ಮಡಿಕೇರಿ, ಮೇ ೨೯: ಎರಡು ತಿಂಗಳ ಸುದೀರ್ಘ ಬೇಸಿಗೆ ರಜೆಯ ನಂತರ ಜಿಲ್ಲೆಯ ವಿದ್ಯಾದೇಗುಲಗಳ ಬಾಗಿಲು ತೆರೆದಿದ್ದು, ಶೈಕ್ಷಣಿಕ ಚಟುವಟಿಕೆಗಳು ಗರಿಗೆದರಿ ದಂತಾಗಿದೆ. ಮೊದಲ ದಿನ ಸರಕಾರಿ ಶಾಲೆಗಳ ಸಿದ್ಧತೆಗಳಲ್ಲಿ ಶಿಕ್ಷಕರು ಹಾಗೂ ಸಿಬ್ಬಂದಿ ತೊಡಗಿಸಿ ಕೊಂಡರು. ಕೆಲವೆಡೆ ವಿದ್ಯಾರ್ಥಿಗಳೂ ಸ್ವಯಂ ಪ್ರೇರಿತವಾಗಿ ಆಗಮಿಸಿ ಕೈಜೋಡಿಸಿದರು.

ಸರಕಾರಿ, ಅನುದಾನಿತ, ಅನುದಾನ ರಹಿತ, ಖಾಸಗಿ ಶಾಲೆಗಳು, ಕೇಂದ್ರಿಯ ವಿದ್ಯಾಲಯ, ಜವಾಹರ್ ನವೋದಯ, ಸಮಾಜ ಕಲ್ಯಾಣ, ಸೈನಿಕ ಶಾಲೆ, ಗಿರಿಜನ ಶಾಲೆ, ಸ್ಥಳೀಯ ಸಂಸ್ಥೆ ಶಾಲೆ ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ ೬೨೩ ಶಾಲೆಗಳಿವೆ. ಈ ಪೈಕಿ ಮಡಿಕೇರಿ ತಾಲೂಕಿನಲ್ಲಿ ೧೮೫, ಸೋಮವಾರಪೇಟೆ ತಾಲೂಕಿನಲ್ಲಿ ೨೩೦ ಹಾಗೂ ವೀರಾಜಪೇಟೆ ತಾಲೂಕಿನಲ್ಲಿ ೨೦೮ ಶಾಲೆಗಳಿವೆ.

ಶಾಲಾ ಆವರಣ, ಕೊಠಡಿ ಹಾಗೂ ಶೌಚಾಲಯ ಸ್ವಚ್ಚತೆ, ಕುಡಿಯುವ ನೀರು, ಸಂಪು, ಟ್ಯಾಂಕ್ ಸ್ವಚ್ಚತೆ, ಅಡುಗೆ ಮನೆ ಪಾತ್ರೆಗಳು, ಆಹಾರ ಧಾನ್ಯಗಳ ವ್ಯವಸ್ಥೆ, ಶಾಲಾ ವೇಳಾಪಟ್ಟಿ, ತರಗತಿ ವೇಳಾಪಟ್ಟಿ, ಶಿಕ್ಷಕರಿಗೆ ವಿಷಯ ಮತ್ತು ತರಗತಿ ಹಂಚಿಕೆ ಮತ್ತಿತರ ಕಾರ್ಯಗಳು ನಡೆದವು. ೩೧ ರಿಂದ ವಿದ್ಯಾರ್ಥಿಗಳಿಗೆ ಶಾಲೆ ಆರಂಭಗೊಳ್ಳಲಿದ್ದರೂ ಕೆಲ ವಿದ್ಯಾರ್ಥಿಗಳು ಬುಧವಾರದಂದೆ ಉತ್ಸಾಹದಿಂದ ಆಗಮಿಸಿ ಪೂರ್ವ ಸಿದ್ಧತೆಯಲ್ಲಿ ಕೈಜೋಡಿಸಿದ್ದು ಕಂಡುಬAತು. ಜಿಲ್ಲೆಯ ಖಾಸಗಿ ಶಾಲೆಗಳು ಬುಧವಾರದಂದೆ ಆರಂಭಗೊAಡಿದ್ದು, ವಿದ್ಯಾರ್ಥಿಗಳನ್ನು ಸಂಭ್ರಮದಿAದ ಶಿಕ್ಷಕರು, ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯವರು ಬರಮಾಡಿಕೊಂಡಿದ್ದಾರೆ.

