ಮಡಿಕೇರಿ, ಮೇ ೨೭: ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅಧ್ಯಕ್ಷತೆಯಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವುದು ಹಾಗೂ ಶುದ್ಧ ಕುಡಿಯುವ ನೀರು ಪೂರೈಕೆ ಸಂಬAಧಿಸಿದAತೆ ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಭೆ ನಡೆಯಿತು.
ನಗರದ ಉಪ ವಿಭಾಗಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಡಿಕೇರಿ ತಾಲೂಕಿನಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವುದು, ಪ್ರವಾಹ ಪೀಡಿತ ಪ್ರದೇಶ ಹಾಗೂ ಭೂಕುಸಿತ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವುದು ಮತ್ತಿತರ ಸಂಬAಧ ಸುದೀರ್ಘ ಚರ್ಚೆ ನಡೆಯಿತು.
ಪ್ರತೀ ಗ್ರಾ.ಪಂ. ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಸಬೇಕು. ಜೊತೆಗೆ ಪ್ರತಿ ನಿತ್ಯ ಕುಡಿಯುವ ನೀರನ್ನು ಪರೀಕ್ಷೆ ಮಾಡಬೇಕು. ಹಾಗೆಯೇ ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಮುನ್ನೆಚ್ಚರ ವಹಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಚಿತವಾಗಿ ಮಾಹಿತಿ ನೀಡಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಬೇಕು.
ಮುAಗಾರು ಸಂದರ್ಭದಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಕರ್ತವ್ಯ ನಿರ್ವಹಿಸಬೇಕು. ಇಲ್ಲಿನ ಸ್ಥಳೀಯ ಸಮಸ್ಯೆಗಳನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ವಿನಾಯಕ ನರ್ವಾಡೆ ಸೂಚಿಸಿದರು.
ತಾಲೂಕು ನೋಡಲ್ ಅಧಿಕಾರಿ ಹಾಗೂ ತಹಶೀಲ್ದಾರ್ ರಮೇಶ್ ಬಾಬು, ನೋಡಲ್ ಅಧಿಕಾರಿಗಳಾದ ಶೇಖರ್, ಗಿರೀಶ್, ವಿನಯಕುಮಾರ್, ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ವಿರೂಪಾಕ್ಷ, ತಾಲೂಕು ವೈದ್ಯಾಧಿಕಾರಿ ಚೇತನ್, ತಾ.ಪಂ. ಇಒ ನಾಗಮಣಿ, ಪೌರಾಯುಕ್ತ ವಿಜಯ್, ಸಿಡಿಪಿಒ ಸೀತಾಲಕ್ಷಿö್ಮ, ಕುಡಿಯುವ ನೀರು ವಿಭಾಗದ ಎಇಇ ಹರ್ಷದ್ ಪಾಷಾ, ಹೋಬಳಿ ಮಟ್ಟದ ಕಂದಾಯ ನಿರೀಕ್ಷಕರು ಇತರರು ಇದ್ದರು.