ಮಡಿಕೇರಿ, ಮೇ ೩೧: ಬೇಸಿಗೆ ರಜೆ ಮುಗಿದು ಶಾಲೆಗಳು ಆರಂಭಗೊAಡಿದ್ದು, ಮೊದಲ ದಿನ ವಿದ್ಯಾರ್ಥಿಗಳನ್ನು ಆತ್ಮೀಯತೆಯಿಂದ ಸ್ವಾಗತಿಸಲಾಯಿತು. ಕೂಡ್ಲೂರು ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಶಿಕ್ಷಕರು ಎತ್ತಿನಗಾಡಿ ಮೂಲಕ ಕರೆತಂದು ಗಮನ ಸೆಳೆದರು. ಮುಳ್ಳೂರು ಸರ್ಕಾರಿ ಶಾಲೆಯಲ್ಲಿಯೂ ವಿದ್ಯಾರ್ಥಿಗಳನ್ನು ‘ರೆಡ್ ಕಾರ್ಪೆಟ್’ ಮೂಲಕ ಸ್ವಾಗತಿಸಿ ವಿಶಿಷ್ಟವಾಗಿ ಬರಮಾಡಿಕೊಳ್ಳಲಾಯಿತು. ಜಿಲ್ಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಯಶಸ್ವಿಯಾಗಿ ನಡೆಯಿತು. ಉತ್ಸಾಹದಿಂದ ಮೊದಲ ದಿನ ವಿದ್ಯಾರ್ಥಿಗಳು ಶಾಲೆಗೆ ಪದಾರ್ಪಣೆ ಮಾಡಿದರು.
ಕೂಡಿಗೆ : ಕೂಡ್ಲೂರು ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ಉಭಯ ಶಾಲೆಗಳ ಮಕ್ಕಳು ವಿನೂತನ ರೀತಿಯಲ್ಲಿ ಶಾಲೆಗೆ ಆಗಮಿಸಿದ್ದು, ಗ್ರಾಮಸ್ಥರ ಗಮನ ಸೆಳೆಯಿತು. ಗ್ರಾಮಸ್ಥರು ಮಕ್ಕಳ ಸಂಭ್ರಮಕ್ಕೆ ಸಾಕ್ಷಿಯಾದರು.
ಶಾಲಾ ಪ್ರಾರಂಭೋತ್ಸವದ ಮೊದಲ ದಿನ ಶುಕ್ರವಾರ ಕೂಡ್ಲೂರು ಗ್ರಾಮದಲ್ಲಿ ಉಭಯ ಶಾಲೆಯ ವತಿಯಿಂದ ಜಂಟಿಯಾಗಿ ಏರ್ಪಡಿಸಿದ್ದ ಎತ್ತಿನ ಗಾಡಿಯ ಮೆರವಣಿಗೆ ಮೂಲಕ ಶಾಲೆಗೆ ಆಗಮಿಸಿದ ಮಕ್ಕಳಿಗೆ ಶಿಕ್ಷಕರು ಹೂವು ಹಾಗೂ ಸಿಹಿ ವಿತರಿಸಿ ಸ್ವಾಗತಿಸಿ ಶಾಲೆಗೆ ಬರಮಾಡಿಕೊಂಡರು.
ಜಾನಪದ ಸಂಸ್ಕೃತಿಯ ಪ್ರತೀಕವಾದ ಎತ್ತಿನ ಗಾಡಿಯನ್ನು ಏರಿದ ಮಕ್ಕಳು ಸರ್ಕಾರಿ ಶಾಲೆಗೆ ಹೋಗೋಣ ಬನ್ನಿ, ಸರ್ಕಾರಿ ಶಾಲೆ ನಮ್ಮ ಹೆಮ್ಮೆ, ಸರ್ಕಾರಿ ಶಾಲೆ ನಮ್ಮೂರ ಶಾಲೆ, ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸೋಣ ಬನ್ನಿ, 'ಶಿಕ್ಷಣವೇ ಶಕ್ತಿ' ಎಂಬಿತ್ಯಾದಿ ಘೋಷಣೆಗಳ ಫಲಕಗಳನ್ನು ಹಿಡಿದು ಎತ್ತಿನ ಗಾಡಿಯ ಮೂಲಕ ಸಂಭ್ರಮದಿAದ ಶಾಲೆಗೆ ಆಗಮಿಸಿದರು.
