ಸಿದ್ದಾಪುರ, ಮೇ ೨೭: ಮಾಲ್ದಾರೆ- ಬಾಡಗ ಬಾಣಂಗಾಲ ಗ್ರಾಮದಲ್ಲಿ ಎರಡು ಕಾಡಾನೆಗಳನ್ನು ಸೆರೆಹಿಡಿದು ರೇಡಿಯೋ ಕಾಲರ್ ಅಳವಡಿಸಲು ಅರಣ್ಯ ಇಲಾಖೆ ಕ್ರಮಕೈಗೊಳ್ಳಲಿದೆ ಎಂದು ವೀರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಹೆಚ್. ಜಗನ್ನಾಥ್ ಮಾಹಿತಿ ನೀಡಿದ್ದಾರೆ.
ಮಾಲ್ದಾರೆ - ಬಾಡಗ ಬಾಣಂಗಾಲ ಗ್ರಾಮದ ಕಾಫಿ ತೋಟಗಳಲ್ಲಿ ೪೦ಕ್ಕೂ ಹೆಚ್ಚು ಕಾಡಾನೆಗಳು ಮರಿಯಾನೆಗಳೊಂದಿಗೆ ಬೀಡುಬಿಟ್ಟಿವೆ. ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು ದಾಂಧಲೆ ನಡೆಸುತ್ತಾ ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿವೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ವತಿಯಿಂದ ಎರಡು ಹೆಣ್ಣಾನೆಗಳನ್ನು ಸೆರೆಹಿಡಿದು ಅವುಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಬಿಡಲಾಗುವುದು ಎಂದು ತಿಳಿಸಿದ್ದಾರೆ. ಕಾಡಾನೆಗಳ ಹಿಂಡಿನ ಪೈಕಿ ಕಾಡಾನೆಗಳ ಎರಡು ಗುಂಪುಗಳಿದ್ದು, ಈ ಪೈಕಿ ತಲಾ ಒಂದೊAದು ಆನೆಗಳನ್ನು ಸಾಕಾನೆಗಳ ನೆರವಿನಿಂದ ಸೆರೆ ೩ಐದನೇ ಪುಟಕ್ಕೆ
(ಮೊದಲ ಪುಟದಿಂದ) ಹಿಡಿದು ರೇಡಿಯೋ ಕಾಲರ್ ಅಳವಡಿಸಲು ಅರಣ್ಯ ಇಲಾಖೆ ನಿರ್ಧರಿಸಿದೆ. ಸೆರೆಹಿಡಿದ ಹೆಣ್ಣಾನೆಗಳನ್ನು ರೇಡಿಯೋ ಕಾಲರ್ ಅಳವಡಿಸಿ ಅದಕ್ಕೆ ಆಕಾಂಕ್ಷ ಹಾಗೂ ಮೀರ ಗುಂಪು ಎಂದು ನಾಮಕರಣಗಳನ್ನು ಮಾಡಿ ಆಯಾ ಕಾಡಾನೆಗಳ ಹಿಂಡಿನೊAದಿಗೆ ಬಿಡಲಾಗುತ್ತದೆ. ಮುಂದಿನ ಕೆಲವೇ ದಿನಗಳಲ್ಲಿ ಬಾಡಗ - ಬಾಣಂಗಾಲ, ಮಾಲ್ದಾರೆ ವ್ಯಾಪ್ತಿಯಲ್ಲಿ ೩ ಸಾಕಾನೆಗಳೊಂದಿಗೆ ಅರಣ್ಯ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಆರ್.ಆರ್.ಟಿ. ತಂಡದವರು ಕಾರ್ಯಾಚರಣೆ ನಡೆಸಲಿದ್ದಾರೆ. -ವಾಸು.