ಮಡಿಕೇರಿ, ಮೇ ೨೭: ಸಂಸ್ಕೃತಿ, ಪರಂಪರೆ, ಪದ್ಧತಿ ಮತ್ತು ಆಚಾರ ವಿಚಾರಗಳು ಉಳಿಯಬೇಕಾದರೆ ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಅಗತ್ಯ ವಾಗಿದೆ ಎಂದು ಸಾಹಿತಿ ಪಿ.ಎಸ್. ವೈಲೇಶ್ ಅಭಿಪ್ರಾಯಪಟ್ಟಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಕೊಡವ ಮಕ್ಕಡ ಕೂಟದ ೯೧ನೇ ಪುಸ್ತಕ, ಲೇಖಕಿ ಚೀರಮ್ಮನ ವಾಣಿ ಚಂಗು ವಮ್ಮಯ್ಯ ಅವರ ೩ನೇ ಪುಸ್ತಕ "ತಾಳ್ಮೆರ ತಾವರೆ"ಯ ಬಿಡುಗಡೆ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಅವರು ಮಾತನಾಡಿ ದರು. ಕೊಡಗಿನ ಆಚಾರ, ವಿಚಾರ, ಸಂಸ್ಕೃತಿ, ಪದ್ಧತಿ, ಪರಂಪರೆ ಇಂದಿಗೂ ಶ್ರೀಮಂತವಾಗಿರಲು ಸಾಹಿತ್ಯವೇ ಕಾರಣ. ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ, ಕೊಡಗಿನ ಗೌರಮ್ಮ ಸೇರಿದಂತೆ ಅನೇಕ ಹಿರಿಯ ಸಾಹಿತಿಗಳ ಹೆಸರು ಚಿರ ಸ್ಥಾಯಿಯಾಗಿ ಉಳಿದಿದೆ. ಅವರ ಹೆಸರು, ಖ್ಯಾತಿ ಉಳಿದುಕೊಂಡಿ ರುವುದು ಸಾಹಿತ್ಯದಿಂದ ಎಂದರು.
ಕೊಡಗಿನ ಸಾಹಿತ್ಯ ಕ್ಷೇತ್ರದಲ್ಲಿ ಸಾಹಿತಿಗಳೇ ಇಲ್ಲ ಎಂಬ ಕಾಲಘಟ್ಟ ವಿತ್ತು. ಆದರೆ ಇಂದು ಜಿಲ್ಲೆಯಲ್ಲ್ಲಿ ಸಾಹಿತ್ಯದ ಸುವರ್ಣಕಾಲ ಆರಂಭವಾ ಗಿದೆ. ಆದರೆ ನೈಜ ಸಾಧಕರು ಮೂಲೆ ಗುಂಪಾಗುತ್ತಿದ್ದು, ಎಲ್ಲರನ್ನೂ ಗುರುತಿ ಸುವ ಕೆಲಸ ಆಗಬೇಕು. ಪ್ರಸ್ತುತ ದಿನಗಳಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಸ್ವಾರ್ಥ ಸಾಧನೆ ಸೇರಿಕೊಂಡಿರುವುದು ಬೇಸರ ಸಂಗತಿ, ನಿಜವಾದ ಸಾಹಿತಿಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ತಿಳಿಸಿದರು.
ಸಾಹಿತ್ಯ ಎಲ್ಲಾ ಪದ್ಧತಿ, ಪ್ರಕಾರ ಗಳನ್ನು ಉಳಿಸುತ್ತದೆ. ಕನ್ನಡ ಭಾಷೆಯ ಸಹೋದರಿ ಭಾಷೆ ಕೊಡವ ಭಾಷೆಯಲ್ಲಿ ಸಾಹಿತ್ಯದ ಬೆಳವಣಿಗೆ ಇಲ್ಲದ ಕಾಲದಲ್ಲಿ ಸಂಘ, ಸಂಸ್ಥೆಗಳು, ಪತ್ರಿಕೆಗಳು ಕೊಡವ ಸಾಹಿತ್ಯವನ್ನು ಮೇರು ಮಟ್ಟದಲ್ಲಿ ತಂದಿರಿಸಿವೆ. ಇಂತಹ ಸಾಹಿತ್ಯ ಸೇವೆಗೆ ಒತ್ತಾಸೆ ನೀಡಿದವರಲ್ಲಿ ಕೊಡವ ಮಕ್ಕಡ ಕೂಟವು ಒಂದು. ಪುಸ್ತಕವನ್ನು ಮುದ್ರಿಸಿ ಪ್ರಕಟಿಸುವುದು ಸವಾಲಿನ ಕೆಲಸ, ಅದನ್ನು ಕೂಟದ ಸ್ಥಾಪಕಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾಡುತ್ತಿದ್ದು, ೧೦೦ನೇ ಪುಸ್ತಕಕ್ಕೆ ನೂರು ಲೇಖಕರ ಬರಹವನ್ನು ಸಂಗ್ರಹಿಸಿ ಪುಸ್ತಕ ಪ್ರಕಟಿಸುವುದು ಸಾಹಿತ್ಯ ಕ್ಷೇತ್ರದಲ್ಲಿ ಅಮೋಘ ಸಾಧನೆ ಎಂದು ವೈಲೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.