ಗ್ರಾಮದ ಬಸವೇಶ್ವರ ದೇವಸ್ಥಾನ ಬಳಿಯ ಮುಖ್ಯರಸ್ತೆ ಬಳಿಯಿಂದ ಆರಂಭಗೊAಡ ಮಕ್ಕಳ ಎತ್ತಿನ ಗಾಡಿಗೆ ಚಾಲನೆ ನೀಡಲಾಯಿತು.
ಮಕ್ಕಳು ಏರಿದ ಅಲಂಕೃತ ಎತ್ತಿನ ಗಾಡಿಯನ್ನು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಮುನ್ನಡೆಸಿದರು. ಗ್ರಾಮದ ಕೃಷಿಕ ಕೆ.ಆರ್. ನಾಗರಾಜ್ ಅವರ ಎತ್ತಿನ ಗಾಡಿಯಲ್ಲಿ ಸಾಗಿದ ಮಕ್ಕಳಿಗೆ ದಾರಿ ಮಧ್ಯೆ ಮಹಿಳೆಯರು ಆರತಿ ಬೆಳಗಿಸಿ ಸ್ವಾಗತಿಸಿದರು.
ಎತ್ತಿನ ಗಾಡಿಯಲ್ಲಿ ಶಾಲೆಗೆ ಬಂದ ಮಕ್ಕಳಿಗೆ ಶಿಕ್ಷಕಿಯರು ಸಾಂಪ್ರದಾಯಿಕ ಆರತಿ ಬೆಳಗಿಸಿದರು.
ಪ್ರೌಢಶಾಲಾ ಅಂಗಳಕ್ಕೆ ಎತ್ತಿನ ಗಾಡಿಯ ಮೂಲಕ ಆಗಮಿಸಿದ ಮಕ್ಕಳಿಗೆ ಶಿಕ್ಷಕ ವೃಂದ ಹೂವು, ಸಿಹಿ ಹಾಗೂ ಪುಸ್ತಕ ನೀಡುವ ಮೂಲಕ ಸ್ವಾಗತಿಸಿದರು.
ಎಸ್ಡಿಎಂಸಿ ಮಾಜಿ ಸದಸ್ಯ ಎಂ.ನಾಗರಾಜ್ ಹಾಗೂ ದಾನಿ ಕೆ.ಎನ್.ಸೋಮಶೇಖರ್ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತç ವಿತರಿಸಿದರು. ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನAದ ಪ್ರಕಾಶ್, ಬಿ.ಎನ್.ಸುಜಾತ, ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಬಿ.ಎಸ್.ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ಪೋಷಕರು ಇದ್ದರು.
ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನ ಸಿಹಿಯೊಂದಿಗೆ ಬಿಸಿಯೂಟ ವಿತರಿಸಲಾಯಿತು. ಮಕ್ಕಳು ಶಾಲಾ ಪ್ರಾರಂಭೋತ್ಸವದಲ್ಲಿ ಸಂಭ್ರಮಿಸಿದರು.
ಸಮುದಾಯ ಭಾಗವಹಿಸುವಿಕೆ ಎತ್ತಿನ ಗಾಡಿ ಮೆರವಣಿಗೆಗೆ ಚಾಲನೆ ನೀಡುವ ಸಂದರ್ಭದಲ್ಲಿ ಗ್ರಾಮದ ಸಮುದಾಯದೊಂದಿಗೆ ಪ್ರೌಢಶಾಲಾ ಎಸ್ಡಿಎಂಸಿ ಮಾಜಿ ಅಧ್ಯಕ್ಷ ಕೆ.ಕೆ.ಭೋಗಪ್ಪ, ಪ್ರಾಥಮಿಕ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಗಿರಿಪ್ರಸಾದ್, ಉಪಾಧ್ಯಕ್ಷೆ ಶಾಹಿದಾ, ಸದಸ್ಯೆ ಸುಮತಿ, ಮುಖ್ಯ ಶಿಕ್ಷಕಿ ಎಚ್.ಎಂ.ಸುಜಾತ, ಶಿಕ್ಷಕರು, ವಿದ್ಯಾರ್ಥಿಗಳು, ದೇವಾಲಯ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.
