ಕುಶಾಲನಗರ, ಮೇ ೩೦: ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಪ್ರಯುಕ್ತ ಕೊಡಗು ವಿಶ್ವವಿದ್ಯಾಲಯ ಆವರಣದಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ತಾ. ೩೧ ರಂದು (ಇಂದು) ನಡೆಯಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ವಿಶ್ವವಿದ್ಯಾಲಯ ಸಹಯೋಗದೊಂದಿಗೆ ಬೆಳಗ್ಗೆ ೧೦.೩೦ ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಉದ್ಘಾಟಿಸುವರು.
ಕುಲಸಚಿವ ಸೀನಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಫಾಯಸ್ ಪಾಲ್ಗೊಳ್ಳಲಿದ್ದಾರೆ.
ಅತಿಥಿಗಳಾಗಿ ವೇದಿಕೆಯ ಜಿಲ್ಲಾಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್, ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ, ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಚಂದ್ರಮೋಹನ್ ಉಪಸ್ಥಿತರಿರುವರು.