ತಾ. ೩೦ ರಂದು (ಇಂದು) ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಪೋಷಕರ ಜೊತೆ ಪೂರ್ವಭಾವಿ ಸಭೆಯು ಆಯಾಯ ಶಾಲೆಗಳಲ್ಲಿ ನಡೆಯಲಿದೆ. ತಾ. ೩೧ ರಿಂದ ಅಧಿಕೃತವಾಗಿ ಶಾಲೆಗಳ ಪ್ರಾರಂಭೋತ್ಸವ ನಡೆಯಲಿದೆ. ಅಂದು ಶಾಲೆಗಳಿಗೆ ತಳಿರು ತೋರಣ ಕಟ್ಟಿ, ಗುಲಾಬಿ ಹೂವು ನೀಡಿ, ಸಿಹಿ ಹಂಚುವ ಮೂಲಕ ಮಕ್ಕಳನ್ನು ಬರಮಾಡಿಕೊಳ್ಳಲಾಗುತ್ತದೆ. ಹಾಗೆಯೇ ಪಠ್ಯಪುಸ್ತಕ ಹಾಗೂ ಸಮವಸ್ತç ವಿತರಣೆ ಮಾಡಲಾಗುತ್ತದೆ. ಪಾಠ ಪ್ರವಚನ ಪ್ರಾರಂಭಿಸಿ ಬಿಸಿಯೂಟದೊಂದಿಗೆ ಕಾರ್ಯಕ್ರಮ ಶುರುವಾಗಲಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಹಾಗೂ ನೋಡಲ್ ಅಧಿಕಾರಿ ಎಂ.ಮಹದೇವಸ್ವಾಮಿ ತಿಳಿಸಿದ್ದಾರೆ.

ಜೂ.೧ ರಿಂದ ಪಿಯು

ಕಾಲೇಜು ಆರಂಭ

ಜೂನ್ ೧ ರಿಂದ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜುಗಳ ಕಾರ್ಯಚಟುವಟಿಕೆ ಆರಂಭ ಗೊಳ್ಳಲಿದೆ. ಅನುದಾನಿತ, ಅನುದಾನ ರಹಿತ ಹಾಗೂ ಖಾಸಗಿ ಸೇರಿ ಒಟ್ಟು ೬೫ ಪಿಯು ಕಾಲೇಜುಗಳು ಜಿಲ್ಲೆಯಲ್ಲಿವೆ. ಈಗಾಗಲೇ ಪ್ರವೇಶಾತಿ ಆರಂಭಗೊAಡಿದ್ದು, ತಾ. ೧೫ ರ ತನಕ ಮುಂದುವರೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟರಾಜು ಮಾಹಿತಿ ನೀಡಿದ್ದಾರೆ.

ಮುಳ್ಳೂರು: ಕಳೆದ ೨ ತಿಂಗಳು ಶಾಲೆಗೆ ಬೇಸಿಗೆ ರಜೆ ಇದ್ದರಿಂದ ಶಾಲಾ ಮಕ್ಕಳು ಬೇಸಿಗೆ ರಜೆಯನ್ನು ಸವಿದಿದ್ದರು. ಇದೀಗ ೨೦೨೪-೨೫ನೇ ಸಾಲಿನ ಶಾಲಾ ಶೈಕ್ಷಣಿಕ ಪ್ರಾರಂಭಗೊAಡಿರುವ ಹಿನ್ನೆಲೆಯಲ್ಲಿ ಮತ್ತು ಶಾಲಾ ಪ್ರಾರಂಭೋತ್ಸವ ಮೇ ೩೧ ರಿಂದ

(ಮೊದಲ ಪುಟದಿಂದ) ಪ್ರಾರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ಶನಿವಾರಸಂತೆ ವ್ಯಾಪ್ತಿಯ ವಿವಿಧ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಿರುಸಿನಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಶನಿವಾರಸಂತೆ ಪಟ್ಟಣದ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ತ್ಯಾಗರಾಜ ಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಿಡ್ತ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಆಲೂರು-ಸಿದ್ದಾಪುರ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಅಂಕನಹಳ್ಳಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇನ್ನು ಮುಂತಾದ ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವು ಬಿರುಸುನಿಂದ ನಡೆಯುತ್ತಿದೆ ಶಾಲೆಯ ಶಿಕ್ಷಕಿಯರು, ಶಿಕ್ಷಕರು, ಕೆಲವು ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಶಾಲಾ ಸಿಬ್ಬಂದಿ ಜೊತೆಗೂಡಿ ಶಾಲಾ ತರಗತಿಯ ಕೊಠಡಿ, ಶಾಲಾ ಆವರಣ, ಶಾಲಾ ಸಭಾಂಗಣ, ಶಾಲಾ ಅಡುಗೆ ಕೊಠಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ.