ಕೂಡಿಗೆ, ಮೇ ೨೬: ಕಾಲು ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಇಲ್ಲಿಗೆ ಸಮೀಪದ ಶಿರಂಗಾಲ ವ್ಯಾಪ್ತಿಯ ಮೂಡಲಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಶಿರಂಗಾಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಸಹಕಾರ ಸಂಘದ ಹಾಲಿ ಸದಸ್ಯ ಡಿ.ಎ. ಲೋಕೇಶ್ (೬೦) ಮೃತ ದುರ್ದೈವಿ. ಮನೆಯ ಹತ್ತಿರ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಪರಿಣಾಮ ತಲೆಯ ಭಾಗಕ್ಕೆ ತೀವ್ರವಾದ ಪೆಟ್ಟು ಬಿದ್ದು, ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಾ. ೨೭ ರಂದು (ಇಂದು) ಸ್ವಗ್ರಾಮದಲ್ಲಿ ನಡೆಯಲಿದೆ. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.