ಮಡಿಕೇರಿ, ಮೇ ೨೩: ಪ್ರಸಕ್ತ ಸಾಲಿಗೆ ಮಡಿಕೇರಿ ತಾಲೂಕು ಪರಿಶಿಷ್ಟ ಪಂಗಡದ ಆಶ್ರಮ ಶಾಲೆ, ಕರಿಕೆ, ಕಟ್ಟಪಳ್ಳಿ ಇಲ್ಲಿಗೆ ೧ ರಿಂದ ೫ನೇ ತರಗತಿವರೆಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಇತರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಪೆರಾಜೆ ಇಲ್ಲಿಗೆ ೫ನೇ ತರಗತಿಯಿಂದ ೧೦ನೇ ತರಗತಿ ವರೆಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೌಲಭ್ಯಗಳ ವಿವರ: ಉಚಿತ ಸಮವಸ್ತç, ಉಚಿತ ಬ್ಯಾಗ್, ಉಚಿತ ದಾಖಲಾತಿ (ಶುಲ್ಕ ರಹಿತ), ಉಚಿತ ಲೇಖನ ಸಾಮಗ್ರಿ, ಉಚಿತ ಹಾಸ್ಟೇಲ್ ಸೌಲಭ್ಯ, ಮೆನು ಚಾರ್ಟ್ ಪ್ರಕಾರ ಪೌಷ್ಟಿಕ ಆಹಾರ ಪೂರೈಕೆ, ನುರಿತ ಶಿಕ್ಷಕರಿಂದ ಬೋಧನೆ, ತಿಂಗಳಿಗೆ ಉಚಿತ “ಶುಚಿ ಸಂಭ್ರಮ ಕಿಟ್” (ಸೋಪು, ಪೇಸ್ಟ್, ಬ್ರಷ್, ತೆಂಗಿನಎಣ್ಣೆ), ಉಚಿತ ಆರೋಗ್ಯ ತಪಾಸಣೆ.

ಆಸಕ್ತ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕರು, ಆಶ್ರಮ ಶಾಲೆ ಕರಿಕೆ, ಕಟ್ಟಪಳ್ಳಿ ಮತ್ತು ವಾರ್ಡನ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಪೆರಾಜೆ ಮಡಿಕೇರಿ ತಾಲ್ಲೂಕು ಇಲ್ಲಿಂದ ಅರ್ಜಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಥಿಗಳು ಅರ್ಜಿಸಲ್ಲಿಸುವಾಗ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ವಾಸಸ್ಥಳ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿ ಹಾಗೂ ಹಿಂದಿನ ತರಗತಿ ಅಂಕಪಟ್ಟಿಯನ್ನು (SಂಖಿS Iಆ) ಹೊಂದಿರತಕ್ಕದ್ದು.

ಹೆಚ್ಚಿನ ಮಾಹಿತಿಗೆ ಮುಖ್ಯ ಶಿಕ್ಷಕರು, ಆಶ್ರಮ ಶಾಲೆ ಕರಿಕೆ ೮೬೧೮೫೪೬೦೦೯, ಮುಖ್ಯ ಶಿಕ್ಷಕರು, ಆಶ್ರಮ ಶಾಲೆ ಕಟ್ಟಪಳ್ಳಿ ೯೪೮೩೪೪೭೫೮೩, ವಾರ್ಡನ್, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಪೆರಾಜೆ ೯೪೮೩೪೪೭೫೮೩ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-೧), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂರವಾಣಿ ಸಂಖ್ಯೆ ೯೪೮೦೮೪೩೧೫೫ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.