ಶರಣಾಗಲು ಪ್ರಜ್ವಲ್ ರೇವಣ್ಣಗೆ ದೇವೇಗೌಡ ಎಚ್ಚರಿಕೆ

ಬೆಂಗಳೂರು, ಮೇ ೨೩: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭಾರತಕ್ಕೆ ವಾಪಸ್ ಬರುವಂತೆ ಹಲವು ಬಾರಿ ಸೂಚಿಸಿದರು ಪ್ರಯೋಜನವಾಗಿಲ್ಲ. ಆದರೆ ಇದೀಗ ಅಖಾಡಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಇಳಿದಿದ್ದು ಎಲ್ಲೇ ಇದ್ದರೂ ಕೂಡಲೇ ಭಾರತಕ್ಕೆ ಮರಳುವಂತೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಜೆಡಿಎಸ್ ಅಧಿಕೃತ ಪ್ರಕಟಣೆ ಹೊರಡಿಸಿದೆ. ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು. ಆದರೂ ನಾನು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ ಎಂದು ಹೇಳಿದ್ದಾರೆ.

ಅಂಜಲಿ ಕೊಲೆ ಪ್ರಕರಣ: ಆರೋಪಿ ಸಿಐಡಿ ವಶಕ್ಕೆ

ಹುಬ್ಬಳ್ಳಿ, ಮೇ ೨೩: ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು ಹತ್ಯೆ ಮಾಡಿ ಬಂಧನಕ್ಕೊಳಗಾಗಿರುವ ಆರೋಪಿ ವಿಶ್ವ ಅಲಿಯಾಸ್ ಗಿರೀಶ್‌ನನ್ನು ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಎಂಟು ದಿನ ಸಿಐಡಿ ಕಸ್ಟಡಿಗೆ ನೀಡಿ ಗುರುವಾರ ಆದೇಶಿಸಿದೆ. ಪ್ರಕರಣ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಆರೋಪಿ ಗಿರೀಶ್‌ನನ್ನು ಇಂದು ಹುಬ್ಬಳ್ಳಿಯ ಜೆಎಂಎಫ್‌ಸಿ ಕೋರ್ಟ್ಗೆ ಹಾಜರುಪಡಿಸಿ, ಮತ್ತೆ ೧೫ ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆರೋಪಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗೇಶ್ ನಾಯ್ಕ್ ಅವರು, ಎಂಟು ದಿನ ಮಾತ್ರ ಸಿಐಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ. ಈ ವೇಳೆ ಆರೋಪಿ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ್ದಾನೆ. ಇದಕ್ಕೆ ಹತ್ಯೆ ಮಾಡುವಾಗ ಗೊತ್ತಾಗಲಿಲ್ವಾ ಎಂದು ಜಡ್ಜ್ ಗದರಿದರು. ಸಿಐಡಿ ವಿಚಾರಣೆ ವೇಳೆ ಆರೋಪಿ ವಿಶ್ವ ತಪ್ಪೊಪ್ಪಿಕೊಂಡಿದ್ದು, ಅಂಜಲಿಯನ್ನು ನಾನು ಮೈಸೂರಿಗೆ ಬಾ ಎಂದು ಕರೆದಿದ್ದೆ. ಆಕೆ ಬರಲಿಲ್ಲ. ಹಾಗಾಗಿ ಕೊಲೆ ಮಾಡಿದೆ ಎಂದಿದ್ದಾನೆ. ಜೊತೆಗೆ ಅಂಜಲಿ ಕೊಲೆಯಾಗುವ ಹಿಂದಿನ ದಿನವೇ ಅಂಜಲಿಗೆ ವಿಶ್ವ ೧೦೦೦ ರೂಪಾಯಿ ಫೋನ್ ಪೇ ಕೂಡ ಮಾಡಿದ್ದ. ರೂ. ೧೦೦೦ ಹಣ ತೆಗೆದುಕೊಂಡು ನಂತರ ಆಕೆ ಆತನನ್ನು ಬ್ಲಾಕ್ ಮಾಡಿದ್ದಳು. ಅದೇ ಕಾರಣಕ್ಕೆ ಸಿಟ್ಟು ಬಂದು ಕೊಲೆ ಮಾಡಿದ್ದೇನೆ ಎಂದು ವಿಶ್ವ ಸಿಐಡಿ ಅಧಿಕಾರಿಗಳ ಬಳಿ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.

೮೬ ಮಂದಿ ಮಾದಕ ದ್ರವ್ಯ ಸೇವನೆ ದೃಢ

ಬೆಂಗಳೂರು, ಮೇ ೨೩: ಇತ್ತೀಚೆಗೆ ಬೆಂಗಳೂರು ಹೊರ ವಲಯದ ಫಾರ್ಮ್ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದವರ ರಕ್ತದ ಮಾದರಿಗಳ ಫಲಿತಾಂಶ ಬಂದಿದ್ದು, ತೆಲುಗು ಚಿತ್ರರಂಗದ ನಟಿ ಸೇರಿದಂತೆ ೮೬ ಮಂದಿ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ಗುರುವಾರ ತಿಳಿಸಿವೆ. ಮೂಲಗಳ ಪ್ರಕಾರ ಬರ್ತ್ ಡೇ ಪಾರ್ಟಿ ನೆಪದಲ್ಲಿ ಆಯೋಜಿಸಲಾಗಿದ್ದ ರೇವ್ ಪಾರ್ಟಿಯಲ್ಲಿ ಒಟ್ಟು ೧೦೩ ಮಂದಿ ಪಾಲ್ಗೊಂಡಿದ್ದರು. ಭಾಗವಹಿಸಿದವರಲ್ಲಿ ೭೩ ಪುರುಷರು ಮತ್ತು ೩೦ ಮಹಿಳೆಯರು ಸೇರಿದ್ದಾರೆ. ಮೇ ೧೯ ರಂದು ಬೆಳ್ಳಂಬೆಳಗ್ಗೆ ಎಲೆಕ್ಟಾçನಿಕ್ ಸಿಟಿ ಬಳಿಯ ಫಾರ್ಮ್ಹೌಸ್‌ನಲ್ಲಿ ದಾಳಿ ನಡೆಸಿದ ಪೊಲೀಸರು ೧.೫ ಕೋಟಿ ಮೌಲ್ಯದ ಎಂಡಿಎAಎ ಮಾತ್ರೆಗಳು, ಹೈಡ್ರೋ ಗಾಂಜಾ, ಕೊಕೇನ್, ಹೈ ಎಂಡ್ ಕಾರುಗಳು, ಡಿ.ಜೆ. ಉಪಕರಣಗಳು, ಧ್ವನಿ ಮತ್ತು ಬೆಳಕು ಉಪಕರಣಗಳು ಸೇರಿದಂತೆ ರೂ. ೧.೫ ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ದಾಳಿಯ ನಂತರ, ಪೊಲೀಸರು ಖಾಸಗಿ ಆಸ್ಪತ್ರೆಯಲ್ಲಿ ಭಾಗವಹಿಸಿದವರ ರಕ್ತದ ಮಾದರಿಗಳನ್ನು ಸಂಗ್ರಹಿಸಿದ್ದರು, ಇದರಲ್ಲಿ ೫೯ ಪುರುಷರು ಮತ್ತು ೨೭ ಮಹಿಳೆಯರು ಮಾದಕ ದ್ರವ್ಯ ಪರೀಕ್ಷಾ ಫಲಿತಾಂಶ ಪಾಸಿಟಿವ್ ಬಂದಿದ್ದು, ಅವರು ಮಾದಕ ವಸ್ತು ಸೇವಿಸಿದ್ದಾರೆ ಎಂದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಛತ್ತೀಸ್‌ಗಢದಲ್ಲಿ : ೭ ಮಾವೋವಾದಿಗಳ ಹತ್ಯೆ

ನಾರಾಯಣಪುರ, ಮೇ ೨೩: ಛತ್ತೀಸ್‌ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯ ಅರಣ್ಯದಲ್ಲಿ ಗುರುವಾರ ಭದ್ರತಾ ಸಿಬ್ಬಂದಿಯೊAದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಏಳು ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿಯ ಜಂಟಿ ತಂಡ, ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಇಂದು ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ಗುಂಡಿನ ಚಕಮಕಿ ಆರಂಭವಾಯಿತು ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ಅವರು ಹೇಳಿದ್ದಾರೆ. ಈವರೆಗೆ ನಡೆದ ಗುಂಡಿನ ಚಕಮಕಿಯಲ್ಲಿ ಮಾವೋವಾದಿ ಸಮವಸ್ತçದಲ್ಲಿದ್ದ ಏಳು ನಕ್ಸಲರು ಗುಂಡೇಟಿಗೆ ಬಲಿಯಾಗಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.