ಮಡಿಕೇರಿ, ಮೇ ೩೧: ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆಯು ೨೦೨೪-೨೫ನೇ ಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶಕ್ಕೆ ಕನಿಷ್ಟ ವಿದ್ಯಾರ್ಹತೆ ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ಪದವೀಧರರಿಗೆ ಆದ್ಯತೆ ಇದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದ್ದು, ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ- ವಸತಿ ವ್ಯವಸ್ಥೆ ದೊರೆಯುತ್ತದೆ. ಕರ್ನಾಟಕ ಹಾಗೂ ಭಾರತದ ರಂಗ ತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥ ಭಂಡಾರ ಹಾಗೂ ದೃಶ್ಯ ಶ್ರವ್ಯ ಪರಿಕರಗಳ ಅನುಕೂಲತೆ ಇದೆ. ರಂಗಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಚಾರ್ಯ, ಶಿಕ್ಷಣದಲ್ಲಿ ರಂಗಭೂಮಿ, ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತದೆ.
ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇಹಳ್ಳಿ-೫೭೭-೫೧೫, ಹೊಸದುರ್ಗ ತಾಲೂಕು, ಚಿತ್ರದುರ್ಗ ಜಿಲ್ಲೆ ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿ ತರಿಸಿಕೊಳ್ಳಬಹುದು ಅಥವಾ ರಂಗ ಶಾಲೆಯ ವೆಬ್ಸೈಟ್ ತಿತಿತಿ.ಣheಚಿಣಡಿesಛಿhooಟsಚಿಟಿehಚಿಟಟi.oಡಿg ನಲ್ಲಿ ಪ್ರವೇಶ ಅರ್ಜಿ ಡೌನ್ಲೋಡ್ ಮಾಡಿ ಜೂನ್ ೨೫ ರೊಳಗೆ ರಂಗಶಾಲೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. ೯೪೪೮೩೯೮೧೪೪, ೮೮೬೧೦೪೩೫೫೩, ೯೪೮೨೯೪೨೩೯೪, ೯೯೭೨೦೦೭೦೧೫ ನ್ನು ಸಂಪರ್ಕಿಸಬಹುದು ಎಂದು ಹೊಸದುರ್ಗ ತಾಲೂಕು ಸಾಣೇಹಳ್ಳಿ ಶಿವಕುಮಾರ ರಂಗ ಪ್ರಯೋಗ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.