ಮಡಿಕೇರಿ, ಮೇ ೨೩: ರಾಜ್ಯಾದ್ಯಂತ ಪೂರ್ವ ಮುಂಗಾರು ಉತ್ತಮವಾಗಿದ್ದು, ಕೃಷಿ ಚಟು ವಟಿಕೆಗಳು ಆರಂಭವಾಗಿವೆ. ಆ ನಿಟ್ಟಿನಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾಗದAತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

ಬರ ನಿರ್ವಹಣೆ ಮತ್ತು ಮುಂಗಾರು ಪೂರ್ವ ಸಿದ್ಧತೆ ಕುರಿತು ವಿಡಿಯೋ ಸಂವಾದ ಮೂಲಕ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯಾದ್ಯಂತ ಈಗಾಗಲೇ ಪೂರ್ವ ಮುಂಗಾರು ಉತ್ತಮವಾಗಿ ಆಗುತ್ತಿರುವ ಹಿನ್ನೆಲೆ ಹಲವು ಕಡೆಗಳಲ್ಲಿ ಬಿತ್ತನೆ ಕಾರ್ಯ ಆರಂಭವಾಗಿದೆ. ಸಮರ್ಪಕ ವಾಗಿ ಬಿತ್ತನೆ ಬೀಜ ವಿತರಿಸುವುದು ಹಾಗೂ ರಸಗೊಬ್ಬರ ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯಾದ್ಯಂತ ಉತ್ತಮವಾಗಿ ಮಳೆಯಾಗುತ್ತಿದ್ದರೂ ಸಹ, ಕೆಲವು ಕಡೆಗಳಲ್ಲಿ ಕುಡಿಯುವ ನೀರು ಸಮಸ್ಯೆ ಇದ್ದು, ಕುಡಿಯುವ ನೀರು ಸರಿಯಾಗಿ ಸರಬರಾಜು ಮಾಡಬೇಕು. ಜೊತೆಗೆ ಕುಡಿಯುವ ನೀರನ್ನು ಪ್ರತಿನಿತ್ಯ ಪರೀಕ್ಷಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ಸುಮಾರು ಮೂರು ತಿಂಗಳ ಕಾಲ ಸುದೀರ್ಘ ಮಾದರಿ ನೀತಿ ಸಂಹಿತೆ ಯಿಂದಾಗಿ ಅಭಿವೃದ್ಧಿ ಕಾರ್ಯಗಳು ಒಂದು ರೀತಿ ಮಂದಗತಿಯಲ್ಲಿ ಸಾಗಿದೆ. ಚುನಾವಣಾ ಆಯೋಗವು ಕೆಲವು ವಿನಾಯಿತಿಯನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾರ್ಯದತ್ತ ಹೆಚ್ಚಿನ ಗಮನಹರಿ ಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ತುರ್ತು ಕೆಲಸಗಳಿಗೆ ಹೆಚ್ಚಿನ ಗಮನ ನೀಡಬೇಕು. ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಅಭಿವೃದ್ಧಿ ಕೆಲಸಗಳಿಗೆ ಸಂಬAಧಿಸಿದAತೆ ೧೨ ತಿಂಗಳಲ್ಲಿ ಮಾಡಬೇಕಿರುವ ಕಾರ್ಯಗಳನ್ನು ಹತ್ತು ತಿಂಗಳಲ್ಲಿ ನಿರ್ವಹಿಸಬೇಕಿದೆ. ಆ ನಿಟ್ಟಿನಲ್ಲಿ ಅಧಿ ಕಾರಿಗಳು ಯೋಚಿಸಿ ಅಭಿವೃದ್ಧಿಯತ್ತ ಹೆಜ್ಜೆಯಿಡಬೇಕು.

