ಕೂಡಿಗೆ, ಮೇ ೨೫: ಕಳೆದ ೧೫ . ದಿನಗಳಿಂದ ಸತತವಾಗಿ ಹಾರಂಗಿ ಜಲಾನಯನ ಪ್ರದೇಶದಲ್ಲಿ ಸುರಿ ಯುತ್ತಿರುವ ಮಳೆಯಿಂದಾಗಿ ಹಾರಂಗಿ ಅಣೆಕಟ್ಟೆಯ ನೀರಿನ ಸಂಗ್ರಹದ ಪ್ರಮಾಣವು ಹೆಚ್ಚಳವಾಗುತ್ತಿದೆ.

ಹಾರಂಗಿ ಜಲಾನಯನ ಪ್ರದೇ ಶಗಳಾದ ಹಟ್ಟಿಹೊಳೆ, ಮುಕ್ಕೋಡ್ಲು, ಮಾದಾಪುರ, ಸೇರಿದಂತೆ ವಿವಿಧ ಗ್ರಾಮಗಳ ಜಲಾನಯನ ಪ್ರದೇಶದಲ್ಲಿ ಕಳೆದ ೧೫ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಈ ಭಾಗದ ನೀರು ಉಪನದಿಗಳ ಮೂಲಕ ಹಾರಂಗಿ ಯನ್ನು ಸೇರುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಅಣೆಕಟ್ಟೆಯ ನೀರಿನ ಸಂಗ್ರಹದ ಮಟ್ಟ ದಿನಕಳೆದಂತೆ ಹೆಚ್ಚಳವಾಗುತ್ತಿದೆ.

ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಮಟ್ಟ ಹೆಚ್ಚಾಗುತ್ತಿರುವ ಹಿನ್ನೆಲೆ ಹಾರಂಗಿ ನಾಲೆಯ ಅಚ್ಚುಕಟ್ಟು ಪ್ರದೇಶದ ರೈತರು ಹರ್ಷ ದಾಯಕರಾಗಿದ್ದಾರೆ.

-ಕೆ.ಕೆ. ನಾಗರಾಜಶೆಟ್ಟಿ