ಸಿದ್ದಾಪುರ, ಮೇ ೨೫: ಜಿಲ್ಲೆಯಲ್ಲಿ ಎರಡು ಕಾಡಾನೆಗಳು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಕಾಡಾನೆ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪ ಬಳಿ ತೊಂಡೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ತೊಂಡೂರು ಗ್ರಾಮದ ನಿವಾಸಿ ರಘು ಎಂಬವರ ಕಾಫಿ ತೋಟದಲ್ಲಿ ಶನಿವಾರದಂದು ಬೆಳಿಗ್ಗೆ ಕಾರ್ಮಿಕರು ಕೆಲಸಕ್ಕೆ ತೆರಳುವ ಸಂದರ್ಭ ಕಾಡಾನೆ ಮೃತಪಟ್ಟಿರುವುದು ಗೋಚರಿಸಿದೆ. ಅಂದಾಜು ೧೮ ರಿಂದ ೨೦ ವರ್ಷ ಪ್ರಾಯದ ಮಖಾನ ಆನೆ ಸಾವನ್ನಪ್ಪಿರುವುದು ಕಂಡುಬAದಿದೆ. ೩ಐದನೇ ಪುಟಕ್ಕೆ
(ಮೊದಲ ಪುಟದಿಂದ) ಸ್ಥಳಕ್ಕೆ ಮಡಿಕೇರಿ ವಿಭಾಗದ ಡಿಸಿಎಫ್ ಭಾಸ್ಕರ್, ಸೋಮವಾರಪೇಟೆ ತಾಲೂಕು ಎಸಿಎಫ್ ಎ.ಎ. ಗೋಪಾಲ್, ವನ್ಯಜೀವಿ ವೈದ್ಯಾಧಿಕಾರಿ ಡಾ. ಚಿಟ್ಟಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ವೈದ್ಯಾಧಿಕಾರಿ ಚಿಟ್ಟಿಯಪ್ಪ ಸಾವನ್ನಪ್ಪಿರುವ ಕಾಡಾನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಆನೆಯ ಕಳೇಬರವನ್ನು ತೋಟದೊಳಗೆ ಹೂತು ಹಾಕಲಾಯಿತು.
ಕಾಡಾನೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾಫಿ ತೋಟದಲ್ಲಿ ಕೆಳಮಟ್ಟದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿ ಸ್ಪರ್ಶವಾಗಿ ಕಾಡಾನೆಯ ತಲೆ ಹಾಗೂ ಕಾಲಿನ ಭಾಗಕ್ಕೆ ಗಾಯವಾಗಿದ್ದು, ಸ್ಥಳದಲ್ಲಿಯೇ ಸಾವನಪ್ಪಿದೆ.