ಪುಸ್ತಕ ಬಿಡುಗಡೆಗೊಳಿಸಿ ಮಾತ ನಾಡಿದ ಹಿರಿಯ ಸಾಹಿತಿ ಬಾಚಮಂಡ ಗೌರಮ್ಮ ಮಾದಮ್ಮಯ್ಯ, "ತಾಳ್ಮೆರ ತಾವರೆ" ಪುಸ್ತಕದ ಲೇಖಕಿ ಚೀರಮ್ಮನ ವಾಣಿ ಚಂಗುವಮ್ಮಯ್ಯ ವಿಶೇಷ ಚೇತನಳಾಗಿ, ಮನೆಯಲ್ಲೇ ಅಕ್ಷರಾಭ್ಯಾಸ ಮಾಡಿ, ಸಾಹಿತ್ಯ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದರು. ಮುಂದಿನ ದಿನಗಳಲ್ಲಿ ಮತ್ತಷ್ಟು ಪುಸ್ತಕಗಳನ್ನು ಬರೆಯುವಂತಾ ಗಲಿ ಎಂದು ಶುಭ ಹಾರೈಸಿದರು.
"ತಾಳ್ಮೆರ ತಾವರೆ" ಲೇಖಕಿ ಚೀರಮ್ಮನ ವಾಣಿ ಚಂಗುವಮ್ಮಯ್ಯ ಮಾತನಾಡಿ, ತಾಳ್ಮೆರ ತಾವರೆ ಪುಸ್ತಕವು ಕಾವೇರಿ ಮಾತೆ, ಗಿಡ, ಪ್ರಕೃತಿ, ಪ್ರಾಣಿ, ಪಕ್ಷಿ, ಆಸೆ, ಭಾಷೆ, ಸುಖ, ದು:ಖ, ನೋವು, ನಲಿವು, ತಂದೆ, ತಾಯಿಗೆ ಸಂಬAಧಿಸಿದAತೆ ೨೦೧ ಕವನಗಳನ್ನು ಹೊಂದಿದೆ ಎಂದರು.
ಪ್ರಸ್ತುತ ದಿನಗಳಲ್ಲಿ ಓದುಗರ ಸಂಖ್ಯೆ ಕಡಿಮೆಯಾಗಿದೆ. ಪುಸ್ತಕಗಳನ್ನು ಮೂಲೆ ಗುಂಪಾಗಿಸದೆ ಪ್ರತಿಯೊಬ್ಬರು ಓದಬೇಕು. ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಿದರೆ ಸಾಹಿತಿಗಳ ಸಂಖ್ಯೆಯೂ ಹೆಚ್ಚಾಗುತ್ತದೆ ಎಂದ ಅವರು, ಮತ್ತಷ್ಟು ಪುಸ್ತಕಗಳನ್ನು ಹೊರತರುವ ಹಂಬಲವಿದೆ ಎಂದರು.
ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಮಾತನಾಡಿ, ಕೊಡವ ಮಕ್ಕಡ ಕೂಟ ಹೊಸ ಬರಹಗಾರರನ್ನು ಪ್ರೋತ್ಸಾಹಿಸುವ ಕೆಲಸವನ್ನು ನಿರಂತರವಾಗಿ ಮಾಡಲಿದೆ. ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕೃತಿ, ಸಾಹಿತ್ಯ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ ನಿರಂತರ ಕಾರ್ಯನಿರ್ವ ಹಣೆಯಲ್ಲಿ ತೊಡಗಿದೆ. ಕೊಡವ ಮಕ್ಕಡ ಕೂಟ ಈಗಾಗಲೇ ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಒಟ್ಟು ೯೧ ಕೃತಿಗಳನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದರು.
೧೦೦ ಬರಹಗಾರರ ಲೇಖನ ವನ್ನೊಳಗೊಂಡ ನೂರನೇ ಪುಸ್ತಕವನ್ನು ಹೊರ ತರಲು ಕೂಟ ಸಿದ್ಧತೆ ನಡೆಸಿದ್ದು, ಬರಹಗಾರರು ಬರಹ ಕಳುಹಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಕೂಪದಿರ ಗೊಂಬೆ ಉತ್ತಪ್ಪ ಹಾಗೂ ಕೂಪದಿರ ಜುನಾ ವಿಜಯ್ ಉಪಸ್ಥಿತರಿದ್ದರು. ಬೊಳ್ಳಜಿರ ಬಿ. ಅಯ್ಯಪ್ಪ ಮಾತನಾಡಿ, ಕೊಡವ ಮಕ್ಕಡ ಕೂಟ ಹೊಸ ಬರಹಗಾರರನ್ನು ಪ್ರೋತ್ಸಾಹಿಸುವ ಕೆಲಸವನ್ನು ನಿರಂತರವಾಗಿ ಮಾಡಲಿದೆ. ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕೃತಿ, ಸಾಹಿತ್ಯ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ ನಿರಂತರ ಕಾರ್ಯನಿರ್ವ ಹಣೆಯಲ್ಲಿ ತೊಡಗಿದೆ. ಕೊಡವ ಮಕ್ಕಡ ಕೂಟ ಈಗಾಗಲೇ ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಒಟ್ಟು ೯೧ ಕೃತಿಗಳನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದರು.
೧೦೦ ಬರಹಗಾರರ ಲೇಖನ ವನ್ನೊಳಗೊಂಡ ನೂರನೇ ಪುಸ್ತಕವನ್ನು ಹೊರ ತರಲು ಕೂಟ ಸಿದ್ಧತೆ ನಡೆಸಿದ್ದು, ಬರಹಗಾರರು ಬರಹ ಕಳುಹಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಕೂಪದಿರ ಗೊಂಬೆ ಉತ್ತಪ್ಪ ಹಾಗೂ ಕೂಪದಿರ ಜುನಾ ವಿಜಯ್ ಉಪಸ್ಥಿತರಿದ್ದರು.