ಮಡಿಕೇರಿ: ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರಾರಂಭೋತ್ಸವ ಶುಕ್ರವಾರ ನಡೆದಿದೆ. ಶಾಲೆಗಳಲ್ಲಿ ತಳಿರು ತೋರಣ ಕಟ್ಟಿ, ಗುಲಾಬಿ ಹೂವು ನೀಡಿ ವಿದ್ಯಾರ್ಥಿಗಳನ್ನು ಬರಮಾಡಿ ಕೊಳ್ಳಲಾಯಿತು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಎಂ. ಚಂದ್ರಕಾAತ್ ಅವರು ಬೋಯಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತç ವಿತರಿಸಿದರು.
ಶಾಲಾ ಆವರಣ, ಶಾಲಾ ಕೊಠಡಿ ಹಾಗೂ ಶೌಚಾಲಯ ಸ್ವಚ್ಛತೆ, ಸಂಪು, ಟ್ಯಾಂಕ್ ಸ್ವಚ್ಛತೆ, ಅಡುಗೆ ಮನೆಯಲ್ಲಿ ಶುಚಿತ್ವ ಕಾಪಾಡುವುದು, ಆಹಾರ ಧಾನ್ಯಗಳ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಶಾಲೆ ಆರಂಭವಾದ ಶುಕ್ರವಾರ ಮಧ್ಯಾಹ್ನ ಬಿಸಿಯೂಟದಲ್ಲಿ ಪಾಯಸ ಬಡಿಸುವ ಮೂಲಕ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿಗದಿಪಡಿಸಿರುವ ವೇಳಾಪಟ್ಟಿಯಂತೆ ತರಗತಿಗಳು ನಡೆಯಲಿವೆ. ಸೇತುಬಂಧ ಚಟುವಟಿಕೆ ಮತ್ತು ಮೂಲ ಕಲಿಕಾಂಶ ಆಧಾರಿತ ಕಲಿಕೆಯನ್ನು ಅನುಷ್ಠಾನಗೊಳಿಸಿ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನವನ್ನು ಅಭಿವೃದ್ಧಿ ಪಡಿಸಿ ಕಲಿಕಾ ಅಂತರವನ್ನು ನೀಗಿಸಲು ಸಲಹೆ ನೀಡಿದರು.
ಹಾಗೆಯೇ ಶಿಕ್ಷಕರಿಗೆ ಶೈಕ್ಷಣಿಕ ಮಾರ್ಗದರ್ಶಿಯಂತೆ ಪಾಠ ಪ್ರವಚನ ಹಾಗೂ ಇತರೆ ಶೈಕ್ಷಣಿಕ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಹೇಳಿದರು.
ಜೂನ್ ೧ ರಿಂದ ೧೫ ರವರೆಗೆ ಶಾಲಾ ದಾಖಲಾತಿ ಆಂದೋಲನ ನಡೆಯಲಿದ್ದು, ಅರ್ಹ ಮಕ್ಕಳು ಶಾಲೆಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಮನೆ ಮನೆಗೆ ಭೇಟಿ ನೀಡಿ, ಶಾಲೆಗೆ ಮಕ್ಕಳನ್ನು ಸೇರಿಸುವಲ್ಲಿ ಶಾಲಾ ದಾಖಲಾತಿ ಆಂದೋಲನ ನಡೆಯಲಿದೆ ಎಂದು ಇದೇ ಸಂದರ್ಭ ತಿಳಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಎಂ.ಮಹದೇವಸ್ವಾಮಿ ಅವರು ಕುಶಾಲನಗರ ಸರ್ಕಾರಿ ಪ್ರೌಢಶಾಲೆ ಸೇರಿದಂತೆ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಶಾಲಾ ಪ್ರಾರಂಭೋತ್ಸವದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಒಟ್ಟು ೪೭೯ ಪ್ರಾಥಮಿಕ ಶಾಲೆಗಳು ಮತ್ತು ೧೭೧ ಪ್ರೌಢಶಾಲೆಗಳು ಇವೆ ಎಂದು ಮಹದೇವಸ್ವಾಮಿ ಮಾಹಿತಿ ನೀಡಿದರು.
