ಸುಂಟಿಕೊಪ್ಪ, ಮೇ ೨೧: ಸೋಮವಾರಪೇಟೆ ತಾಲೂಕಿನ ಮಾದಾಪುರ ವ್ಯಾಪ್ತಿಯಲ್ಲಿನ ಕುಂಬೂರಿನಲ್ಲಿ ನಿರ್ಮಿಸಲಾಗಿರುವ ಪವಿತ್ರ ಕುಟುಂಬ ದೇವಾಲಯವನ್ನು ಮಂಗಳವಾರದAದು ಮೈಸೂರು ಧರ್ಮಕ್ಷೇತ್ರದ ಆಡಳಿತಾಧಿಕಾರಿ ಡಾ. ಬರ್ನಾಡ್ ಮೊರಾಸ್ ಲೋಕಾರ್ಪಣೆಗೊಳಿಸಿ ಆರ್ಶೀವಚನ ನೀಡಿದರು.

ಇದೇ ಸಂದರ್ಭ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿದಿವಿಧಾನಗಳನ್ನು ನೆರವೇರಿಸಿದ ಅವರು ಮೊದಲಿಗೆ ಶಿಲಾನ್ಯಾಸ ಕಲ್ಲನ್ನು ಅನಾವರಣಗೊಳಿಸಿ ಪವಿತ್ರ ತೀರ್ಥ, ಪ್ರೋಕ್ಷಣೆಯಿಂದ ದೇವಾಲಯವನ್ನು ಪವಿತ್ರಿಕರಿಸಿ ಬಲಿ ಆರ್ಪಣ ಪೀಠವನ್ನು ಧೂಪಗಳಿಂದ ತೀರ್ಥಗಳನ್ನು ಪ್ರೋಕ್ಷಿಸಿ ಆಶೀರ್ವಚಿಸಿ ಬಲಿ ಅರ್ಪಣೆಯನ್ನು ಸಲ್ಲಿಸಿದರು. ಕುಂಬೂರು, ಮಾದಾಪುರ, ಹಟ್ಟಿಹೊಳೆ, ಸೋಮವಾರಪೇಟೆ, ಸುಂಟಿಕೊಪ್ಪ ಸೇರಿದಂತೆ ವಿವಿಧ ಭಾಗಗಳಿಂದ ನೂರಾರು ಕ್ರೆöÊಸ್ತ ಬಾಂಧವರು ಭಾಗವಹಿಸಿದ್ದರು. ನಂತರ ಮಾತನಾಡಿದ ಬರ್ನಾಡ್, ಮಡಿಕೇರಿ ವಲಯದ ಶ್ರದ್ಧಾ ಕೇಂದ್ರಗಳಲ್ಲಿ ಒಂದಾಗಿರುವ ಕುಂಬೂರುವಿನ ಪವಿತ್ರ ಕುಟುಂಬ ದೇವಾಲಯಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ಇಂದು ಕಾಣುತ್ತಿರುವ ದೇವಾಲಯಕ್ಕೆ ೧೦ ಹಲವು ಧರ್ಮಗುರುಗಳು ಮತ್ತು ಭಕ್ತರ ತ್ಯಾಗ ಪರಿಶ್ರಮ ಮತ್ತು ಭಕ್ತಿಯ ಸಮರ್ಪಣೆಯಾಗಿದೆ ಎಂದು ಶ್ಲಾಘಿಸಿದರು.

ಮುಖ್ಯ ಅತಿಥಿಗಳಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ ನಮ್ಮದಾಗಿದ್ದು ವಿವಿಧ ಧಾರ್ಮಿಕ ನಂಬಿಕೆಗಳು ಆಚಾರ - ವಿಚಾರಗಳು ವೇಷಭೂಷಣಗಳು ಬೇರೆ ಬೇರೆಯಾಗಿದ್ದರೂ ಕೂಡ ಎಲ್ಲಾ ಧರ್ಮಗಳ ಸಾರ ಒಂದೇ ಎಂದು ಹೇಳಿದರು. ನಮ್ಮ ಸರ್ಕಾರ ಆಡಳಿತ ಸಂದರ್ಭದಲ್ಲಿ ಧಾರ್ಮಿಕ ಕ್ಷೇತ್ರಗಳಿಗೆ ರೂ.೫ ಕೋಟಿ ಯವರೆಗೆ ಅನುದಾನ ನೀಡಿದೆ ಎಂದು ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಧರ್ಮಕೇಂದ್ರದ ಧರ್ಮಗುರುಗಳಾದ ರೆ.ಫಾ.ರಾಜೇಶ್ ಮಾತನಾಡಿ, ಹುಲ್ಲುಹಾಸಿನ ಕಟ್ಟಡದಿಂದ ಪವಿತ್ರ ಕುಟುಂಬ ದೇವಾಲಯದ ಪರಿಶ್ರಮವನ್ನು ವಿವರಿಸಿದರು.

ಈ ಸಂಧರ್ಭ ಮೈಸೂರು ಧರ್ಮ ಕ್ಷೇತ್ರದ ರೇ.ಫಾ.ಜಾನ್ ಅಲ್ಬರ್ಟ್ ಮೆಂಡೋನ್ಸಾ, ಹಟ್ಟಿಹೊಳೆ ಧರ್ಮಕೇಂದ್ರದ ಧರ್ಮ ಗುರುಗಳಾದ ಗಿಲ್ಬರ್ಟ್ ಡಿಸಿಲ್ವ, ಜಿಲ್ಲೆ ಸೇರಿದಂತೆ ವಿವಿಧ ಧರ್ಮಕೇಂದ್ರಗಳಿAದ ಆಗಮಿಸಿದ ಧರ್ಮಗುರುಗಳು, ಲಕ್ಷಿö್ಮÃಜಾಲ ತೋಟದ ಮಾಲೀಕರಾದ ಕೊಂಗAಡ ವಿನಯ್ ಸೋಮಯ್ಯ, ಮಾದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಪ್ಪ, ಉಪಾಧ್ಯಕ್ಷ ಸುರೇಶ್, ಸದಸ್ಯರಾದ ಅಂತೋಣಿ, ದಮಯಂತಿ, ಮತ್ತಿತರರು ಇದ್ದರು. ಇದೇ ಸಂದರ್ಭದಲ್ಲಿ ಅತಿಥಿ ಗಣ್ಯರು ಸೇರಿದಂತೆ ದೇವಾಲಯದ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡ ದಾನಿಗಳು ಹಾಗೂ ಸಂಘಟಕರನ್ನು ಸನ್ಮಾನಿಸಲಾಯಿತು.