯ್ಯಪ್ಪ ದೇವಾಲಯಕ್ಕೆ ತಂದು ಪೂಜಾ ಕೈಂಕರ್ಯವನ್ನು ನೆರವೇರಿಸಲಾಗುತ್ತದೆ.

ನಂತರ ಹರಕೆ ಹೊತ್ತ ಮಂದಿ ಈ ಕೀಲು ಕುದುರೆ ನೃತ್ಯದಲ್ಲಿ ಪಾಲ್ಗೊಳ್ಳುತ್ತಾರೆ. ಕುಂಡೆ ಹಬ್ಬದ ಸಂದರ್ಭ ಅಯ್ಯಪ್ಪ ದೇಗುಲದಲ್ಲಿ ಪಟ್ಟಣಿ, ಭಂಡಾರ ಹಾಕುವುದು, ಕಳಿಕಟ್ಟು ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯುತ್ತವೆ.

ಪುರಾಣದ ಹಿನ್ನೆಲೆ

ಹಿಂದಿನ ಕಾಲದಲ್ಲಿ ಬುಡಕಟ್ಟು ಮಂದಿಯನ್ನು ಬೇಟೆಗೆಂದು ಅಯ್ಯಪ್ಪ ದೇವರು ಕಾಡಿಗೆ ಕರೆದುಕೊಂಡು ಹೋಗಿದ್ದಾಗ ಕಾಡನ್ನೆಲ್ಲಾ ಸುತ್ತಾಡಿ ಬೇಟೆಯಾಡಿದ ಬಳಿಕ ಬುಡಕಟ್ಟು ಮಂದಿಯನ್ನು ಕಾಡಿನಲ್ಲಿಯೇ ಬಿಟ್ಟು ಈಗ ಬರುತ್ತೇನೆಂದು ಹೇಳಿ ಹೋದ ಅಯ್ಯಪ್ಪ ಬಹಳ ಸಮಯವಾದರೂ ಬರಲಿಲ್ಲವಂತೆ. ಕಾದು ಸುಸ್ತಾದ ಬುಡಕಟ್ಟು ಮಂದಿ ಅಯ್ಯಪ್ಪ ಹೋದ ಹಾದಿಯಲ್ಲಿ ಹುಡುಕುತ್ತಾ ಹೋದಾಗ ಅಯ್ಯಪ್ಪ ಭದ್ರಕಾಳಿಯೊಂದಿಗೆ ಸರಸವಾಡುತ್ತಿರುವುದು ಕಾಣಿಸಿತಂತೆ. ಇದರಿಂದ ಕೋಪಗೊಂಡ ಬುಡಕಟ್ಟು ಮಂದಿ ಅಯ್ಯಪ್ಪನನ್ನು ಬಾಯಿಗೆ ಬಂದAತೆ ಬೈಯ್ಯುತ್ತಾ ದೊಣ್ಣೆ ಹಿಡಿದು ಅಟ್ಟಿಸಿಕೊಂಡು ಹೋದರಂತೆ. ಬುಡಕಟ್ಟು ಮಂದಿಗೆ ಅಯ್ಯಪ್ಪ ಹಿಂಭಾಗ ತೋರಿಸಿದ ಕಾರಣ ಕುಂಡೇ... ಕುಂಡೇ... ಎಂದು ಹೀಯಾಳಿಸುವುದು ರೂಢಿಗೆ ಬಂತೆAಬ ಹಿನ್ನೆಲೆ ಈ ಹಬ್ಬಕ್ಕಿದೆ.