ಮುಳ್ಳೂರು: ಕ್ರಿಯಾಶೀಲತೆಗೆ ಹೆಸರುವಾಸಿಯಾದ ಸಮಿಪದ ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಡಗರ ಸಂಭ್ರಮದೊAದಿಗೆ ವಿಭಿನ್ನವಾಗಿ ಆಚರಿಸಲಾಯಿತು. ಇಡೀ ಶಾಲೆಯನ್ನು ಬಾಳೆ ಕಂಬ, ತೆಂಗಿನ ಗರಿ, ಹೂವು, ಮಾವಿನ ಎಲೆ, ಹೀಗೆ ನೈಸರ್ಗಿಕವಾಗಿ ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳನ್ನು ರೆಡ್ ಕಾರ್ಪೆಟ್ ಮೂಲಕ ಸ್ವಾಗತಿಸಲಾಯಿತು. ಆಗಮಿಸಿದ ವಿದ್ಯಾರ್ಥಿಗಳಿಗೆ ಬಣ್ಣಬಣ್ಣದ ಕಿರೀಟಗಳನ್ನು ಮುಡಿಗೇರಿಸಿ ಹೂಗುಚ್ಛ ಕೈಗಿರಿಸಿ ‘ವೆಲ್ಕಮ್ ಬ್ಯಾಕ್ ಬ್ಯಾಡ್ಜ್’ ಅನ್ನು ಎದೆಗೇರಿಸಿ ಮತ್ತು ಸಿಹಿ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಶಾಲಾ ಆವರಣದಲ್ಲಿ ನಿರ್ಮಿಸಲಾದ ೧೫ ಅಡಿ ಎತ್ತರದ ಅಕ್ಷರ ತೇರಿನ ತಳಭಾಗದಲ್ಲಿ ವಿದ್ಯಾರ್ಥಿಗಳಿಗೆ ‘ಮೈ ಫಸ್ಟ್ ಡೇ ಆಫ್ ಸ್ಕೂಲ್’ ಎಂಬ ಸ್ಲೋಗನ್ ಇರಿಸಿದ ಫೋಟೋ ಬೂತ್ನಲ್ಲಿ ವಿದ್ಯಾರ್ಥಿಗಳು ಫೋಟೋ ಕ್ಲಿಕ್ಕಿಸಿ ಸಂಭ್ರಮಪಟ್ಟರು. ಈ ಸಂದರ್ಭ ವಿದ್ಯಾರ್ಥಿಗಳು ತಮ್ಮ ರಜೆಯ ಅನುಭವಗಳನ್ನು ಹಂಚಿಕೊAಡರು.
