ಮಡಿಕೇರಿ, ಮೇ ೨೫: ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ ೯ ತಿಂಗಳ ತೋಟಗಾರಿಕೆ ತರಬೇತಿಯು ೨೦೨೪ರ ಜುಲೈ ೧ ರಿಂದ ೨೦೨೫ ರ ಮಾರ್ಚ್ ೩೧ ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್‌ನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದೆ.

ಅರ್ಜಿ ಸಲ್ಲಿಸಲು ಜೂನ್ ೩ರ ಸಂಜೆ ೫.೩೦ ಗಂಟೆಗೆ ಕೊನೆಯ ದಿನವಾಗಿದೆ. ಅರ್ಜಿಯನ್ನು ಈ ಕಚೇರಿಯಿಂದ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯ ವಲಯ, ಮಡಿಕೇರಿ ಕಚೇರಿಯನ್ನು ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ರೊಳಗೆ ಸಂಪರ್ಕಿಸಬಹುದು ಮತ್ತು ಅಂತರ್ಜಾಲ hಣಣಠಿs://hoಡಿಣiಛಿuಟಣuಡಿeಜiಡಿ.ಞಚಿಡಿಟಿಚಿಣಚಿಞಚಿ.gov.iಟಿ ದಲ್ಲಿ ಅರ್ಜಿ ಪಡೆಯಬಹುದು. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ, ತಾಯಿ, ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ, ತಾಯಿಯವರ ಒಪ್ಪಿಗೆ ಪತ್ರ ಮತ್ತಿತರ) ಅರ್ಹ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ (ರಾಜ್ಯ ವಲಯ), ಮಡಿಕೇರಿ ಇಲ್ಲಿ ಖುದ್ದು ಸಲ್ಲಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.