ಗೋಣಿಕೊಪ್ಪಲು, ಮೇ ೨೮: ಜಿಲ್ಲೆಯ ಪ್ರಮುಖ ಇಲಾಖೆಗಳಾದ ಅಬಕಾರಿ, ಪೊಲೀಸ್ ಹಾಗೂ ಅರೋಗ್ಯ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಇಂತಹ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಕಠಿಣ ಎಚ್ಚರಿಕೆ ನೀಡಿದರು.
ಗೋಣಿಕೊಪ್ಪದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ನಡೆಸುವ ಅಧಿಕಾರಿಗಳಿಗೆ ಜಿಲ್ಲೆಯಲ್ಲಿ ಜಾಗ ಇಲ್ಲ, ತಕ್ಷಣವೇ ಜಿಲ್ಲೆಯಿಂದ ಹೊರಡಬಹುದು, ಅಂತಹ ಅಧಿಕಾರಿಗಳು ಜಿಲ್ಲೆಗೆ ಅಗತ್ಯವಿಲ್ಲ.
ಈಗಾಗಲೇ ಸಬ್ರಿಜಿಸ್ಟçರ್ ಕಚೇರಿಯಲ್ಲಿ ಅಧಿಕಾರಿ ಲಂಚ ಸ್ವೀಕರಿಸಿದ ವೇಳೆ ಸಿಕ್ಕಿಬಿದ್ದಿದ್ದಾರೆ, ಅಬಕಾರಿ ಇಲಾಖೆಯಲ್ಲಿ ಸುಲಿಗೆ ನಡೆಯುತ್ತಿದೆ, ಇವುಗಳಿಗೆ ಕಡಿವಾಣ ಹಾಕಲಾಗುತ್ತದೆ ಎಂದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುದೀರ್ಘ ಅವಧಿಯ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದು ಕೆಲವು ಇಲಾಖೆ ಹಾಗೂ ಅಧಿಕಾರಿಗಳಿಗೆ ಭ್ರಷ್ಟಾಚಾರ ನಡೆಸಲು ಅನುಕೂಲ ವಾತಾವರಣ ಸೃಷ್ಟಿಯಾಗಿದೆ ಎಂದು ವಿಷಾದಿಸಿದರು.
ವಿಧಾನ ಪರಿಷತ್ಗೆ ನೈರುತ್ಯ ಕ್ಷೇತ್ರದ ಶಿಕ್ಷಕ ಕ್ಷೇತ್ರದಿಂದ ಕೆ.ಕೆ. ಮಂಜುನಾಥ್ ಕುಮಾರ್ ಹಾಗೂ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ.
ಇವರಿಬ್ಬರ ಗೆಲುವು ಬಹಳ ಮುಖ್ಯವಾಗಿದೆ. ಇದರಿಂದ ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯ ನಿರ್ವಹಿಸಲು ಹೆಚ್ಚಿನ ಶಕ್ತಿ ತುಂಬಿದAತಾಗಲಿದೆ ಎಂದರು.
ಈಗಾಗಲೇ ಕಾಂಗ್ರೆಸ್ ಸರ್ಕಾರ ಇವರಿಬ್ಬರ ಗೆಲುವು ಬಹಳ ಮುಖ್ಯವಾಗಿದೆ. ಇದರಿಂದ ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯ ನಿರ್ವಹಿಸಲು ಹೆಚ್ಚಿನ ಶಕ್ತಿ ತುಂಬಿದAತಾಗಲಿದೆ ಎಂದರು.
ಈಗಾಗಲೇ ಕಾಂಗ್ರೆಸ್ ಸರ್ಕಾರ ಶಿಕ್ಷಕರ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಮುಂದೆ ನಾಲ್ಕು ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ಇರುವ ಹಿನ್ನೆಲೆಯಲ್ಲಿ ಶಿಕ್ಷಕರ ಹಾಗೂ ಪದವೀಧರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವಕಾಶ ಆಗಲಿದೆ.
ಕ್ಷೇತ್ರದ ಪ್ರಮುಖ ವಿದ್ಯಾಸಂಸ್ಥೆಗಳಾದ ವೀರಾಜಪೇಟೆಯ ಸಂತ ಅನ್ನಮ್ಮ ಕಾಲೇಜು, ಕಾವೇರಿ ಕಾಲೇಜು, ಸರ್ವೋದಯ ಡಿಎಡ್ ಕಾಲೇಜು, ಅರಮೇರಿ ಪಿ.ಯು. ಕಾಲೇಜು, ಸರ್ಕಾರಿ ಪದವಿ ಕಾಲೇಜು, ಗೋಣಿಕೊಪ್ಪ ಕಾವೇರಿ ಕಾಲೇಜು ಹಾಗೂ ಹಳ್ಳಿಗಟ್ಟುವಿನ ಸಿಐಟಿ ಕಾಲೇಜುಗಳಿಗೆ ಪೊನ್ನಣ್ಣ ಭೇಟಿ ನೀಡಿ ಶಿಕ್ಷಕ ಹಾಗೂ ಪದವೀಧರರ ಬಳಿ ಮತಯಾಚನೆ ನಡೆಸಿದರು.
ಭೇಟಿಯ ವೇಳೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಾಜಿ ಎಂ.ಎಲ್.ಸಿ. ಸಿ.ಎಸ್. ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಪ್ರಮುಖರಾದ ಎ.ವಿ. ಮಂಜುನಾಥ್, ಆಪಟ್ಟೀರ ಟಾಟು ಮೊಣ್ಣಪ್ಪ, ಪಿ.ಕೆ. ಪೊನ್ನಪ್ಪ, ಮಾದಂಡ ತಿಮ್ಮಯ್ಯ, ಕಾಳಮಂಡ ಜಗತ್, ರಾಜೇಶ್ ಪದ್ಮನಾಭ, ಕಡೆಮಾಡ ಕುಸುಮ, ಎಸ್.ಎಚ್. ಮತೀನ್, ಹೆಚ್.ಬಿ. ಗಣೇಶ್, ಕಾಳಮಂಡ ಬೇಬಿ, ಮಂಡೇಟಿರ ಅನಿಲ್, ಪ್ರಮೋದ್ ಗಣಪತಿ, ಮೂಕಳೇರ ಕುಶಾಲಪ್ಪ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.