ಮಡಿಕೇರಿ, ಮೇ ೨೯: ವಿಶ್ವ ಪರಿಸರ ದಿನಾಚರಣೆ-೨೦೨೪ ರ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ, ಕೊಡಗು ವತಿಯಿಂದ ಪರಿಸರ ಸಂರಕ್ಷಣೆ ಕುರಿತು ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯು ನಗರದ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯಲ್ಲಿ ಜೂನ್ ೧ ರಂದು ಬೆಳಿಗ್ಗೆ ೯.೩೦ ಗಂಟೆಗೆ ನಡೆಯಲಿದೆ.

ಡ್ರಾಯಿಂಗ್ ಶೀಟ್ ಮಾತ್ರ ನೀಡಲಾಗುವುದು. ಚಿತ್ರ ಕಲೆಗೆ ಬೇಕಾಗುವ ಬಣ್ಣ ಇನ್ನಿತರೆ ವಸ್ತುಗಳನ್ನು ವಿದ್ಯಾರ್ಥಿಗಳೇ ತರಬೇಕು. ಈ ವರ್ಷದ ಘೋಷಣ ವಾಕ್ಯವು “ಭೂ ಮರುಸ್ಥಾಪನೆ, ಮರುಭೂಮೀಕರಣ ಹಾಗೂ ಬರ ತಡೆಯುವಿಕೆ” ಆಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ಸ್ಥಳದಲ್ಲಿಯೇ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಎಂ.ಜಿ. ರಘುರಾಮ್, ಪರಿಸರ ಅಧಿಕಾರಿಗಳು, ೯೮೪೫೦೨೬೩೪೮, ಆಸ್ಟಿನ್ ಕೆ.ಎ. ಯೋಜನಾ ಸಹಾಯಕರನ್ನು ೭೭೬೦೭೩೮೪೪೭ (ಕಚೇರಿ: ೦೮೨೭೨-೨೨೧೮೫೫) ಹಾಗೂ ಸ್ಥಳೀಯ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿ.ಇ.ಓ) ಸಂಪರ್ಕಿಸಬಹುದು ಎಂದು ಕೊಡಗು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ತಿಳಿಸಿದ್ದಾರೆ.