ಕೂಡಿಗೆ, ಮೇ ೨೩: ಕೂಡಿಗೆಯ ಶ್ರೀ ದಂಡಿನಮ್ಮ, ಬಸವೇಶ್ವರ, ಮುತ್ತತ್ತಿರಾಯ ದೇವಸ್ಥಾನ ಹಾಗೂ ಗ್ರಾಮ ಸೇವಾ ಸಮಿತಿ ವತಿಯಿಂದ ತಾ. ೨೪ ರಂದು (ಇಂದು) ಗ್ರಾಮ ದೇವತೆಯ ಹಬ್ಬ ಮತ್ತು ಜಾತ್ರೋತ್ಸವ ನಡೆಯಲಿದೆ.

ಪೂಜಾ ಕಾರ್ಯಗಳು ಬೆಳಿಗ್ಗೆ ೯ ಗಂಟೆಯಿAದ ಮಧ್ಯಾಹ್ನ ೧೨.೩೦ ಗಂಟೆಯವರೆಗೆ ನಡೆದು ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ.

ರಾತ್ರಿ ೮ ಗಂಟೆಗೆ ಅಗ್ನಿ ಸ್ಥಾಪನೆ, ಶ್ರೀ ಬಸವೇಶ್ವರ ದೇವಾಲಯದಿಂದ ಗ್ರಾಮಸ್ಥರು, ಭಕ್ತಾದಿಗಳು ಕಾವೇರಿ ನದಿಗೆ ತೆರಳಿ ಕಲಶ ಪೂಜೆ, ಹಣ್ಣಾಡಗೆ ಉತ್ಸವ ಮತ್ತು ಕೊಂಡೋತ್ಸವ ಹಾಗೂ ಮುಂಜಾನೆ ಉಯ್ಯಾಲೆ ಮಹೋತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.