ಅಭಿವೃದ್ಧಿ ಕಾರ್ಯಗಳಿಗೆ ಸಂಬAಧಿಸಿದAತೆ ಟೆಂಡರ್ ಆಹ್ವಾನಿ ಸಲು ಯಾವುದೇ ರೀತಿಯ ಮಾದರಿ ನೀತಿ ಸಂಹಿತೆ ಅಡ್ಡಿ ಬರುವುದಿಲ್ಲ. ಚುನಾವಣಾ ಮಾದರಿ ನೀತಿ ಸಂಹಿತೆ ನೆಪ ಹೇಳಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ವಿಳಂಬ ಧೋರಣೆ ಅನುಸರಿಸಿದರೆ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತದೆ ಎಂದು ಹೇಳಿದರು.

ಆಯಾಯ ಜಿಲ್ಲೆಗಳಲ್ಲಿ ಸಾಂಕ್ರಾ ಮಿಕ ರೋಗಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನೇ ಹೊಣೆಗಾರರ ನ್ನಾಗಿ ಮಾಡಲಾಗುವುದು. ಈ ಬಗ್ಗೆ ಎಚ್ಚರ ವಹಿಸಬೇಕು. ಎಲ್ಲಾ ಹಂತದ ಅಧಿಕಾರಿಗಳು, ಎಂಜಿನಿಯರ್‌ಗಳು ಗ್ರಾಮಗಳಿಗೆ ತೆರಳಿ ಸಾರ್ವಜನಿಕರ ಕುಂದು ಕೊರತೆ ಆಲಿಸಬೇಕು, ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು, ಅದನ್ನು ಬಿಟ್ಟು ಕಾಲಹರಣ ಮಾಡುವುದು ಸರಿಯೇ ಎಂದು ಪ್ರಶ್ನಿಸಿದರು.

ರೈತರಿಗೆ ಸಕಾಲದಲ್ಲಿ ಬ್ಯಾಂಕ್‌ಗಳ ಮೂಲಕ ಸಾಲ ದೊರೆಯಬೇಕು. ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಕೊರತೆಯಾಗದಂತೆ ಗಮನಹರಿಸಬೇಕು ಎಂದು ತಾಕೀತು ಮಾಡಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡದಿದ್ದರೆ ಆಡಳಿತ ವ್ಯವಸ್ಥೆಗೆ ಏನೆನ್ನಬೇಕು ಎಂದು ಖಾರವಾಗಿ ನುಡಿದರು.

ಶುದ್ಧ ಕುಡಿಯುವ ನೀರು ಪೂರೈಕೆ, ಕೃಷಿಕರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಬೇಕು. ಹೀಗೆ ಕೃಷಿ ಚಟುವಟಿಕೆ ಸಂಬAಧಿಸಿದAತೆ ಹೆಚ್ಚಿನ ಗಮನಹರಿಸಬೇಕು ಎಂದು ನಿರ್ದೇಶನ ನೀಡಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಬಾಕಿ ಇರುವ ಬರ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು. ಜೀವನೋಪಾಯ ಭತ್ಯೆ ನೀಡಬೇಕು. ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ಅಭಿವೃದ್ಧಿ ಕೆಲಸದಲ್ಲಿ ವೇಗ ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಮಾತನಾಡಿ, ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ರೈತರಿಗೆ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ಮಾಡಬಾರದು ಎಂದು ಸೂಚಿಸಿದರು.

ಕಾನೂನು ಸಚಿವ ಎಚ್.ಕೆ. ಪಾಟೀಲ್, ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ, ಪೌರಾಡಳಿತ ಸಚಿವ ರಹೀಂ ಖಾನ್, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿ ಅವರ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತಿಕ್ ಇತರರು ಇದ್ದರು.

ಬರ ನಿರ್ವಹಣೆ ಹಾಗೂ ಮುಂಗಾರು ಸಂಬAಧ ಪೂರ್ವ ಸಿದ್ಧತೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಸಿಇಒ ಅವರಿಂದ ವಿಡಿಯೋ ಸಂವಾದ ಮೂಲಕ ಮಾಹಿತಿ ಪಡೆದರು.

ಕೊಡಗು ಜಿಲ್ಲೆಗೆ ಸಂಬAಧಿಸಿದAತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾಹಿತಿ ನೀಡಿದರು. ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.