ಮಡಿಕೇರಿ, ಮೇ ೨೭: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯು ೨೦೨೪ರ ಜುಲೈ ೧ ರಿಂದ ೬ ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಸಹಕಾರ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕುಗಳ ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ತರಬೇತಿ ಪಡೆಯಲು ಕನಿಷ್ಟ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಸಾಮಾನ್ಯ ಅಭ್ಯರ್ಥಿಗಳಿಗೆ ರೂ. ೫೦೦ ಶಿಷ್ಯವೇತನ ಮತ್ತು ವಿಶೇಷ ನಿರುದ್ಯೋಗ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ. ೬೦೦ ಶಿಷ್ಯವೇತನ ನೀಡಲಾಗುವುದು ಹಾಗೂ ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಉಚಿತ ವಸತಿ ಗೃಹದ ವ್ಯವಸ್ಥೆ ಇರುತ್ತದೆ.

ಅರ್ಜಿ ಫಾರಂನ್ನು ಪ್ರಾಂಶುಪಾಲರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಮುತ್ತಪ್ಪ ದೇವಸ್ಥಾನದ ಹತ್ತಿರ, ಅಬ್ಬಿಫಾಲ್ಸ್ ರಸ್ತೆ, ಮಡಿಕೇರಿ -೫೭೧೨೦೧ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಪೆನ್ಸನ್ ಲೇನ್, ನಗರಸಭೆ ಹಿಂಭಾಗ ರಸ್ತೆ, ಮಡಿಕೇರಿ-೫೭೧೨೦೧ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಹಾಸನ ಜಿಲ್ಲಾ ಸಹಕಾರ ಯೂನಿಯನ್, ಹಳೆ ಬಸ್ ನಿಲ್ದಾಣದ ಹತ್ತಿರ, ಹಾಸನ-೫೭೩೨೦೧ ಇಲ್ಲಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂ. ೮೭೯೨೬೨೮೪೩೭, ೯೬೬೩೧೫೩೯೨೨, ೮೭೬೨೯೨೫೮೬೨, ೮೭೬೨೧೧೦೯೫೨, ೯೮೪೫೩೧೮೩೬೪ ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಕೆಐಸಿಎಂ ಪ್ರಾಂಶುಪಾಲೆ ಡಾ. ಆರ್.ಎಸ್. ರೇಣುಕಾ ತಿಳಿಸಿದ್ದಾರೆ.