ರೇವ್ ಪಾರ್ಟಿ ಪ್ರಕರಣ: ಎಎಸ್‌ಐ ಸೇರಿ ಮೂವರು ಅಮಾನತು

ಬೆಂಗಳೂರು, ಮೇ ೨೪: ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬAಧಿಸಿದAತೆ ಹೆಬ್ಬಗೋಡಿ ಪೊಲೀಸ್ ಠಾಣೆಯ ಎಎಸ್‌ಐ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ರೇವ್ ಪಾರ್ಟಿ ಬಗ್ಗೆ ಮಾಹಿತಿ ಕಲೆ ಹಾಕಲು ವಿಫಲವಾಗಿರುವ ಆರೋಪದ ಮೇಲೆ ಠಾಣೆಯ ಎಸ್.ಬಿ. ಗಿರೀಶ್, ಎಎಸ್‌ಐ ನಾರಾಯಣಸ್ವಾಮಿ, ಗಸ್ತು ಸಿಬ್ಬಂದಿ ಕಾನ್ಸ್ಟೇಬಲ್ ದೇವರಾಜು ಸೇರಿದಂತೆ ಮೂವರನ್ನು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಭೀಕರ ಅಪಘಾತದಲ್ಲಿ ನಾಲ್ವರು ಸಾವು

ಚಿಕ್ಕಮಗಳೂರು, ಮೇ ೨೪: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಶುಕ್ರವಾರ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ ಬಣಕಲ್ ಸಮೀಪ ರಾಷ್ಟಿçÃಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರು ಚಿತ್ರದುರ್ಗ ಮೂಲದವರು ಎನ್ನಲಾಗಿದೆ. ಕುಟುಂಬವೊAದು ಎರಡು ಕಾರುಗಳಲ್ಲಿ ಧರ್ಮಸ್ಥಳಕ್ಕೆ ತೆರಳಿತ್ತು. ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಾಪಸ್ ಬರುತ್ತಿದ್ದಾಗ ಓಮಿನಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಮೂಡಿಗೆರೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಸಿಡಿಲು ಬಡಿದು ಕಾಲೇಜು ವಿದ್ಯಾರ್ಥಿ ಸಾವು

ಉಡುಪಿ, ಮೇ ೨೪: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಉಡುಪಿ ತಾಲೂಕಿನ ಶಿರ್ವ ಮಾಣಿಬೆಟ್ಟು ಬಳಿ ಸಿಡಿಲು ಬಡಿದು ೨೦ ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ತಡರಾತ್ರಿ ನಡೆದ ಈ ಘಟನೆಯಲ್ಲಿ ರಕ್ಷಿತ್ ಪೂಜಾರಿ ಎಂಬ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ. ಪೊಲೀಸರ ಪ್ರಕಾರ, ಪೂಜಾರಿ ಅವರು ತಮ್ಮ ಮನೆಯ ಹೊರಾಂಗಣ ವಾಶ್ ರೂಂ ಬಳಿ ನಿಂತಿದ್ದಾಗ ಸಿಡಿಲು ಬಡಿದಿದೆ. ಕೂಡಲೇ ಅವರನ್ನು ಮಣಿಪಾಲದ ಕಸ್ತೂರಬಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಶಿರ್ವ ಮಾಣಿಬೆಟ್ಟುವಿನ ತೋಟದ ಮನೆಯಲ್ಲಿ ವಾಸಿಸುತ್ತಿದ್ದ ರಕ್ಷಿತ್ ಪೂಜಾರಿ ಅವರು ಶಿರ್ವದ ಎಂ.ಎಸ್.ಆರ್.ಎಸ್. ಕಾಲೇಜಿನಲ್ಲಿ ಎರಡನೇ ವರ್ಷದ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ ಮಾಡುತ್ತಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅಶ್ಲೀಲ ವೀಡಿಯೋ ಪ್ರಕರಣ: ಪ್ರಜ್ವಲ್‌ಗೆ ನೋಟೀಸ್

ನವದೆಹಲಿ, ಮೇ ೨೪: ನೂರಾರು ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವೀಡಿಯೋ ಬಹಿರಂಗವಾದ ನಂತರ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶಾಂಗ ಸಚಿವಾಲಯ ಶುಕ್ರವಾರ ಶೋಕಾಸ್ ನೋಟೀಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಪ್ರಕರಣ ತನಿಖೆ ನಡೆಸುತ್ತಿರುವ ಎಸ್‌ಐಟಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸೆರ್ಕಾರಕ್ಕೆ ಎರಡು ಬಾರಿ ಪತ್ರ ಬರೆದಿದ್ದರು. ಇದರ ಬೆನ್ನಲೇ ವಿದೇಶಾಂಗ ಸಚಿವಾಲಯ, ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟೀಸ್ ಜಾರಿ ಮಾಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಹಂತ ಹಂತವಾಗಿ ಸಂಕಷ್ಟ ಶುರುವಾದಂತಾಗಿದೆ. ವಿದೇಶಾಂಗ ಸಚಿವಾಲಯ ಇಂದು ಪ್ರಜ್ವಲ್ ರೇವಣ್ಣ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ವಿದೇಶಕ್ಕೆ ತೆರಳಲು ಕಾರಣವೇನು? ಆರೋಪದ ಬಗ್ಗೆ ಹಾಗೂ ತನಿಖೆಗೆ ಯಾವಾಗ ಹಾಜರಾಗುತ್ತೀರಿ? ಮತ್ತು ಪಾಸ್‌ಪೋರ್ಟ್ ರದ್ದುಗೊಳಿಸುವ ಬಗ್ಗೆ ಉತ್ತರಿಸುವಂತೆ ಸೂಚಿಸಲಾಗಿದೆ. ಎನ್‌ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರು ಏಪ್ರಿಲ್ ೨೬ರಂದೇ ದೇಶ ಬಿಟ್ಟು ಜರ್ಮನಿಗೆ ಹೋಗಿದ್ದಾರೆ. ಯಾವುದೇ ನೋಟೀಸ್ ಜಾರಿ ಮಾಡಿದರೂ ಸಹ ಪ್ರಜ್ವಲ್ ರೇವಣ್ಣ ಕ್ಯಾರೇ ಎನ್ನುತ್ತಿಲ್ಲ. ಹೀಗಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಅವರಿಗೆ ಎರಡು ಬಾರಿ ಪತ್ರ ಬರೆದಿದ್ದಾರೆ.