ಮೇ ೨೭ : ಕುಶಾಲನಗರ ಯೋಜನಾ ಪ್ರಾಧಿಕಾರ (ಕುಡಾ) ಸದಸ್ಯ ಕಾರ್ಯದರ್ಶಿ ವಿರುದ್ಧ ಕುಶಾಲನಗರ ತಾಲೂಕು ಸಮಾನ ಮನಸ್ಕರ ವತಿಯಿಂದ ಪ್ರಾಧಿಕಾರದ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಕುಶಾಲನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸದೆ ದರ್ಪದಿಂದ ವರ್ತಿಸುತ್ತಿದ್ದು ಕಚೇರಿಗೆ ಬರುವ ಸಾಮಾನ್ಯ ಜನರೊಂದಿಗೆ ಸರ್ವಾಧಿಕಾರಿ ಧೋರಣೆ ತಾಳುತ್ತಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸುವಂತೆ ಪಟ್ಟುಹಿಡಿದರು. ತಪ್ಪಿದ್ದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯ ಮಾಹಿತಿ ತಿಳಿದ ಮಡಿಕೇರಿ ಉಪವಿಭಾಗಾಧಿಕಾರಿ ವಿನಾಯಕ್ ನರ್ವಾಡೆ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ದೂರು ಆಲಿಸಿ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಕುಶಾಲನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಿಗೆ ಸಂಬAಧಿಸಿದAತೆ ಸಾರ್ವಜನಿಕರು ದೂರು ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ದೂರಿನ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗವುದು. ಕುಡಾ ಕಚೇರಿಯಲ್ಲಿ ಸಿಸಿ ಕ್ಯಾಮರಾ ಹಾಗೂ ಬಯೋಮೆಟ್ರಿಕ್ ೩ಐದನೇ ಪುಟಕ್ಕೆ

(ಮೊದಲ ಪುಟದಿಂದ) ಅಳವಡಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು ಎಂದರು. ಉಪವಿಭಾಗಾಧಿಕಾರಿ ಅವರ ಭರವಸೆಯ ಮೇರೆಗೆ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂಪಡೆದರು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಕುಶಾಲನಗರ ಯೂತ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಆದಂ ಮಾತನಾಡಿ, ಸಾರ್ವಜನಿಕರೊಡನೆ ದರ್ಪದಿಂದ ವರ್ತಿಸುವ ಅಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಬೇಕು. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸ್ಪಂದಿಸದೆ ವಿನಾಕಾರಣ ಅಲೆದಾಡುವಂತೆ ಮಾಡುತ್ತಿದ್ದಾರೆ. ಕುಶಾಲನಗರದಲ್ಲಿ ಅಕ್ರಮ ಬಡಾವಣೆಗಳು ತಲೆ ಎತ್ತಿದರೂ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದ ಅವರು, ಮೇಲಧಿಕಾರಿಗಳು ತನಿಖೆ ಮಾಡಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಕರ್ನಾಟಕ ಕಾವಲು ಪಡೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ ಮಾತನಾಡಿ, ಕಚೇರಿಯಲ್ಲಿ ಸಾರ್ವಜನಿಕರ ಅರ್ಜಿ ಹರಿದು ಹಾಕುವ ಮೂಲಕ ಅಧಿಕಾರದ ದರ್ಪ ತೋರುವ ಅಧಿಕಾರಿಯನ್ನು ಕೊಡಲೇ ವರ್ಗಾಯಿಸಬೇಕು ಎಂದು ಆಗ್ರಹಿಸಿದರು. ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಕೆ.ಬಿ.ರಾಜು ಮಾತನಾಡಿದರು. ಪ್ರತಿಭಟನೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಎಚ್.ಸಿ.ಜಯಪ್ರಕಾಶ್, ಉಪಾಧ್ಯಕ್ಷ ಇಬ್ರಾಹೀಂ, ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಜಗದೀಶ್, ಮಹಿಳಾ ಸಮಾಜದ ಅಧ್ಯಕ್ಷೆ ಸೆಲಿನಾ ಡಿಕುನ್ನಾ, ಕಾರ್ಯದರ್ಶಿ ಶೈಲಾ ಕುಮಾರಿ, ಕರ್ನಾಟಕ ಕಾವಲು ಪಡೆ ತಾಲೂಕು ಅಧ್ಯಕ್ಷೆ ಇಂದಿರಾ, ಹರದೂರು ಗ್ರಾ.ಪಂ ಸದಸ್ಯ ಎಂ.ಎ.ಮುಸ್ತಫ, ಕಾಂಗ್ರೆಸ್ ಮುಖಂಡ ಎಂ.ಇ.ಮುಸ್ತಫ, ಆರ್.ಪಿ.ಐ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಕೆ.ಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್, ಹೋಬಳಿ ಅಧ್ಯಕ್ಷ ಮಂಜುನಾಥ್, ಡಾ.ಬಿ.ಆರ್.ಅಂಬೇಡ್ಕರ್ ಜನಪರ ವೇದಿಕೆ ನಗರಾಧ್ಯಕ್ಷ ಶರಣ್, ಸ್ಥಳೀಯ ಪ್ರಮುಖರಾದ ಪರಮೇಶ್, ನಯಾಜ್, ಶಕೀಲ್, ಸಚಿನ್, ಅಸ್ಲಂ, ನಯಾಜ್ ಡೀನ್, ಬಾಬು ಹಾಗೂ ಇನ್ನಿತರರು ಇದ್ದರು.