ಸಿದ್ದಾಪುರ, ಮೇ ೨೯: ಅಮ್ಮತ್ತಿಯ ಆರ್‌ಐಎಚ್‌ಪಿ ಆಸ್ಪತ್ರೆ ಹಾಗೂ ಸಿದ್ದಾಪುರದ ಸಂಜೀವಿನಿ ಮಹಿಳಾ ಒಕ್ಕೂಟದ ಜಂಟಿ ಆಶ್ರಯದಲ್ಲಿ ಸಾರ್ವಜನಿಕರಿಗೆ ತಾ. ೩೦ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಸಿದ್ದಾಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಶಿಬಿರದಲ್ಲಿ ತಜ್ಞ ವೈದ್ಯರು ಸೇರಿದಂತೆ ವಿವಿಧ ವೈದ್ಯರುಗಳು ತಪಾಸಣೆ ಮಾಡಲಿದ್ದು, ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.