ಸಿದ್ದಾಪುರ, ಮೇ ೨೩: ಅಂತರಸAತೆಗೆ ಸಾಗಿದ್ದ ಪುಂಡಾನೆಯು ಬಾಡಗ-ಬಾಣಂಗಾಲ ಕಾಫಿ ತೋಟದಲ್ಲಿ ಪ್ರತ್ಯಕ್ಷಗೊಂಡ ಹಿನ್ನೆಲೆಯಲ್ಲಿ ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಸಲಗವನ್ನು ಸೆರೆ ಹಿಡಿದು ಕ್ರಾಲ್‌ಗೆ ಸೇರಿಸಲು ಅನುಮತಿಗಾಗಿ ಮುಖ್ಯ ಅಧಿಕಾರಿಗಳ ಮುಖಾಂತರ ಸರಕಾರಕ್ಕೆ ಪತ್ರ ರವಾನಿಸಿದ್ದಾರೆ.

ಮಾಲ್ದಾರೆ ಬಾಡಗ-ಬಾಣಂಗಾಲ ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ದಾಂಧಲೆ ನಡೆಸಿ ಮಾನವನ ಮೇಲೆ ದಾಳಿ ನಡೆಸುತ್ತಿದ್ದ ಸಲಗವನ್ನು ಸೆರೆಹಿಡಿದು ರೇಡಿಯೋ ಕಾಲರ್ ಅಳವಡಿಸಿ ಅಂತರಸAತೆ ಕಾಡಿನಲ್ಲಿ ಬಿಡಲಾಗಿತ್ತು. ಆದರೆ ಇದೀಗ ಸಲಗವು ಹಿಂತಿರುಗಿ ಬಾಡಗ-ಬಾಣಂಗಾಲ ಗ್ರಾಮದ ಕಾಫಿ ತೋಟಗಳಲ್ಲಿ ಗಾಬರಿಯಿಂದ ಓಡಾಡುತ್ತಿದೆ. ಇದರಿಂದಾಗಿ ಗ್ರಾಮಸ್ಥರು ಕೂಡ ಭಯಭೀತರಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಸಲಗವನ್ನು ಸೆರೆ ಹಿಡಿದು ಕ್ರಾಲ್‌ಗೆ ಸೇರಿಸಲು ಅನುಮತಿಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಮುಖಾಂತರ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲು ಮುಂದಾಗಿದ್ದಾರೆ. ಸರಕಾರದಿಂದ ಅನುಮತಿ ದೊರೆತ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. -ವಾಸು