ಹಬ್ಬದ ಸಂದರ್ಭ ನಡೆಯುವ ಕೀಲು ಕುದುರೆ ನೃತ್ಯದ ಹಿಂದೆಯೂ ಮತ್ತೊಂದು ಸ್ವಾರಸ್ಯಕರ ಕಥೆಯಿದೆ. ಅರ್ಜುನ ಮತ್ತು ಶಿವ ಕೇರಳದಿಂದ ಪುಲಪಳ್ಳಿ ಎಂಬಲ್ಲಿಗೆ ಹೋದಾಗ ಇಬ್ಬರು ನಪುಂಸಕರು ಸೀರೆಯುಟ್ಟು ಮೋಹಿನಿಯಾಗಿ ನರ್ತಿಸಿ ವಂಚಿಸಿದರAತೆ.

ಈ ಸಂದರ್ಭದಲ್ಲಿ ಕೋಪಗೊಂಡ ಶಿವ ನೀವು ಕುದುರೆಯಾಗಿ ಎಂದು ಶಾಪ ಹಾಕಿದನಂತೆ. ಆದುದರಿಂದ ಈ ಹಬ್ಬದಲ್ಲಿ ಕೀಲು ಕುದುರೆ ನೃತ್ಯ ಇಂದಿಗೂ ನಡೆದುಕೊಂಡು ಬರುತ್ತಿದೆ.

ಕುಂಡೆ ಹಬ್ಬದ ಸಂದರ್ಭ ನಡೆಯುವ ಪೂಜಾ ಕಾರ್ಯಗಳಲ್ಲಿ ಇತರರು ಭಾಗವಹಿಸುತ್ತಾರೆಯಾದರೂ ಹಬ್ಬದ ಆಚರಣೆಯ ಬಹುಪಾಲು ಬುಡಕಟ್ಟು ಮಂದಿಗೆ ಮೀಸಲಾಗಿರುತ್ತದೆ.

ಇದೇ ಸಂದರ್ಭ ಅಯ್ಯಪ್ಪ ದೇಗುಲದಲ್ಲಿ ವಿವಿಧ ಪೂಜಾ ಕಾರ್ಯಗಳು ಕೂಡ ನಡೆಯುತ್ತವೆ. ಬೆಳಿಗ್ಗೆಯಿಂದ ರಾತ್ರಿಯವರೆಗೆ ತಾವು ಅನುಭವಿಸಿದ ಹಬ್ಬದ ಸಂಭ್ರಮವನ್ನು ಮೆಲುಕು ಹಾಕುತ್ತಾ ವೇಷಧಾರಿಗಳು ತಮ್ಮ ಮನೆಯ ಹಾದಿ ಹಿಡಿಯುತ್ತಾರೆ. ಅಲ್ಲಿಗೆ ಹಬ್ಬವೂ ಮುಗಿದು ಹೋಗುತ್ತದೆ.

ಇತಿಹಾಸ ಪ್ರಸಿದ್ಧ ಆದಿವಾಸಿಗಳ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ವೀರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್ ಮುಂದಾಳತ್ವದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗಿದೆ.

೨ ಶಸ್ತಾçಸ್ತç ಪಡೆಯ ತಂಡಗಳು ಸೇರಿದಂತೆ ಇಂದಿನಿAದ ನಾಳೆಯ ರಾತ್ರಿಯ ತನಕ ಪೊಲೀಸ್ ಅಧಿಕಾರಿಗಳು ಸೇರಿದಂತೆ ೧೫೦ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ದೇವಾಲಯ ಆವರಣ ಸೇರಿದಂತೆ ವೇಷಧಾರಿಗಳು ಬರುವ ಮಾರ್ಗದಲ್ಲಿ ಪೊಲೀಸರ ನಿಯೋಜನೆ ಮಾಡಲಾ ಗುವುದು, ಕಾನೂನು ಉಲ್ಲಂಘನೆ ಮಾಡದಂತೆ ಸಾಂಪ್ರದಾಯಿಕವಾಗಿ ಹಬ್ಬವನ್ನು ಆದಿವಾಸಿಗಳು ನಡೆಸುವಂತೆ ಡಿವೈಎಸ್ಪಿ ಮೋಹನ್ ಕುಮಾರ್ ಮನವಿ ಮಾಡಿದ್ದಾರೆ.