ಶಾಲಾ ಮುಖ್ಯ ಶಿಕ್ಷಕ ಸಿ.ಎಸ್.ಸತೀಶ್, ಸಹ ಶಿಕ್ಷಕ ಮಂಜುನಾಥ್, ಪೋಷಕರಾದ ಪವಿತ್ರ, ಜಯ, ಅಡುಗೆ ಸಿಬ್ಬಂದಿ ಸ್ವಾತಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಅಕ್ಷರ ತೇರಿನಲ್ಲಿ ಕುಳ್ಳಿರಿಸಿ ತೇರನ್ನು ಎಳೆಯಲಾಯಿತು. ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿಯೂಟ ನೀಡಲಾಯಿತು ಈ ಮೂಲಕ ಮುಳ್ಳೂರು ಶಾಲಾ ಪ್ರಾರಂಭೋತ್ಸವವನ್ನು ವಿಭಿನ್ನವಾಗಿ ಆಚರಿಸಿದರು.ಶನಿವಾರಸಂತೆ ಸಮೀಪದ ಕೊಡ್ಲಿಪೇಟೆಯ ಸೆಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ಶೈಕ್ಷಣಿಕ ವರ್ಷದ ಮೊದಲ ದಿನವನ್ನು ಸಂಭ್ರಮ-ಸಡಗರದಿAದ ಆಚರಿಸಲಾಯಿತು. ಬೇಸಿಗೆ ರಜೆ ಕಳೆದು ಮೊದಲ ದಿನ ಉತ್ಸಾಹದಿಂದ ಶಾಲೆಗೆ ಹಾಜರಾದ ಮಕ್ಕಳ ಮೊಗದಲ್ಲಿ ಮಂದಹಾಸ ಮಿನುಗುತ್ತಿತ್ತು. ಶಾಲಾ ಪ್ರಾರಂಭೋತ್ಸವದ ಹಿನೆÀ್ನಲೆ ಶಾಲೆಯನ್ನು ಸುಂದರವಾಗಿ ಅಲಂಕರಿಸಿದ್ದು, ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಳ್ಳಲಾಯಿತು. ಶಿಕ್ಷಕರು ಪ್ರತಿ ಮಗುವಿಗೂ ಗುಲಾಬಿ ಹೂವು ನೀಡಿ ಜೊತೆಗೆ ಸಿಹಿ ಹಂಚಿದರು. ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಸಂಗೀತಾ ದೊಡ್ಡಮನಿ ಜ್ಯೋತಿ ಬೆಳಗಿಸಿ ಶುಭ ಹಾರೈಸಿದರು. ವಿದ್ಯಾಸಂಸ್ಥೆ ವ್ಯವಸ್ಥಾಪಕಿ ಸಿಸ್ಟರ್ ಲೂಸಿ ಜೋಸೆಫ್, ಸಿಸ್ಟರ್ ರೆಜಿ, ಸಿಸ್ಟರ್ ಎಲಿಜಬೆತ್, ಸಹಶಿಕ್ಷಕಿಯರು ಹಾಗೂ ಸಿಬ್ಬಂದಿ ಹಾಜರಿದ್ದರು.
ಶನಿವಾರಸಂತೆ: ಪಟ್ಟಣದ ತ್ಯಾಗರಾಜ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೪-೨೫ ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಆರಂಭೋತ್ಸವದ ಪ್ರಯುಕ್ತ ಶಾಲಾ ಆವರಣವನ್ನು ಸ್ವಚ್ಛಗೊಳಿಸಿ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಉತ್ಸಾಹದಿಂದ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಸೋಮವಾರಪೇಟೆ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಗೋವಿಂದೇಗೌಡ ಪುಷ್ಪಗುಚ್ಛ ನೀಡಿ ಸ್ವಾಗತಿಸಿ, ಸಿಹಿ ವಿತರಿಸಿದರು. ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್, ಮಕ್ಕಳಿಗೆ ಹಿತವಚನ ನೀಡಿದರು. ಮುಖ್ಯ ಶಿಕ್ಷಕ ಪುಟ್ಟಸ್ವಾಮಿ, ಸಹ ಶಿಕ್ಷಕರು ಹಾಜರಿದ್ದರು.
ಚೆಟ್ಟಳ್ಳಿ : ಇಲ್ಲಿನ ಪ್ರೌಢಶಾಲೆಯಲ್ಲಿ ೨೦೨೪-೨೫ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಶಾಲೆಯಲ್ಲಿ ತಳಿರು ತೋರಣಗಳಿಂದ ಸಿಂಗರಿಸಿ ಶಾಲಾ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಪಠ್ಯ ಪುಸ್ತಕಗಳನ್ನು ಶಾಲಾ ಆಡಳಿತ ಮಂಡಳಿಯ ಸಂಚಾಲಕ ಮುಳ್ಳಂಡ ರತ್ತುಚಂಗಪ್ಪ ವಿದ್ಯಾರ್ಥಿಗಳಿಗೆ ವಿತರಿಸಿದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯಿನಿ ತಿಲಕ ಸೇರಿದಂತ ಶಿಕ್ಷಕ ವೃಂದ ಹಾಜರಿತ್ತು.