ಪೊನ್ನAಪೇಟೆ, ಮೇ ೨೫: ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊನ್ನಂಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊನ್ನಂಪೇಟೆ ಶಿವ ಕಾಲೋನಿಯಲ್ಲಿ ವಾಸವಾಗಿದ್ದ ಮಧು ಎಂಬವನೇ ಬಂದಿತ ಆರೋಪಿ.

ಪೊನ್ನಂಪೇಟೆಯ ಮುತ್ತಪ್ಪ ದೇವಸ್ಥಾನದ ಸಮೀಪ ಆಟೋ ರಿಕ್ಷಾ (ಕೆಎ.೧೨, ಬಿ.೩೧೭೪) ದಲ್ಲಿ ಹುದೂರು ಕಡೆಯಿಂದ ಪೊನ್ನಂಪೇಟೆ ಕಡೆಗೆ ಗಾಂಜಾವನ್ನು ಮಾರಾಟ ಮಾಡಲು ಬರುತಿದ್ದ ಸಂದರ್ಭ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಮಾಲು ಸಮೇತ ಆರೋಪಿಯನ್ನು ಬಂದಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಮತ್ತು ಹೆಚ್ಚುವರಿ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರ ನಿರ್ದೇಶನದ ಮೇರೆಗೆ, ವೀರಾಜಪೇಟೆ ತಾಲೂಕು ಡಿವೈಎಸ್‌ಪಿ ಮೋಹನ್ ಕುಮಾರ್, ಗೋಣಿಕೊಪ್ಪ ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್ ಮುಧೋಳ್ ಮಾರ್ಗದರ್ಶನದಲ್ಲಿ, ಪೊನ್ನಂಪೇಟೆ ಠಾಣಾಧಿಕಾರಿ ನವೀನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಪರಾಧ ದಳ ಉಪನಿರೀಕ್ಷಕ ಬಿ.ಶ್ರೀಧರ್, ಸಿಬ್ಬಂದಿಗಳಾದ ಮಹದೇಶ್ವರ ಸ್ವಾಮಿ, ಮುತ್ತುರಾಜ್, ರವಿ ಸಿಂಗ್, ಹರೀಶ್, ಮಂಜುನಾಥ್, ಬಾಳಪ್ಪ ಇನ್ನಿತರರು ಭಾಗವಹಿಸಿದ್ದರು.